ಕೋರೆಗಾಂವ ಹಿಂಸಾಚಾರ ಖಂಡಿಸಿ ಮೆರವಣಿಗ
Team Udayavani, Jan 9, 2018, 10:06 AM IST
ಕಲಬುರಗಿ: ಪುಣೆಯ ಭೀಮಾ ಕೋರೆಗಾಂವ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಹಿಂದೂ ಏಕತಾ ಆಘಾಡಿ ಪ್ರಮುಖರನ್ನು
ಬಂಧಿಸಬೇಕು ಹಾಗೂ ಹಿಂದೂ ಪರ ಸಂಘಟನೆಗಳನ್ನು ನಿಷೇಧಿಸಬೇಕೆಂಬ ಬೇಡಿಕೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಒಕ್ಕೂಟದ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿ, ಜಿಗ್ನೇಶ ಮೇವಾನಿ ಮತ್ತಿತರರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಬೇಷರತ್ತಾಗಿ ಹಿಂದೆ ಪಡೆಯಬೇಕು. ಕೋರೆಗಾಂವ ಹಿಂಸಾಚಾರ ತಡೆಯಲು ವಿಫಲರಾದ ಜಿಲ್ಲಾಧಿಕಾರಿ ಹಾಗೂ ಎಸ್‌ಪಿ ಅವರನ್ನು ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿದರು.
ಹಿಂದೂ ಪರ ಕೋಮುವಾದಿ ಸಂಘಟನೆಗಳನ್ನು ನಿಷೇಧಿಸುವಂತೆ ಹಾಗೂ ಮಹಾರಾಷ್ಟ್ರದ ದಲಿತ ಸಮುದಾಯಕ್ಕೆ ಸೂಕ್ತ ರಕ್ಷಣೆ ನೀಡಬೇಕೆಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಡಾ| ಮಲ್ಲೇಶ ಸಜ್ಜನ, ಮರೆಪ್ಪ ಹಳ್ಳಿ, ಶಿವಯೋಗಿ ಕೊಲ್ಲೂರ, ಅರ್ಜುನ ಭದ್ರೆ, ಮಲ್ಲಿಕಾರ್ಜುನ ಕ್ರಾಂತಿ, ಮಹಾಂತೇಶ ಬಡದಾಳ, ಶಿವಶರಣಪ್ಪ ಕುರನಳ್ಳಿ, ಶಾಮರಾವ ಹರಸೂರ, ಶ್ರೀನಿವಾಸ ಖೇಳಗಿ, ಸಂಜು ಮಾಲೆ, ಶಿವಾನಂದ ಸಾವಳಗಿ, ಮಲ್ಲಿಕಾರ್ಜುನ ಖನ್ನಾ, ಮರೆಪ್ಪ ಮೇತ್ರೆ, ಸಂತೋಷ ತೆಗನೂರ, ಬಸವಂತರಾವ ಕೋವಿ,
ಪಾಂಡುರಂಗ ಕೊಟ್ರೆ, ನಾಮದೇವ ಬಬಲಾದಕರ, ಶರಣಬಸಪ್ಪ ಹೇರೂರ, ಶಿವಶಂಕರ ಖೇಳಗಿ ಹಾಗು ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Yakshagana; ಕಟೀಲು ದೇಗುಲದ ಆರು ಮೇಳಗಳ ತಿರುಗಾಟ ಆರಂಭ
Winter session: ವರ್ಷದ ಕೊನೆಯ ಸಂಸತ್ ಅಧಿವೇಶನ ಫಲಪ್ರದವಾಗಲಿ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.