ಬಡಾವಣೆಗಳ ಆಧುನಿಕ ಅಭಿವೃದ್ಧಿಗೆ ಒತ್ತು
Team Udayavani, Jan 9, 2018, 12:31 PM IST
ಕೆಂಗೇರಿ: ಹಲವಾರು ವರ್ಷಗಳಿಂದ ಮೂಲ ಸೌಲಭ್ಯಗಳಿಂದ ವಂಚಿತವಾಗಿದ್ದ ಬಡಾವಣೆಗಳನ್ನು ಆಧುನಿಕ ರೀತಿಯಲ್ಲಿ ಅಭಿವೃದ್ಧಿಪಡಿಸಿ ಎಲ್ಲ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ಶಾಸಕ ಎಸ್.ಟಿ.ಸೋಮಶೇಖರ್ ಹೇಳಿದರು.
ಹೇರೋಹಳ್ಳಿ ವಾರ್ಡ್ನ ಬಿಇಎಲ್ ಬಡಾವಣೆಯಲ್ಲಿ 2.5 ಕೋಟಿ ರೂ. ವೆಚ್ಚದ ರಸ್ತೆ ಅಭಿವೃಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ವಾರ್ಡ್ನಲ್ಲಿ ಕಾಂಕ್ರೀಟ್ ರಸ್ತೆಗಳ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಜತೆಗೆ ಶೀಘ್ರವೇ ಕುಡಿಯಲು ಕಾವೇರಿ ನೀರು ಸರಬರಾಜು ಮಾಡಲಾಗುತ್ತದೆ ಎಂದು ಭರವಸೆ ನೀಡಿದರು.
ಪಾಲಿಕೆ ಸದಸ್ಯ ರಾಜಣ್ಣ ಮಾತನಾಡಿ, ನಾಗರಿಕರ ಅವಶ್ಯಕತೆಗೆ ಅನುಗುಣವಾಗಿ ಹಾಗೂ ಆರೋಗ್ಯ ಸುಧಾರಣೆಗಾಗಿ ವಾರ್ಡ್ ವ್ಯಾಪ್ತಿಯಲ್ಲಿ 15ಕ್ಕೂ ಹೆಚ್ಚು ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲು ಯೋಜನೆ ರೂಪಿಸಿದ್ದು, ಕಾಮಗಾರಿಗೆ ಚಾಲನೆ ನೀಡಲಾಗುತ್ತಿದೆ. ಈಗಾಗಲೇ 10 ಘಟಕಗಳಿಂ ಜನತೆ ಶುದ್ಧ ನೀರು ಪಡೆಯುತ್ತಿದ್ದಾರೆ ಎಂದರು.
ಇದೇ ವೇಳೆ ವಾರ್ಡ್ ವ್ಯಾಪ್ತಿಯ ಗಾಂಧಿ ಉದ್ಯಾನವನದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಯಿತು. ಮುಖಂಡರಾದ ಬಿಜ್ಜಳ್ಳಿ ರಾಜಣ್ಣ, ಅಂಜನ್ಕುಮಾರ್, ನರಸೇಗೌಡ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Monkey disease: ಶೀಘ್ರ ಶಿರಸಿಗೆ ಮಂಗನ ಕಾಯಿಲೆ ತಪಾಸಣಾ ಲ್ಯಾಬ್: ಭೀಮಣ್ಣ
Viduthalai Part 2 Trailer: ದಟ್ಟ ಕಾಡಿನಲ್ಲಿ ಸದ್ದು ಮಾಡುವ ಬಂದೂಕು – ದಮನಿತರ ಬದುಕು..
Ullal: ಬಾವಿ, ಬೋರ್ವೆಲ್ನಲ್ಲಿ ತೈಲಮಿಶ್ರಿತ ನೀರು; ಸಮಸ್ಯೆ ಇರುವ ಮನೆಗಳಿಗೆ ಪೈಪ್ಲೈನ್
Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್
Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.