ಕುಮಾರಸ್ವಾಮಿ ಮತ್ತೆ ಮುಖ್ಯಮಂತ್ರಿ: ಫಾರೂಕ್‌ ವಿಶ್ವಾಸ


Team Udayavani, Jan 10, 2018, 4:55 PM IST

10–Jan-22.jpg

ಕಡಬ: ಬಿಜೆಪಿ ಹಾಗೂ ಕಾಂಗ್ರೆಸ್‌ನಿಂದ ರೋಸಿ ಹೋಗಿರುವ ರಾಜ್ಯದ ಜನತೆ ಮುಂದಿನ ಚುನಾವಣೆಯಲ್ಲಿ ಜೆಡಿಎಸ್‌ ಪರ ಮತ ಚಲಾಯಿಸಲಿದ್ದು, ಎಚ್‌.ಡಿ. ಕುಮಾರಸ್ವಾಮಿ ಅವರು ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗಿ ಆಡಳಿತ ಚುಕ್ಕಾಣಿ ಹಿಡಿಯುವುದು ನಿಶ್ಚಿತ ಎಂದು ಜೆಡಿಎಸ್‌ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಎಂ. ಫಾರೂಕ್‌ ಭವಿಷ್ಯ ನುಡಿದಿದ್ದಾರೆ.

ಅವರು ಕಡಬದ ಅನುಗ್ರಹ ಸಭಾಭವನದಲ್ಲಿ ಜರಗಿದ ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಡಬ ತಾಲೂಕು ಜೆಡಿಎಸ್‌ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ರಾಜ್ಯದಲ್ಲಿ ಈಗ ಆಡಳಿತ ನಡೆಸುತ್ತಿರುವ ಕಾಂಗ್ರೆಸ್‌ ನೇತೃತ್ವದ ಸರಕಾರ ಜಾತಿ ರಾಜಕೀಯ, ಕೋಮುಗಲಭೆ, ದಲಿತ ವಿರೋಧಿ ಚಟುವಟಿಕೆಗೆ ಕಡಿವಾಣ ಹಾಕುವಲ್ಲಿ ವಿಫಲವಾಗಿದೆ. ಬಿಜೆಪಿ ಹಿಂದೂ-ಮುಸ್ಲಿಮರ ನಡುವೆ ಗಲಭೆ ಸೃಷ್ಟಿಸಿ ಅಧಿಕಾರ ಪಡೆಯುವ ಕನಸು ಕಾಣುತ್ತಿದೆ. ಈ ಎರಡೂ ಪಕ್ಷಗಳ ದುರಾಡಳಿತ ಹಾಗೂ ಭ್ರಷ್ಟ ನಡೆಯಿಂದ ಬೇಸತ್ತಿರುವ ಜನ ಜೆಡಿಎಸ್‌ ಪರವಾಗಿ ನಿಂತಿದ್ದಾರೆ. ಕರಾವಳಿಯಲ್ಲೂ ಜೆಡಿಎಸ್‌ ಪ್ರಬಲ ಶಕ್ತಿಯಾಗಿ ಹೊರಹೊಮ್ಮುತ್ತಿದೆ. ಈ ಭಾಗದಲ್ಲಿ ಪಕ್ಷವನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ಗ್ರಾಮಮಟ್ಟದಲ್ಲಿ ಸಂಘಟನಾತ್ಮಕವಾಗಿ ಕೆಲಸ ಮಾಡುವ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದರು.

ಜೆಡಿಎಸ್‌ ದ.ಕ. ಜಿಲ್ಲಾಧ್ಯಕ್ಷ ಮಹಮ್ಮದ್‌ ಕುಂಞಿ ಮಾತನಾಡಿ, ರಾಜ್ಯದಲ್ಲಿ ಈ ಬಾರಿ ಜೆಡಿಎಸ್‌ ನೇತೃತ್ವದ ಸರಕಾರ ಅಧಿಕಾರಕ್ಕೆ ಬರುವುದರಲ್ಲಿ ಸಂಶಯವಿಲ್ಲ. ಕರಾವಳಿ ಭಾಗದಿಂದ ಜೆಡಿಎಸ್‌ನ ಕನಿಷ್ಠ ಮೂವರು ಶಾಸಕರನ್ನು ಆಯ್ಕೆ ಮಾಡಬೇಕಿದೆ ಎಂದರು.

ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಜಾಕೆ ಮಾಧವ ಗೌಡ, ರಾಜ್ಯ ಕಾರ್ಯದರ್ಶಿ ಅಬ್ದುಲ್‌ ರವೂಫ್‌ ಪುತ್ತಿಗೆ ಮಾತನಾಡಿದರು. ಕಡಬ ತಾಲೂಕು ಜೆಡಿಎಸ್‌ ಅಧ್ಯಕ್ಷ ಸಯ್ಯದ್‌ ಮೀರಾ ಸಾಹೇಬ್‌ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಉಪಾಧ್ಯಕ್ಷ ಎಂ.ಬಿ. ಸದಾಶಿವ, ಯುವ ಜನತಾದಳದ ದ.ಕ. ಜಿಲ್ಲಾ ಅಧ್ಯಕ್ಷ ಹರ್ಷಿತ್‌ ಸುವರ್ಣ, ಜಿಲ್ಲಾ ಅಲ್ಪಸಂಖ್ಯಾಕ ಘಟಕದ ಉಪಾಧ್ಯಕ್ಷ ನಾಸಿರ್‌, ಜಿಲ್ಲಾ ಸಂಘಟನ ಕಾರ್ಯದರ್ಶಿ ಮುನೀರ್‌, ಸುಳ್ಯ ತಾಲೂಕು ಅಧ್ಯಕ್ಷ ದಯಾಕರ ಆಳ್ವ, ಸುಳ್ಯ ಕ್ಷೇತ್ರದ ಸಂಭಾವ್ಯ ಅಭ್ಯರ್ಥಿ ವೆಂಕಟೇಶ್‌, ಜಿಲ್ಲಾ ಎಸ್‌ಸಿ ಘಟಕದ ಅಧ್ಯಕ್ಷ ಚೋಮ, ಸುಳ್ಯ ತಾಲೂಕು ಘಟಕದ
ಮುಖಂಡರಾದ ಜೀವನ ನಾರ್ಕೋಡ್‌, ರಾಕೇಶ್‌ ಕುಂಟಿಕಾನ, ಸುಳ್ಯ ವಿಧಾನಸಭಾ ಕ್ಷೇತ್ರದ ಉಪಾಧ್ಯಕ್ಷ ಸೋಮಸುಂದರ, ಸುಳ್ಯ ತಾಲೂಕು ಉಪಾಧ್ಯಕ್ಷ ಸುರೇಶ್‌ ಕುಮಾರ್‌ ನಡ್ಕ, ಜಿಲ್ಲಾ ಸಂಘಟನ ಕಾರ್ಯದರ್ಶಿ ಉತ್ತಮನ್‌ ಶಿರಾಡಿ, ಕಡಬ ತಾಲೂಕು ಯುವ ಜನತಾದಳದ ಅಧ್ಯಕ್ಷ ಹರಿಪ್ರಸಾದ್‌ ಎನ್ಕಾಜೆ, ತಾಲೂಕು ಜೆಡಿಎಸ್‌ ಉಪಾಧ್ಯಕ್ಷ ಮೋಹನ ಗೌಡ ಪಂಜೋಡಿ, ಜಿಲ್ಲಾ ಮುಖಂಡ ಕೆ.ಟಿ. ಥಾಮ್ಸನ್‌, ಕಡಬ ತಾಲೂಕು ಘಟಕದ ಕೋಶಾಧಿಕಾರಿ ರಾಜು ಕೆ.ಎಸ್‌. ಪದವು ಉಪಸ್ಥಿತರಿದ್ದರು.

