ಅರಮನೆ ಮೈದಾನದಲ್ಲಿ ಅರಳಿದ ಆಳ್ವಾಸ್‌ ಸಾಂಸ್ಕೃತಿಕ ವೈಭವ

Team Udayavani, Jan 9, 2018, 12:31 PM IST

alvaas.jpg

ಬೆಂಗಳೂರು: ಕರಾವಳಿಯ ಯಕ್ಷಗಾನ, ಒಡಿಶಾದ ಗೋಟಿಪುವ, ಆಂಧ್ರದ ಬಂಜಾರ ಜನಪದ ನೃತ್ಯ, ಮಣಿಪುರದ ಸ್ಟಿಕ್‌ ಡಾನ್ಸ್‌ ಹಾಗೂ ಸಾಹಸಿ ಕಲಾಪ್ರದರ್ಶನದ ಮೂಲಕ ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳು ಬೆಂಗಳೂರಿಗರಿಗೆ ಸಾಂಸ್ಕೃತಿಕ ರಸದೌತಣ ನೀಡಿದರು.

ಆಳ್ವಾಸ್‌ ಪ್ರತಿಷ್ಠಾನದಿಂದ ಸೋಮವಾರ ಸಂಜೆ ನಗರದ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಆಳ್ವಾಸ್‌ ವಿರಾಸತ್‌ ಸಾಂಸ್ಕೃತಿಕ ವೈಭವದಲ್ಲಿ ಮೂಡಬಿದಿರೆಯ ಆಳ್ವಾಸ್‌ ಶಿಕ್ಷಣ ಸಂಸ್ಥೆಯ 350 ವಿದ್ಯಾರ್ಥಿಗಳ ತಂಡ ಸುಮಾರು ಮೂರುವರೆ ಗಂಟೆಗಳ ಕಾಲ ವಿವಿಧ ನೃತ್ಯದ ಮೂಲಕ ನೆರೆದವರನ್ನು ಭಾವನಾಲೋಕಕ್ಕೆ ಕೊಂಡೊಯ್ಯದರು.

ಕೇರಳದ ಮೋಹಿನಿಯಾಟ್ಟಂ-ಅಷ್ಟಲಕ್ಷ್ಮೀ, ಶ್ರೀಲಂಕಾದ ಕ್ಯಾಂಡಿಯನ್‌ ನೃತ್ಯ, ಭರತನಾಟ್ಯ, ಮಣಿಪುರದ ಜಾನಪದ ನೃತ್ಯ ದೋಲ್‌ ಚಲಮ…, ಮಲ್ಲಕಂಬ ಮತ್ತು ರೋಪ್‌ ಕಸರತ್ತು, ಗುಜರಾತನ್‌ ದಾಂಡಿಯ-ಗಾರ್ಬ, ಕಥಕ್‌, ಪಶ್ಚಿಮ ಬಂಗಾಳದ ಸಿಂಹ ನೃತ್ಯ, ಮಹಾರಾಷ್ಟ್ರದ ಲಾವಣಿ ನೃತ್ಯ, ದೇಶಭಕ್ತಿಯ ವಂದೇ ಮಾತರಂ ಮೊದಲಾದ ಸಾಹಸ, ಸಾಂಸ್ಕೃತಿಕ ನೃತ್ಯ ಎಲ್ಲರನ್ನು ರೋಮಾಂಚನಗೊಳಿಸಿದೆ.

ಸಂಸ್ಕೃತಿ ಸದ್ಭಾವನೆಯ ಭಾಗವಾಗಲಿ: ಆಳ್ವಾಸ್‌ ವಿರಾಸತ್‌ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ನಿರ್ದೇಶಕ ನಾಗತೀಹಳ್ಳಿ ಚಂದ್ರಶೇಖರ್‌, ಸಮಾನತೆ, ಸಾಮರಸ್ಯ, ಸೌಹಾರ್ದತೆ, ಬ್ರಾತೃತ್ವ, ಹೊಂದಾಣಿಕೆ, ಪ್ರೀತಿ, ಕೌತುಕ, ಅರಿವು ಹೀಗೆ ಆಧ್ಯಾತ್ಮ ಮತ್ತು ವಿಜ್ಞಾನಕ್ಕೆ ಸಂಬಂಧಿಸಿದ ಎಲ್ಲವೂ ಸಂಸ್ಕೃತಿಯ ಭಾಗವಾಗಿದೆ.

