25ಕ್ಕೆ ರಾಜ್ಯಾದ್ಯಂತ ಮಹದಾಯಿ ಬಂದ್‌


Team Udayavani, Jan 12, 2018, 6:00 AM IST

Karnataka-Bandh–201811.jpg

ಬೆಂಗಳೂರು: ಮಹದಾಯಿ ಮತ್ತು ಕಳಸಾ-ಬಂಡೂರಿ ಯೋಜನೆಗೆ ಒತ್ತಾಯಿಸಿ ಜ. 25ರಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಜತೆಗೆ 28ಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿ ಅವರಿಗೆ ಕಪ್ಪುಬಾವುಟ ಪ್ರದರ್ಶಿಸಲು ನಿರ್ಧರಿಸಲಾಗಿದೆ.

ಈ ಸಂಬಂಧ ಕನ್ನಡ ಚಳವಳಿ ವಾಟಾಳ್‌ ಪಕ್ಷದ ವಾಟಾಳ್‌ ನಾಗರಾಜ್‌ ಮತ್ತು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ. ಗೋವಿಂದು ಅವರು ಮಾಹಿತಿ ನೀಡಿದ್ದಾರೆ. ಈ ಮೊದಲು ಇದೇ 27ಕ್ಕೆ ಬಂದ್‌ ಆಚರಿಸಲು ನಿರ್ಧರಿಸಲಾಗಿತ್ತು. ಆದರೆ, ಸಾಲುಸಾಲು ರಜೆಗಳಿರುವುದರಿಂದ ಎರಡು ದಿನ ಮೊದಲು ಅಂದರೆ 25ಕ್ಕೇ ಬಂದ್‌ ಆಚರಿಸಲು ನಿರ್ಧರಿಸಲಾಗಿದೆ ಎಂದಿದ್ದಾರೆ.

ಮಹದಾಯಿಗಾಗಿ ಕಳೆದ ಮೂರು ವರ್ಷಗಳಿಂದ ಉತ್ತರ ಕರ್ನಾಟಕದ ಜನ ಕಣ್ಣೀರಿನಲ್ಲಿ ಕೈತೊಳೆಯುತ್ತಿದ್ದಾರೆ. ಆದರೆ, ಬಿಜೆಪಿ ನಾಯಕರು ದಿನಕ್ಕೊಂದು ಹೇಳಿಕೆ ನೀಡುವ ಮೂಲಕ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ. ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಹಾಗೂ ಬಿಜೆಪಿ ನಾಯಕರ ಧೋರಣೆ ಖಂಡಿಸಿ 25ರಂದು ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ರಾಜ್ಯಾದ್ಯಂತ ಬಂದ್‌ ಆಚರಿಸಲಾಗುವುದು ಎಂದು ವಾಟಾಳ್‌ ನಾಗರಾಜ್‌ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

25ರ ಬದಲು 27ಕ್ಕೆ ಬಂದ್‌
ಈ ಮೊದಲು ಜ. 27ರಂದು ಬಂದ್‌ಗೆ ಕರೆ ನೀಡಲಾಗಿತ್ತು. ಆದರೆ, ಸಾಲು ಸಾಲು ರಜೆ ಇರುವುದರಿಂದ ಬಂದ್‌ ಪರಿಣಾಮಕಾರಿಯಾಗಿ ಆಗುವುದಿಲ್ಲವೆಂದು ಮಹದಾಯಿ ಹೋರಾಟಗಾರರು ಮನವಿ ಮಾಡಿದ ಹಿನ್ನೆಲೆಯಲ್ಲಿ 25ಕ್ಕೆ ಕರೆ ನೀಡಲಾಗಿದೆ. ಇದಕ್ಕೆ ಡಾ.ರಾಜ್‌ಕುಮಾರ್‌ ಅಭಿಮಾನಿಗಳ ಸಂಘ, ಕರ್ನಾಟಕ ರಕ್ಷಣಾ ವೇದಿಕೆ, ಕನ್ನಡ ಚಿತ್ರರಂಗ ಸೇರಿದಂತೆ ರಾಜ್ಯದ ನೂರಾರು ಕನ್ನಡಪರ ಸಂಘಟನೆಗಳು ಕೈಜೋಡಿಸಿವೆ. ಅಂದು ಬೆಳಿಗ್ಗೆ 10ಕ್ಕೆ ನಗರದ ಪುರಭವನದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ಬೃಹತ್‌ ಪ್ರತಿಭಟನಾ ಮೆರವಣಿಗೆ ಹೊರಡಲಿದ್ದು, ಲಕ್ಷ ಜನ  ಭಾಗಿಯಾಗುವ ನಿರೀಕ್ಷೆ ಇದೆ ಎಂದು ಹೇಳಿದರು.

