ಕಾಂಗ್ರೆಸ್‌ ಮೃದು ಹಿಂದುತ್ವಕ್ಕೆ ತಿರುಗೇಟು


Team Udayavani, Jan 10, 2018, 9:28 AM IST

10-7.jpg

ಬೆಂಗಳೂರು: ಗುಜರಾತ್‌ ಚುನಾವಣೆ ಬಳಿಕ ರಾಜ್ಯ ವಿಧಾನಸಭೆ ಚುನಾವಣೆಗೂ ಮೃದು ಹಿಂದುತ್ವ ಧೋರಣೆ ಅನುಸರಿಸಲು ಮುಂದಾಗಿರುವ ಕಾಂಗ್ರೆಸ್‌ಗೆ ತಿರುಗೇಟು ನೀಡಲು ಬಿಜೆಪಿ ಸಿದ್ಧತೆ ನಡೆಸುತ್ತಿದ್ದು, ತ್ರಿವಳಿ ತಲಾಖ್‌ ನಿಷೇಧ ವಿಚಾರ ಮುಂದಿಟ್ಟುಕೊಂಡು ಕಾಂಗ್ರೆಸ್‌ ಮತ ಬ್ಯಾಂಕ್‌ಗೆ ಕೈಹಾಕಲು ನಿರ್ಧರಿಸಿದೆ.

ತ್ರಿವಳಿ ತಲಾಖ್‌ ನಿಷೇಧಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ರೂಪಿಸಿರುವ ಮುಸ್ಲಿಂ ಮಹಿಳೆಯರ (ವೈವಾಹಿಕ ಹಕ್ಕುಗಳ ಸಂರಕ್ಷಣೆ) ಮಸೂದೆ-2017ಕ್ಕೆ ಲೋಕಸಭೆಯಲ್ಲಿ ಅನುಮೋದನೆ ಸಿಕ್ಕಿದರೂ ರಾಜ್ಯಸಭೆಯಲ್ಲಿ ಕಾಂಗ್ರೆಸ್‌ ಅಡ್ಡಿಪಡಿಸಿದ್ದನ್ನೇ ಪ್ರಮುಖವಾಗಿ ಪ್ರಸ್ತಾಪಿಸಿ ಮುಸ್ಲಿಂ ಮಹಿಳೆಯರು ಮತ್ತು ತಲಾಖ್‌ ನಿಷೇಧ ಬೆಂಬಲಿಸುವ ಸಮುದಾಯದ ಇತರರನ್ನು ಓಲೈಸಲು ಚಿಂತನೆ ನಡೆಸಿದೆ. ಈ ಜವಾಬ್ದಾರಿಯನ್ನು ಬಿಜೆಪಿ ಅಲ್ಪಸಂಖ್ಯಾತರ ಮೋರ್ಚಾಕ್ಕೆ ವಹಿಸಲು ತೀರ್ಮಾನಿಸಲಾಗಿದ್ದು, ಈಗಾಗಲೇ ಮೋರ್ಚಾದಿಂದ ಆ ಕುರಿತ ರೂಪರೇಷೆಗಳು ಸಿದ್ಧವಾಗುತ್ತಿದೆ. ಈಗಾಗಲೇ ಅಲ್ಪಸಂಖ್ಯಾತ ಮೋರ್ಚಾ ಮುಖಂಡರು ಹಲವು ಸಭೆಗಳನ್ನು ಮಾಡಿದ್ದಾರೆ. ಆದರೆ, ಇದು ಪಕ್ಷದ ತಂತ್ರಗಾರಿಕೆಯಾಗಿರುವುದರಿಂದ ಹೆಚ್ಚಿನ ಮಾಹಿತಿ ನೀಡಲು ಮುಖಂಡರು ನಿರಾಕರಿಸಿದ್ದಾರೆ.