ನಾಟಕ, ಚಲನಚಿತ್ರ ಸೇರಿ ಪ್ರದರ್ಶನ ಕಲೆಗಳನ್ನು ಮಾತ್ರ ಸಂಸ್ಕೃತಿಯ ಭಾಗವಾಗಿ ಬಿಂಬಿಸಲಾಗುತ್ತಿದೆ. ಮನೆಯ ಮುಂದೆ ರಂಗೋಲಿ ಹಾಕುವುದರಿಂದ ಹಿಡಿದು ಮನುಷ್ಯನ ಸದ್ಭಾವನೆಯೇ ಸಂಸ್ಕೃತಿ ಎಂದು ವಿಶ್ಲೇಷಿಸಿದರು.

ಮನುಷ್ಯನ ತಲಾ ಆದಾಯದಿಂದ ದೇಶವೊಂದರ ಶ್ರೀಮಂತಿಕೆ ಅಳೆಯಬಾರದು, ಅಲ್ಲಿನ ಸಾಂಸ್ಕೃತಿ ಹಿತನದ ಆಧಾರದಲ್ಲಿ ಶ್ರೀಮಂತಿಕೆ ಗುರುತಿಸಬೇಕು. ಹಣದ ವ್ಯಾಮೋಹದೊಂದಿಗೆ ಸಾಂಸ್ಕೃತಿಕವಾಗಿ ವಿನಾಶದ ಅಂಚಿಗೆ ತಲುಪಿದ ರಾಷ್ಟ್ರಗಳಿಂದು ಅನೇಕ ಸಮಸ್ಯೆ ಎದುರಿಸುತ್ತಿದೆ ಎಂದರು.

ಡಾ.ಮೋಹನ್‌ ಆಳ್ವರು ದೇಶದ ಸಾಂಸ್ಕೃತಿಕ ವೈಭವನ್ನು ಉಳಿಸಿ, ಬೆಳೆಸುವ ಪ್ರಯತ್ನ ಮಾಡುತ್ತಿದ್ದಾರೆ. ಶಿಕ್ಷಣ ಸಂಸ್ಥೆಗಳು ವರ್ಷಕ್ಕೆ ಎರಡು ಕಾರ್ಯಕ್ರಮ ಮಾಡಿ ಸುಮ್ಮನಿರುವುದಲ್ಲ. ಬದಲಾಗಿ ಆಳ್ವಾಸ್‌ ಶಿಕ್ಷಣ ಸಂಸ್ಥೆಯನ್ನು ಮಾದರಿಯಾಗಿಟ್ಟುಕೊಂಡು ಸಂಸ್ಕೃತಿಕ ಚಟುವಟಿಕೆಗಳನ್ನು ವರ್ಷ ಪೂರ್ತಿ ಆಯೋಜಿಸುತ್ತಿರಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಬೇಕು.

ಬೆಂಗಳೂರಿನ ಪ್ರತಿಯೊಬ್ಬರ ಬದುಕು ದ್ವೀಪದಂತಾಗಿದೆ. ಪಕ್ಕದ ಮನೆಯ ನಿಟ್ಟೂಸಿರು ಕೇಳದ ಕಿವುಡರಾಗಿಬಿಟ್ಟಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮದ ಅದ್ಭುತ ಪ್ರದರ್ಶನ ಕಾಲಬುಡದಲ್ಲೇ ನಡೆಯುತ್ತಿದ್ದರೂ, ಕೆಲಸದ ಒತ್ತಡ, ಟ್ರಾಫಿಕ್‌ ನೆಪಹೇಳಿ ಕಾರ್ಯಕ್ರಮಕ್ಕೆ ಬರುವುದಿಲ್ಲ.

