ತೃತೀಯ ಲಿಂಗಿಗಳಿಗೆ ಅರಮನೆ
Team Udayavani, Jan 10, 2018, 6:40 AM IST
ನವದೆಹಲಿ: ದೇಶದ ಏಕೈಕ ಸಲಿಂಗಿ ರಾಜಕುಮಾರ ಮಾನವೇಂದ್ರ ಸಿಂಗ್ ಗೋಹಿಲ್ ಅವರ 15 ಎಕರೆ ಪ್ರದೇಶದಲ್ಲಿರುವ ಅರಮನೆ ಈಗ ತೃತೀಯ ಲಿಂಗಿಗಳ ಸಮುದಾಯಕ್ಕೆ ಮುಕ್ತವಾಗಿದೆ. ಗೋಹಿಲ್ ಅವರೇ ಈ ನಿರ್ಧಾರ ಕೈಗೊಂಡಿದ್ದಾರೆ.
ಗುಜರಾತ್‌ನ ನರ್ಮದಾ ಜಿಲ್ಲೆಯಲ್ಲಿರುವ ರಾಜ್‌ಪಿಪ್ಲಾದಲ್ಲಿ ಅವರ ಅರಮನೆ ಇದೆ. ಅಂದ ಹಾಗೆ, ಅರಮನೆಯ ಹೆಸರು “ಹನುಮಂತೇಶ್ವರ’. ಸೋಮವಾರವಷ್ಟೇ ಸುಪ್ರೀಂಕೋರ್ಟ್ ಸಲಿಂಗಕಾಮ ಅಪರಾಧ ಎಂಬ ತೀರ್ಪನ್ನು ಪುನರ್ ಪರಿಶೀಲಿಸಲು ಒಪ್ಪಿರುವಂತೆಯೇ ಗೋಹಿಲ್ ಅವರ ಈ ಘೋಷಣೆ ಗಮನ ಸೆಳೆದಿದೆ. ಈ ಘೋಷಣೆ ಬಳಿಕ ತಮ್ಮ ಅರಮನೆ ಇರುವ ಜಮೀನಿನಲ್ಲಿ ಇನ್ನೂ ಹೆಚ್ಚಿನ ಕಟ್ಟಡ ನಿರ್ಮಿಸುವುದಾಗಿ ಅವರು ಹೇಳಿದ್ದಾರೆ.
ಇವರು ಲಕ್ಷ್ಯ ಟ್ರಸ್ಟ್ ಎಂಬ ಸಂಸ್ಥೆಯನ್ನು ಆರಂಭಿಸಿ ತೃತೀಯ ಲಿಂಗಿಗಳ ಏಳ್ಗೆಗಾಗಿ ಕೆಲಸವನ್ನೂ ಮಾಡುತ್ತಿದ್ದಾರೆ. ರಾಜಕುಮಾರ ಮಾನವೇಂದ್ರ ಸಿಂಗ್ ಏಡ್ಸ್ ಹಲ್ತ್‌ಕೇರ್ ಫೌಂಡೇಷನ್‌ನಲ್ಲಿ ಸಲಹೆಗಾರರೂ ಹೌದು. 2006ರಲ್ಲಿ ರಾಜಕುಟುಂಬದಿಂದಲೇ ಬಹಿಷ್ಕಾರಕ್ಕೆ ಒಳಗಾದ ಬಳಿಕ ಅವರು ಲಕ್ಷ್ಯ ಟ್ರಸ್ಟ್ ಆರಂಭಿಸಿದರು. ಅದರ ಮೂಲಕ ತೃತೀಯ ಲಿಂಗಿಗಳಿಗೆ ಬೆಂಬಲ, ಎಚ್‌ಐವಿ ಬಗ್ಗೆ ಅರಿವು, ಶಿಕ್ಷಣ ನೀಡುವ ಬಗ್ಗೆ ಕಾರ್ಯಕ್ರಮಗಳನ್ನು ರೂಪಿಸಿದರು. 1991ರಲ್ಲಿ ಅವರು ಬಲವಂತವಾಗಿ ದಾಂಪತ್ಯ ಜೀವನ ಪ್ರವೇಶಿಸುವಂತಾಗಿತ್ತು. 2009ರಲ್ಲಿ ಬಿಬಿಸಿ ಚಾನೆಲ್‌ನಲ್ಲಿ “ಅಂಡರ್ ಕವರ್ ಪ್ರಿನ್ಸೆಸ್’ ಎಂಬ ಸರಣಿಯಡಿ ಅವರ ಬಗ್ಗೆ ವರದಿ ಪ್ರಸಾರವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ
Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.