ಇಂದು ಚೆನ್ನಕೇಶವ ರಥೋತ್ಸವ


Team Udayavani, Jan 10, 2018, 11:56 AM IST

10–Jan-11.jpg

ಸುಳ್ಯ : ಶ್ರೀ ಚೆನ್ನಕೇಶವ ದೇವರ ಸನ್ನಿಧಿಯಲ್ಲಿ ಪೂರ್ವಶಿಷ್ಟ ಸಂಪ್ರದಾಯದಂತೆ ನಡೆಯುವ ವರ್ಷಾವಧಿ ಜಾತ್ರೆಯಲ್ಲಿ ಜ. 10 ರಂದು ರಾತ್ರಿ ರಥೋತ್ಸವ ನಡೆಯಲಿದೆ. ಮಂಗಳವಾರ ದೇವಸ್ಥಾನ ಹಾಗೂ ಸಂತೆ ಮಳಿಗೆಗಳಲ್ಲಿ ಸಾಕಷ್ಟು ಜನಸಂದಣಿ ಇತ್ತು. ರಥಬೀದಿಯಿಂದ ಎಪಿಎಂಸಿ ತನಕದ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಿ, ಪಾದಚಾರಿಗಳ ಬಳಕೆಗೆ ಸೀಮಿತಗೊಳಿಸಲಾಗಿತ್ತು.

ಬುಧವಾರ ಬೆಳಗ್ಗೆ ದೊಡ್ಡ ದರ್ಶನ ಬಲಿ, ಬಟ್ಟಲು ಕಾಣಿಕೆ ನಡೆಯಲಿದೆ. ರಾತ್ರಿ ಕಲ್ಕುಡ ದೈವಗಳ ಭಂಡಾರ ಬಂದ
ಅನಂತರ ಧಾರ್ಮಿಕ ಕಾರ್ಯಕ್ರಮಗಳು ಮುಗಿದು ವೈಭವದ ರಥೋತ್ಸವಕ್ಕೆ ಚಾಲನೆ ನೀಡಲಾಗುತ್ತದೆ. ಸುಮಾರು 12 ಗಂಟೆಯ ಹೊತ್ತಿಗೆ ದೇಗುಲದ ಪ್ರಾಂಗಣದಿಂದ ತೇರನ್ನು ಎಳೆಯಲಾಗುತ್ತದೆ. ರಥಬೀದಿಯಲ್ಲಿ ಸಾಗಿ, ಮುಖ್ಯ ರಸ್ತೆಯ ದೇವರ ಕಟ್ಟೆಯ ತನಕ ಸಂಚರಿಸಿ, ಅನಂತರ ರಥ ದೇವಾಲಯಕ್ಕೆ ಹಿಂದಿರುಗುವ ಸಂಪ್ರದಾಯ. ಸಾವಿರಾರು
ಸಂಖ್ಯೆಯಲ್ಲಿ ನೆರೆದ ಭಕ್ತರು ರಥ ಎಳೆಯುವ ಪುಣ್ಯಕಾರ್ಯದಲ್ಲಿ ಪಾಲ್ಗೊಳ್ಳುತ್ತಾರೆ.

ಸಂಚಾರ ನಿಷೇಧ
ಸುರಕ್ಷತೆಯ ದೃಷ್ಟಿಯಿಂದ ಮುಖ್ಯ ರಸ್ತೆಯಿಂದ ರಥಬೀದಿ ಸಂಪರ್ಕ ರಸ್ತೆಯನ್ನು ಎಪಿಎಂಸಿ ತನಕ ಮಂಗಳವಾರ ಸಂಜೆಯೇ ಬಂದ್‌ ಮಾಡಿ, ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ರಥಬೀದಿ ರಸ್ತೆಯ ಎರಡು ಬದಿಗಳಲ್ಲಿ ಸಂತೆ ಮಾರುಕಟ್ಟೆ ಇದ್ದು, ಜನಜಂಗುಳಿ ಇರುತ್ತದೆ. ರಥ ಸಂಚಾರವೂ ಇದೇ ರಸ್ತೆಯಲ್ಲಿ ಸಾಗುವ ಕಾರಣ ವಾಹನ
ಓಡಾಟಕ್ಕೆ ಅವಕಾಶ ಕಲ್ಪಿಸಲಾಗಿಲ್ಲ.