ಪುಸ್ತಕ ಬಿಡುಗಡೆ, ನಾಟಕ ಮತ್ತು ಚಲನಚಿತ್ರಗಳು ಇದೇ ಸಮಸ್ಯೆ ಎದುರಿಸುತ್ತಿದೆ. ಮಾದಕ ನಟಿ ಬರುತ್ತಾಳೆಂದರೆ ಎಲ್ಲರೂ ಎಚ್ಚರಾಗುತ್ತಾರೆ. ಎಂಥ ದುರ್ಗತಿ ಬಂತು ಎಂದು ಕಳವಳ ವ್ಯಕ್ತಪಡಿಸಿದರು. ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ್‌ ಆಳ್ವಾ ಮಾತನಾಡಿ, ಶಾಸ್ತ್ರೀಯ ಹಾಗೂ ಸಾಂಸ್ಕೃತಿಕ ಕಲಾ ಪ್ರಕಾರಗಳನ್ನು ಜನಸಾಮಾನ್ಯರಿಗೆ ತಿಳಿಸುವ ಪ್ರಯತ್ನವೇ ಆಳ್ವಾಸ್‌ ವಿರಾಸತ್‌.

ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯ ಹಾಗೂ ವಿದೇಶದಲ್ಲೂ ಸಾಂಸ್ಕೃತಿಕ ಪ್ರದರ್ಶನ ನೀಡಿದ್ದೇವೆ. ನಗರ ಪ್ರದೇಶದಲ್ಲಿ ಭಾಷೆ, ರಾಜಕೀಯ ಇತ್ಯಾದಿ ವಿಷಯಗಳಿಗೆ ಸೇರುವಷ್ಟು ಜನ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಸೇರುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಐಎಎಸ್‌ ಅಧಿಕಾರಿಗಳಾದ ರಜನೀಶ್‌ ಗೋಯಲ್‌, ಶಾಲಿನಿ ರಜನೀಶ್‌ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Maharashtra Polls: Who will be the next Chief Minister? Fadnavis gives a hint

Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್‌

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

Dhanashree Verma: ಯಶ್‌ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್

Dhanashree Verma: ಯಶ್‌ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್

Re-Release: ಈ ವರ್ಷ ರೀ ರಿಲೀಸ್‌ ಆದ ಬಾಲಿವುಡ್‌ ಸಿನಿಮಾಗಳ ಬಾಕ್ಸ್‌ ಆಫೀಸ್‌ ಗಳಿಕೆ ಎಷ್ಟು?

Re-Release: ಈ ವರ್ಷ ರೀ ರಿಲೀಸ್‌ ಆದ ಬಾಲಿವುಡ್‌ ಸಿನಿಮಾಗಳ ಬಾಕ್ಸ್‌ ಆಫೀಸ್‌ ಗಳಿಕೆ ಎಷ್ಟು?

Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!

Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!

IPL Mega Auction: 2008-2024.. Here is the list of the most expensive players in each auction

IPL Mega Auction: 2008-2024.. ಪ್ರತಿ ಹರಾಜಿನ ದುಬಾರಿ ಆಟಗಾರರ ಪಟ್ಟಿ ಇಲ್ಲಿದೆ

Eye Surgeries: ಪದವಿ ಪೂರ್ಣಗೊಳಿಸದೆ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ…

Eye Surgeries: ವೈದ್ಯಕೀಯ ಪದವಿ ಪೂರ್ಣಗೊಳಿಸದೇ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

9-bng

Bengaluru: ಹನಿಟ್ರ್ಯಾಪ್‌: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ

6-bng

Bengaluru: ಬಸ್‌ಗಳಲ್ಲಿ ಮೊಬೈಲ್‌ ಕಳ್ಳತನ: ಇಬ್ಬರು ಆರೋಪಿಗಳ ಸೆರೆ‌, 60 ಫೋನ್‌ ಜಪ್ತಿ

5-bng

Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ

4-bng

Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ

MUST WATCH

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

ಹೊಸ ಸೇರ್ಪಡೆ

Maharashtra Polls: Who will be the next Chief Minister? Fadnavis gives a hint

Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್‌

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

Dhanashree Verma: ಯಶ್‌ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್

Dhanashree Verma: ಯಶ್‌ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್

Re-Release: ಈ ವರ್ಷ ರೀ ರಿಲೀಸ್‌ ಆದ ಬಾಲಿವುಡ್‌ ಸಿನಿಮಾಗಳ ಬಾಕ್ಸ್‌ ಆಫೀಸ್‌ ಗಳಿಕೆ ಎಷ್ಟು?

Re-Release: ಈ ವರ್ಷ ರೀ ರಿಲೀಸ್‌ ಆದ ಬಾಲಿವುಡ್‌ ಸಿನಿಮಾಗಳ ಬಾಕ್ಸ್‌ ಆಫೀಸ್‌ ಗಳಿಕೆ ಎಷ್ಟು?

Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!

Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.