ಖಾದಿ ಉತ್ಪನ್ನಕ್ಕೆ ಹೆಚ್ಚಿನ ಉತ್ತೇಜನ
Team Udayavani, Jan 9, 2018, 1:06 PM IST
ವಿಜಯಪುರ: ಖಾದಿ ಗ್ರಾಮೋದ್ಯೋಗ ಕ್ಷೇತ್ರದಲ್ಲಿ ಕಳೆದ ಒಂದು ವರ್ಷ ಅವಧಿಯಲ್ಲಿಯೇ 500 ಕೋಟಿ ರೂ. ಬಂಡವಾಳ ಹೂಡಿಕೆಯಾಗಿದೆ ಎಂದು ಬೆಂಗಳೂರು ಖಾದಿ ಆಯೋಗದ ಉಪ ಕಾರ್ಯನಿರ್ವಹಣಾಧಿಕಾರಿ ಜಿ.ಗುರುಪ್ರಸನ್ನ ಹೇಳಿದರು.
ನಗರದ ಕಂದಗಲ್ ಹನುಮಂತರಾಯ ರಂಗಮಂದಿರದ ಆವರಣದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತು ಪ್ರದರ್ಶನ ಮತ್ತು ಮಾರಾಟ ಮಳಿಗೆ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಖಾದಿ ಉತ್ಪನ್ನಗಳಿಗೆ ಹೆಚ್ಚಿನ ಉತ್ತೇಜನ ನೀಡಲಾಗುತ್ತಿದೆ.
ಗ್ರಾಹಕರಿಗೆ ರಿಯಾಯಿತಿ ದರದಲ್ಲಿ ಖಾದಿ ಉತ್ಪನ್ನಗಳು ದೊರೆಯಲು ಅನುಕೂಲವಾಗುವಂತೆ ಖಾದಿ ಕ್ಷೇತ್ರದಲ್ಲಿ 500 ಕೋಟಿ ರೂ.ವರೆಗೆ ಬಂಡವಾಳ ಹೂಡಿಕೆ ಸಹ ಆಗಿದ್ದು, ವಿವಿಧ ಬ್ಯಾಂಕ್‌ಗಳ ಮೂಲಕ ಸಾಲ, ಸಹಾಯಧನ ಸಹ ನೀಡಲಾಗುತ್ತಿದೆ ಎಂದು ಹೇಳಿದರು.
ಭಾರತದಲ್ಲಿ ಗಾಂಧಿ ಸಿದ್ಧಾಂತ ಮತ್ತು ಆಚರಣೆ ಉತ್ತರ ಕರ್ನಾಟಕದಲ್ಲಿ ಮಾತ್ರ. ರಾಷ್ಟ್ರದಲ್ಲಿ ಖಾದಿಗೆ ಹೆಚ್ಚಿನ ಮಹತ್ವವನ್ನು ನೀಡಲಾಗಿದೆ. ವಿಶೇಷವಾಗಿ ಉತ್ತರ ಕರ್ನಾಟಕದಲ್ಲಿ ಖಾದಿಗೆ ಪ್ರೋತ್ಸಾಹ ನೀಡಲಾಗುತ್ತಿದೆ. ಖಾದಿ ಗ್ರಾಮೋದ್ಯೋಗದಲ್ಲಿ ಹೊಸ ಯೋಜನೆಗಳು ಇದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಮತ್ತು ಇತರೆ ಉದ್ಯೋಗಗಳನ್ನು ಕೂಡ ಮಾಡಬೇಕೆಂದು ಹೇಳಿದರು.
ಜಿಪಂ ಅಧ್ಯಕ್ಷೆ ನೀಲಮ್ಮ ಮೇಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಹಾತ್ಮ ಗಾಂಧಿಜಿಯವರು ಭಾರತವನ್ನು ಸ್ವಾವಲಂಬಿ ರಾಷ್ಟ್ರವಾಗಿಸಲು ಖಾದಿಗೆ ಉತ್ತೇಜನ ನೀಡಿದರು. ಈ ದಿಶೆಯಲ್ಲಿ ಸರ್ಕಾರ ಕೂಡ ಖಾದಿ ಗ್ರಾಮೋದ್ಯೋಗ ಉತ್ತೇಜನಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ. ಸಾರ್ವಜನಿಕರಿಗೆ ರಿಯಾಯಿತಿ ದರದಲ್ಲಿ ಖಾದಿ ಮತ್ತು ಗ್ರಾಮೋದ್ಯೋಗ ಉತ್ಪನ್ನಗಳು ದೊರೆಯಲು ಅನುಕೂಲವಾಗುವಂತೆ ಜ. 22ರವರೆಗೆ ಖಾದಿ ಮೇಳವನ್ನು ಹಮ್ಮಿಕೊಂಡಿದ್ದು ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳುವಂತೆ ಕರೆ ನೀಡಿದರು. ಸಮಾರಂಭದಲ್ಲಿ ಮುಂಬೈ ದಕ್ಷಿಣ ವಲಯದ ಕೆವಿಐಸಿ ಸದಸ್ಯರಾದ ಜಿ.ಚಂದ್ರಮೌಳಿ, ಕೃಷ್ಣಾ ಕಾಡಾ ಅಧ್ಯಕ್ಷ ಜಕ್ಕಪ್ಪ ಎಡವೆ, ಜಿಪಂ ಸದಸ್ಯೆ ಶಾಂತಾಬಾಯಿ ನಾಗರಾಳ,
ಖಾದಿ ಬಜಾರ್ ಉತ್ಸವ ಸಮಿತಿ ಉಪಾಧ್ಯಕ್ಷ ಬಿ.ಬಿ. ಪಾಟೀಲ, ಖಾದಿ ಬಜಾರ್ ಸಂಘದ ಅಧ್ಯಕ್ಷ ಬಿ.ಸುಭಾಷ್ ಚಂದ್ರ, ಬಿ.ಬಿ. ನಿಂಬಾಳಕರ, ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ ಸಾವಿತ್ರಮ್ಮ ದಳವಾಯಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು
Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು
Muddebihal: ಟ್ರ್ಯಾಕ್ಟರ್-ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.