ತಾಲೂಕು ಹಾಗೂ ಹೊರ ಜಿಲ್ಲೆಗಳಿಂದ ಆಗಮಿಸುವ ಭಕ್ತರು, ಮುಖ್ಯ ರಸ್ತೆಯ ಒಂದು ಬದಿಗಳಲ್ಲಿ ಮಾತ್ರ ವಾಹನ
ನಿಲ್ಲಿಸಬಹುದು. ಬೈಕ್‌ ಹೊರತುಪಡಿಸಿ ಮಿಕ್ಕ ವಾಹನಗಳನ್ನು ಪ್ರತ್ಯೇಕ ಸ್ಥಳದಲ್ಲಿ ನಿಲುಗಡೆ ಮಾಡಬೇಕಿದೆ ಎಂದು ನಗರ ಠಾಣಾ ಪೊಲೀಸರು ತಿಳಿಸಿದ್ದಾರೆ.

ಕೆಮರಾ ಕಣ್ಗಾವಲು
ಈ ಬಾರಿ ಜಾತ್ರಾ ಸುರಕ್ಷತೆಗೆ ಅತ್ಯಾಧುನಿಕ ಸಿಸಿ ಕೆಮರಾಗಳು ಸಾಥ್‌ ನೀಡಲಿವೆ. ನಗರದ ಆಯಕಟ್ಟಿನ ನಾಲ್ಕು ಸ್ಥಳಗಳಲ್ಲಿ ಹದಿನಾರು ಸಿಸಿ ಕೆಮರಾ ಅಳವಡಿಸಿದ್ದು, ಠಾಣೆಯಿಂದಲೇ ಸಂಚಾರ, ಇನ್ನಿತರ ಕಾನೂನು ಸಂಬಂಧಿ ಚಟುವಟಿಕೆಯನ್ನು ಗಮನಿಸಲಾಗುತ್ತದೆ. ಇದು ಭದ್ರತೆಗೆ ಇನ್ನಷ್ಟು ಸಹಕಾರ ನೀಡಲಿದೆ.

ವಾಲಸಿರಿ ಉತ್ಸವ
ಮಂಗಳವಾರ ಬೆಳಗ್ಗೆ ಜಾತ್ರೆಯ ಹಿನ್ನೆಲೆಯಲ್ಲಿ ಪೂಜಾ ಕಾರ್ಯಕ್ರಮಗಳು ನಡೆದವು. ಅಜ್ಜಾವರ ಶ್ರೀ ಶಂಕರ ಭಾರತೀ
ವೇದ ಪಾಠಶಾಲಾ ವಿದ್ಯಾರ್ಥಿಗಳಿಂದ ವೇದ ಪಾರಾಯಣ ನಡೆಯಿತು. ರಾತ್ರಿ ಮಿತ್ತೂರು ದೈವಗಳ ಭಂಡಾರ ಮತ್ತು
ಕಾನತ್ತಿಲ ದೈವಗಳ ಭಂಡಾರ ಆಗಮಿಸಿ, ಅನಂತರ ವಾಲಸಿರಿ ಉತ್ಸವ ನಡೆಯಿತು. ಈ ಸಂದರ್ಭ ಆಡಳಿತ ಮೊಕ್ತೇಸರ ಡಾ| ಹರಪ್ರಸಾದ್‌ ತುದಿಯಡ್ಕ ಸಹಿತ ಸಮಿತಿ ಸದಸ್ಯರು, ನೂರಾರು ಭಕ್ತರು ಉಪಸ್ಥಿತರಿದ್ದರು.