ವಿವಿಧ ಪಕ್ಷಗಳ ಕಾರ್ಯಕರ್ತರು ಜೆಡಿಎಸ್‌ಗೆ ಸೇರ್ಪಡೆಗೊಂಡರು. ಕಡಬ ತಾಲೂಕು ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರನ್ನಾಗಿ ದಿಲ್‌ಫರ್‌ ಫಾರೂಕ್‌ ಅವರನ್ನು ನೇಮಿಸಿ, 15 ಮಂದಿಯ ಕಾರ್ಯಕಾರಿ ಸಮಿತಿ ರಚಿಸಲಾಯಿತು. ಸಯ್ಯದ್‌ ಮೀರಾ ಸಾಹೇಬ್‌ ಸ್ವಾಗತಿಸಿ, ಕಡಬ ತಾಲೂಕು ಉಪಾಧ್ಯಕ್ಷ ಚಂದ್ರಶೇಖರ ಗೌಡ ಕೋಡಿಬೈಲ್‌ ವಂದಿಸಿದರು. ಮಹಿಳಾ ಘಟಕದ ಅಧ್ಯಕ್ಷೆ ಲೂಸಿ ವಿಕ್ಟರ್‌ ನಿರೂಪಿಸಿದರು.

ಟಾಪ್ ನ್ಯೂಸ್

Parameshwar

Waqf issue; ಬಿಜೆಪಿಯಿಂದ ಕೋಮು ಗಲಭೆಗೆ ಯತ್ನ: ಕಾಂಗ್ರೆಸ್‌

Chaluvarayaswamy

Kumaraswamy ಅವರಿಗೆ ಜತೆಗಿರುವಾಗ ಕೊಚ್ಚೆ ವಾಸನೆ ಬರಲಿಲ್ಲವೇ?: ಚಲುವರಾಯಸ್ವಾಮಿ ತಿರುಗೇಟು

Mangaluru-Sahakara

Mangaluru: ಸಹಕಾರ ಆಂದೋಲನ ಜನರ ಆಂದೋಲನವಾಗಲಿ: ಸಚಿವ ಕೆ.ಎನ್‌.ರಾಜಣ್ಣ

1-reee

BJP; 50 ಅಲ್ಲ ,100 ಕೋಟಿ ರೂ. ಆಮಿಷ: ಶಾಸಕ ರವಿ ಗಣಿಗ!

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

5

Sullia: ಅಪಘಾತ; ಪರಾರಿಯಾಗಿದ್ದ ಲಾರಿ ವಶಕ್ಕೆ

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

2-news

ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ

Puturu-Crime

Puttur: ‘ಕಾಡಿನೊಳಗಿದ್ದೇನೆ ದಾರಿ ಸಿಗುತ್ತಿಲ್ಲ’ ಎಂದಾತ 7 ತಿಂಗಳ ಬಳಿಕವೂ ಪತ್ತೆಯಾಗಿಲ್ಲ!

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Parameshwar

Waqf issue; ಬಿಜೆಪಿಯಿಂದ ಕೋಮು ಗಲಭೆಗೆ ಯತ್ನ: ಕಾಂಗ್ರೆಸ್‌

Chaluvarayaswamy

Kumaraswamy ಅವರಿಗೆ ಜತೆಗಿರುವಾಗ ಕೊಚ್ಚೆ ವಾಸನೆ ಬರಲಿಲ್ಲವೇ?: ಚಲುವರಾಯಸ್ವಾಮಿ ತಿರುಗೇಟು

Mangaluru-Sahakara

Mangaluru: ಸಹಕಾರ ಆಂದೋಲನ ಜನರ ಆಂದೋಲನವಾಗಲಿ: ಸಚಿವ ಕೆ.ಎನ್‌.ರಾಜಣ್ಣ

Lokayukta

MUDA ಮಾಜಿ ಆಯುಕ್ತ ನಟೇಶ್‌ಗೆ ಲೋಕಾ ನೋಟಿಸ್‌

1-reee

BJP; 50 ಅಲ್ಲ ,100 ಕೋಟಿ ರೂ. ಆಮಿಷ: ಶಾಸಕ ರವಿ ಗಣಿಗ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.