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಹಿಂದುತ್ವ ಅಜೆಂಡಾಕ್ಕೆ ಪ್ರತಿಯಾಗಿ ಮೃದು ಹಿಂದುತ್ವ ಧೋರಣೆ ಅನುಸರಿಸಲು ಕಾಂಗ್ರೆಸ್‌ ಚಿಂತನೆ ನಡೆಸಿತ್ತು. ಅಲ್ಲದೆ, ಇತ್ತೀಚೆಗೆ ನಡೆದ ಗುಜರಾತ್‌ ಚುನಾವಣೆಯಲ್ಲೂ ಕಾಂಗ್ರೆಸ್‌ ಮೃದು ಹಿಂದುತ್ವ ನೀತಿ ಅನುಸರಿಸಿದ್ದು ಸ್ವಲ್ಪ ಮಟ್ಟಿಗೆ ಸಹಾಯವಾಗಿತ್ತು. ಹೀಗಾಗಿ ರಾಜ್ಯದಲ್ಲೂ ಮೃದು ಹಿಂದುತ್ವ ನೀತಿಗೆ ಕಾಂಗ್ರೆಸ್‌ ಮಣೆ ಹಾಕಿದೆ. ಆ ಮೂಲಕ ಬಿಜೆಪಿಯ ಹಿಂದೂ ವೋಟ್‌ಬ್ಯಾಂಕ್‌ ಅನ್ನು ಒಡೆಯಲು ಮುಂದಾಗಿದೆ. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್‌ನ ವೋಟ್‌ಬ್ಯಾಂಕ್‌ ಆಗಿರುವ ಮುಸ್ಲಿಂ ಸಮುದಾಯದ ಮೇಲೆ ದೃಷ್ಟಿ ಹರಿಸಿರುವ ಬಿಜೆಪಿ, ಕೇಂದ್ರದಲ್ಲಿ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಅಲ್ಪಸಂಖ್ಯಾತ ಸಮುದಾಯಕ್ಕೆ ಜಾರಿಗೊಳಿಸಿರುವ ಯೋಜನೆಗಳು, ಈ ಹಿಂದೆ
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಮುಸ್ಲಿಂ ಸಮುದಾಯಕ್ಕೆ ನೀಡಿದ ಕಾರ್ಯಕ್ರಮಗಳ ಜತೆಗೆ ತ್ರಿವಳಿ ತಲಾಖ್‌ ವಿಚಾರಗಳನ್ನು ಮುಂದಿಟ್ಟುಕೊಂಡು ಆ ಸಮುದಾಯದಲ್ಲಿ ಜಾಗೃತಿ ಮೂಡಿಸಲು ತೀರ್ಮಾನಿಸಿದೆ.

