ಲಾಲು ಪರ ಲಾಬ್ಬಿ: ತನಿಖೆಗೆ ಆದೇಶಿಸಿದ ಸಿಎಂ ಆದಿತ್ಯನಾಥ್
Team Udayavani, Jan 11, 2018, 3:59 PM IST
ಲಕ್ನೋ : ಆರ್ಜೆಡಿ ಮುಖ್ಯಸ್ಥ ಹಾಗೂ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ಗೆ ಮೇವು ಹಗರಣದಲ್ಲಿ ಶಿಕ್ಷೆಯ ಪ್ರಮಾಣ ಪ್ರಕಟವಾಗುವುದಕ್ಕೆ ಎರಡು ದಿನಗಳಿರುವಾಗ ಲಾಲುಗೆ ಕಡಿಮೆ ಶಿಕ್ಷೆ ವಿಧಿಸುವಂತೆ ಕೋರಿ ಲಾಲು ಆಪ್ತರು ಕೆಲವರು ಸಿಬಿಐ ವಿಶೇಷ ನ್ಯಾಯಾಧೀಶರಿಗೆ ಫೋನ್ ಮಾಡಿರುವ ಬಗ್ಗೆ ಮಾಧ್ಯಮಗಳಲ್ಲಿ ಪ್ರಕಟವಾದ ವರದಿಯನ್ನು ಗಮನಿಸಿ ಮುಖ್ಯ ಮಂತ್ರಿ ಯೋಗಿ ಆದಿತ್ಯನಾಥ್ ಅವರು ತನಿಖೆಗೆ ಆದೇಶಿಸಿದ್ದಾರೆ.
ಈ ಫೋನ್ ಕರೆಗಳಿಂದಾಗಿ ಸಿಬಿಐ ಕೋರ್ಟಿನ ನ್ಯಾಯಾಧೀಶರು ನಿರಂತರ ಎರಡು ದಿನ ಶಿಕ್ಷೆ ಪ್ರಮಾಣ ಪ್ರಕಟನೆಯನ್ನು ಮುಂದೂಡಿದ್ದರು ಮಾತ್ರವಲ್ಲದೇ ಅವರೇ ಖುದ್ದಾಗಿ ತನಗೆ ಕೆಲವು ಅನಾಮಧೇಯ ಕರೆಗಳು ಬಂದಿವೆ ಎಂದು ಹೇಳಿದ್ದರು.
ಮುಖ್ಯಮಂತ್ರಿಗಳ ಆದೇಶದ ಪ್ರಕಾರ ಈಗಿನ್ನು ಝಾನ್ಸಿ ವಿಭಾಗೀಯ ಕಮಿಶನರ್ ಈ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ
Kinnigoli: ಪಕ್ಷಿಕೆರೆ; ಕೊಲೆ ಪ್ರಕರಣ ಮತ್ತಷ್ಟು ಸಂಗತಿಗಳು ಬೆಳಕಿಗೆ?
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.