ಕೃಷಿ ವಸ್ತುಪ್ರದರ್ಶನಕ್ಕೆ ಚಾಲನೆ
ಜಾತ್ರೆ ಅಂಗವಾಗಿ ಕೃಷಿ ಇಲಾಖೆಯಿಂದ ಗುರುಭವನದ ವಠಾರದಲ್ಲಿ ಆಯೋಜಿಸಿದ ಕೃಷಿ ವಸ್ತು ಪ್ರದರ್ಶನಕ್ಕೆ ಚಾಲನೆ
ನೀಡಲಾಯಿತು. ವಸ್ತು ಪ್ರದರ್ಶನವನ್ನು ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ ಉದ್ಘಾಟಿಸಿದರು. ತಾ.ಪಂ. ಸದಸ್ಯ ತೀರ್ಥರಾಮ, ಸಹಾಯಕ ಕೃಷಿ ನಿರ್ದೇಶಕ ಕೆ.ಜಿ. ಪಾಲಿಚಂದ್ರ, ತಾಂತ್ರಿಕ ಅಧಿಕಾರಿ ಮೋಹನ್‌ ನಂಗಾರ್‌ ಉಪಸ್ಥಿತರಿದ್ದರು.

ಹೆಚ್ಚುವರಿ ಪೊಲೀಸ್‌
ಜಾತ್ರೆಗೆ ಭದ್ರತಾ ದೃಷ್ಟಿಯಿಂದ ಪುತ್ತೂರು ಸಬ್‌ ಡಿವಿಜನ್‌ ವ್ಯಾಪ್ತಿಯಿಂದ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ. ಗೃಹರಕ್ಷಕ ದಳ, ಪೊಲೀಸರು ಸೇರಿ 150ಕ್ಕೂ ಅಧಿಕ ಮಂದಿ ಭದ್ರತಾ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿದೆ ಎಂದು ಸುಳ್ಯ ಪೊಲೀಸ್‌ ಠಾಣೆ ಇನ್‌ಸ್ಪೆಕ್ಟರ್‌ ಮಂಜುನಾಥ ‘ಉದಯವಾಣಿ’ಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

Bantwala1

Bantwala: ಅಧಿಕಾರಿಗಳ ನಡೆ ವಸತಿ ನಿಲಯಗಳ ಕಡೆ; ವಿನೂತನ ಕಾರ್ಯಕ್ರಮ

arrested

Illegal immigrants; ಬಂಧಿತ ಪಾಕ್‌ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?

1-kanna

Karnataka; ವಲಸಿಗರು ಈ ನಾಡಿಗೊಂದು ಸಮಸ್ಯೆ ಆಗದಿರಲಿ…

1-vtu

Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್‌ ಪದವಿ ಕೊಡಲಿದೆ ವಿಟಿಯು!

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆ

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್‌ಬಾಟ್‌ ಹೇಳಿಕೆ

NIkhil KUMMI

Channapatna by-election; ನಿಖಿಲ್ ಗೆ ನಿರೀಕ್ಷೆಗೂ ಮೀರಿ ಗೆಲುವು: ಭವಿಷ್ಯ

1-madaraa

CM ಆಗುವ ಅರ್ಹತೆ ಇದ್ದರೂ ಬೇಡದ ಖಾತೆ: ಗುಡುಗಿದ ಮಾದಾರ ಶ್ರೀ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

Gangolli

Puttur: ಗಾಯಾಳು ವಿದ್ಯಾರ್ಥಿನಿ ಸಾವು

1

Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

tractor

Farmers; ಶೂನ್ಯ ಬಡ್ಡಿಯ ಕೃಷಿ ಸಾಲಕ್ಕೆ ಬಡ್ಡಿ ಕಟ್ಟಲು ಸೂಚನೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Bantwala1

Bantwala: ಅಧಿಕಾರಿಗಳ ನಡೆ ವಸತಿ ನಿಲಯಗಳ ಕಡೆ; ವಿನೂತನ ಕಾರ್ಯಕ್ರಮ

arrested

Illegal immigrants; ಬಂಧಿತ ಪಾಕ್‌ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?

1-kanna

Karnataka; ವಲಸಿಗರು ಈ ನಾಡಿಗೊಂದು ಸಮಸ್ಯೆ ಆಗದಿರಲಿ…

1-vtu

Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್‌ ಪದವಿ ಕೊಡಲಿದೆ ವಿಟಿಯು!

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆ

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್‌ಬಾಟ್‌ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.