ಕಾಂಗ್ರೆಸ್‌ ವಿರುದ್ಧ ಆರೋಪ ಪಟ್ಟಿ: ಅದರಲ್ಲೂ ತ್ರಿವಳಿ ತಲಾಖ್‌ ವಿಚಾರವನ್ನು ಪ್ರಧಾನವಾಗಿಟ್ಟುಕೊಂಡು ಮುಸ್ಲಿಂ ಮಹಿಳೆಯರ ಗಮನ ಸೆಳೆಯಲು ತಂತ್ರಗಾರಿಕೆ ರೂಪಿಸುತ್ತಿದ್ದು, ತ್ರಿವಳಿ ತಲಾಖ್‌ಗೆ ಕಾಂಗ್ರೆಸ್‌ ಹೇಗೆಲ್ಲಾ ಅಡ್ಡಗಾಲು ಹಾಕುತ್ತಿದೆ ಎಂಬುದನ್ನು ಅವರಿಗೆ ಮನವರಿಕೆ ಮಾಡಲು ಈ ವಿಚಾರದಲ್ಲಿ ಕಾಂಗ್ರೆಸ್‌ ನಾಯಕರ ನಡವಳಿಕೆ ಕುರಿತು ಆರೋಪ ಪಟ್ಟಿಯೊಂದನ್ನು ಕೂಡ ಸಿದ್ಧಪಡಿಸಲಿದೆ ಎಂದು ತಿಳಿದುಬಂದಿದೆ. ತ್ರಿವಳಿ ತಲಾಖ್‌ ಪ್ರಕರಣದಲ್ಲಿ ತಲಾಖ್‌ ನಿಷೇಧಕ್ಕೆ ವಿರುದ್ಧವಾಗಿ ಕಾಂಗ್ರೆಸ್‌ನ ಕಪಿಲ್‌ ಸಿಬಲ್‌ ಸುಪ್ರೀಂಕೋಟ್‌ ìನಲ್ಲಿ ವಾದ ಮಂಡಿಸಿದ್ದು, ಲೋಕಸಭೆಯಲ್ಲಿ ತ್ರಿವಳಿ 
ತಲಾಖ್‌ ನಿಷೇಧ ಮಸೂದೆ ಮಂಡಿಸಿದಾಗ ಆರಂಭದಲ್ಲಿ ವಿರೋಧ ವ್ಯಕ್ತಪಡಿಸಿ ಸಂಸದೀಯ ಸ್ಥಾಯಿ ಸಮಿತಿಗೆ ಒಪ್ಪಿಸಬೇಕು ಎಂದು ಹೇಳಿ ನಂತರ ಸರ್ಕಾರಕ್ಕೆ ಬಹುಮತ ಇದ್ದ ಕಾರಣ ಅನಿವಾರ್ಯವಾಗಿ ಒಪ್ಪಿಕೊಂಡಿದ್ದು, ರಾಜ್ಯಸಭೆಯಲ್ಲಿ ಸರ್ಕಾರಕ್ಕೆ ಬಹುಮತ ಇಲ್ಲದ ಕಾರಣ ಮಸೂದೆ ಅಂಗೀಕಾರವಾಗದಂತೆ ನೋಡಿಕೊಂಡಿರುವುದನ್ನು ಪ್ರಮುಖವಾಗಿ ಪ್ರಸ್ತಾಪಿಸಲಿದೆ.

ನಿಲುವು ಸ್ಪಷ್ಟಪಡಿಸಿಲ್ಲ
ತ್ರಿವಳಿ ತಲಾಖ್‌ ನಿಷೇಧ ಮಸೂದೆಯಲ್ಲಿ ಇರುವ ಕೆಲವೊಂದು ಲೋಪದೋಷಗಳನ್ನು ಸರಿಪಡಿಸಬೇಕೆಂಬ ಕಾರಣಕ್ಕೆ ರಾಜ್ಯಸಭೆಯಲ್ಲಿ ವಿರೋಧಿಸಿದ್ದಾಗಿ ಕಾಂಗ್ರೆಸ್‌ ಹೇಳುತ್ತಿದೆಯಾದರೂ ನಿಷೇಧಕ್ಕೆ ಸಂಬಂಧಿಸಿದಂತೆ ಇನ್ನೂ ತನ್ನ ನಿಲುವು ಸ್ಪಷ್ಟಪಡಿಸಿಲ್ಲ. ಇನ್ನೊಂದೆಡೆ ರಾಜ್ಯದ ಕಾಂಗ್ರೆಸ್‌ ಸರ್ಕಾರದಲ್ಲಿ ಸಚಿವರಾಗಿರುವ ತನ್ವೀರ್‌ ಸೇs… ಈಗಾಗಲೇ ತ್ರಿವಳಿ ತಲಾಖ್‌ ನಿಷೇಧಿಸುವ ಮಸೂದೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಸಚಿವರ ವಿರೋಧದ ಕುರಿತು ಬಿಜೆಪಿ ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷರ ನಿಲುವೇನು ಎಂಬ ಬಿಜೆಪಿ ಪ್ರಶ್ನೆಗೆ ಅವರು ಉತ್ತರಿಸಿಲ್ಲ. ಇದರಿಂದಾಗಿ
ರಾಜ್ಯದ ಕಾಂಗ್ರೆಸ್‌ ತ್ರಿವಳಿ ತಲಾಖ್‌ ನಿಷೇಧಕ್ಕೆ ವಿರುದ್ಧವಾಗಿ ನಿಂತು ಮುಸ್ಲಿಂ ಮಹಿಳೆಯರಿಗೆ ಅನ್ಯಾಯ ಮಾಡಲು ಹೊರಟಿದೆ ಎಂದು ಬಿಂಬಿಸಲು ಕೂಡ ಬಿಜೆಪಿ ತೀರ್ಮಾನಿಸಿದೆ ಎಂದು ಮೂಲಗಳು ಹೇಳಿವೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಟ್ವೀಟ್‌ ವಾರ್‌
ಬೆಂಗಳೂರು: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಬೆಂಗಳೂರಿನಲ್ಲಿ ನೀಡಿದ ಹೇಳಿಕೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದ ಟೀಕೆಗೆ ಬಿಜೆಪಿ ನಾಯಕರು ಟ್ವಿಟರ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿರುವುದು ಹೀಗೆ.

ಮಿಸ್ಟರ್‌ ಸಿದ್ದರಾಮಯ್ಯ, ಗೋ ಸಂರಕ್ಷಣೆ ಕುರಿತ ಕಾನೂನಿನ ಬಗ್ಗೆ ಏನು ಹೇಳುತ್ತೀರಿ ಮತ್ತು ಯುವ ಕಾಂಗ್ರೆಸ್‌ ಮುಖಂಡರು
ಗೋಹತ್ಯೆ ಮಾಡುತ್ತಿರುವ ಬಗ್ಗೆ ನಿಮ್ಮ ನಿಲುವೇನು? ಈ ಕುರಿತ ಚರ್ಚೆಯ ಗಮನ ಬೇರೆಡೆ ಸೆಳೆಯ ಬೇಡಿ. ಗೋ ಸಂರಕ್ಷಣೆ ಕುರಿತಂತೆ ಯೋಗಿ ಆದಿತ್ಯನಾಥ್‌, ಬಿಜೆಪಿಯ  ಬದ್ಧತೆಯನ್ನು ಪ್ರಶ್ನಿಸಲು ಯಾರಿಂದಲೂ ಸಾಧ್ಯವಿಲ್ಲ.

 ●ಪಿ.ಮುರಳೀಧರರಾವ್‌, ಬಿಜೆಪಿ ರಾಜ್ಯ ಉಸ್ತುವಾರಿ

ಯೋಗಿ ಆದಿತ್ಯನಾಥರು ಮುಖ್ಯಮಂತ್ರಿಯಾದ ಮೇಲೆ ಕೇವಲ ಆರೇ ತಿಂಗಳಿನಲ್ಲಿ ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿ¨ªಾರೆ. ಕರ್ನಾಟಕದಲ್ಲಿ ಭ್ರಷ್ಟ ಆಡಳಿತ ಮಾಡುತ್ತಿರುವ ಸಿದ್ದರಾಮಯ್ಯನ ವರಿಗೆ ಯೋಗಿಯನ್ನು ಟೀಕಿಸುವ ಯೋಗ್ಯತೆಯಿಲ್ಲ. ಇದಕ್ಕೆ ತಕ್ಕ ಪಾಠವನ್ನು
ಜನರು ಚುನಾವಣೆಯಲ್ಲಿ ಕಲಿಸುತ್ತಾರೆ.

 ●   ಬಿ.ಎಸ್‌.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ

ವರ್ಷವಿಡೀ ಕೊಲೆಗಡುಕ ಟಿಪ್ಪುವಿನ ನಾಮ ಜಪಿಸಿ ನಾನೂ ದನದ ಮಾಂಸ ತಿನ್ನುವೆ ಎಂದು ಹೆಮ್ಮೆಯಿಂದ ಹೇಳುವ ಗೋಭಕ್ಷಕ ಸಿದ್ದರಾಮಯ್ಯ ಅವರಿಗೆ ಹಿಂದೂ ಧರ್ಮ ಹಾಗೂ ಹಿಂದುತ್ವದ ಕುರಿತು ಮಾತನಾಡುವ ಯೋಗ್ಯತೆಯಿಲ್ಲ. 
●ಸಿ.ಟಿ.ರವಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ

ಪ್ರದೀಪ್‌ ಕುಮಾರ್‌ ಎಂ.

ಟಾಪ್ ನ್ಯೂಸ್

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.