ಚಿತ್ರಪ್ರದರ್ಶನ, ಖಾಸಗಿ ಮತ್ತು ಸರ್ಕಾರಿ ಬಸ್‌ಗಳ ಸಂಚಾರ, ಟ್ಯಾಕ್ಸಿ-ಮ್ಯಾಕ್ಸಿಕ್ಯಾಬ್‌, ಲಾರಿಗಳು ಕಾರ್ಯಾಚರಣೆ ಇರುವುದಿಲ್ಲ. ಈ ಸಂಬಂಧ ಆಯಾ ಸಂಘಟನೆಗಳೊಂದಿಗೆ ಚರ್ಚಿಸಲಾಗುವುದು. ಹಾಲು, ಔಷಧಿ, ವೈದ್ಯಕೀಯ ಸೇವೆಯಲ್ಲಿ ಯಾವುದೇ ವ್ಯತ್ಯಯ ಇರುವುದಿಲ್ಲ ಎಂದೂ ಅವರು ಸ್ಪಷ್ಟಪಡಿಸಿದರು.

ಇದಲ್ಲದೆ, ಜ. 28ರಂದು ನಗರಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಅಂದು ಪ್ರಧಾನಿ ಸಭೆಯಲ್ಲಿ ಕಪ್ಪುಬಾವುಟ ಪ್ರದರ್ಶಿಸುವ ಮೂಲಕ ಪ್ರತಿಭಟಿಸಲಾಗುವುದು. ಈ ಹಿಂದೆ ಹಲವು ಬಾರಿ ಪ್ರಧಾನಿಗಳು ರಾಜ್ಯಕ್ಕೆ ಆಗಮಿಸಿದ್ದಾರೆ. ಆದರೆ, ಯಾವತ್ತೂ ಮಹದಾಯಿ ಮತ್ತು ಕಳಸಾ-ಬಂಡೂರಿ ಬಗ್ಗೆ ಚಕಾರ ಎತ್ತಿಲ್ಲ. ಈ ಬಾರಿ ತಮ್ಮ ನಿಲುವು ಸ್ಪಷ್ಟಪಡಿಸಲೇಬೇಕು ಎಂದು ಪಟ್ಟುಹಿಡಿಯಲಾಗುವುದು. ಇದಕ್ಕೆ ಎಲ್ಲ ಕನ್ನಡಪರ ಸಂಘಟನೆಗಳು ಪ್ರತಿಷ್ಠೆ ಬದಿಗೊತ್ತಿ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಮಹದಾಯಿ ಬಗ್ಗೆ ಮೌನವೇಕೆ?
ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ. ಗೋವಿಂದು ಮಾತನಾಡಿ, ಬರೀ ಪಕ್ಷ ಸಂಘಟನೆ ಬಗ್ಗೆ ಬಿಜೆಪಿ ನಾಯಕರು ಮಾತನಾಡುತ್ತಿದ್ದಾರೆ. ಮಹದಾಯಿ ಕುರಿತು ಯಾಕೆ ಮೌನ? ಈಗಲಾದರೂ ಪ್ರಧಾನಿಗಳು ಮೌನ ಮುರಿಯಬೇಕು. ತಮ್ಮ ನಿಲುವು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು.

ಮಹದಾಯಿ ವಿಚಾರಕ್ಕೆ ಸಂಬಂಧಿಸಿದಂತೆ ಗೋವಾ ಮುಖ್ಯಮಂತ್ರಿ ಮನೋಹರ್‌ ಪರಿಕ್ಕರ್‌ ಅವರು ತಮಗೆ ಬರೆದ ಪತ್ರವನ್ನು ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಬೈಬಲ್‌ ರೀತಿಯಲ್ಲಿ ಓದಿದರು. ಆದರೆ, ಈಗ ಪರಿಕ್ಕರ್‌ ನಿಲುವು ಬದಲಾಗಿದೆ. ಈ ಬಗ್ಗೆ ಯಡಿಯೂರಪ್ಪ ಉತ್ತರಿಸಬೇಕು ಎಂದು ಒತ್ತಾಯಿಸಿದ ಸಾ.ರಾ. ಗೋವಿಂದು, 25ರಂದು ಯಾವುದೇ ಚಿತ್ರೀಕರಣ ಮತ್ತು ಚಿತ್ರಪ್ರದರ್ಶನ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಶಿವರಾಮೇಗೌಡ, ಪದಾಧಿಕಾರಿಗಳಾದ ಕೆ.ಆರ್‌. ಕುಮಾರ್‌, ಗಿರೀಶ್‌ ಮತ್ತಿತರರು ಉಪಸ್ಥಿತರಿದ್ದರು.

ಸುಪ್ರೀಂಗೆ ಮೊರೆ
ಮಹದಾಯಿ ವಿಚಾರವಾಗಿ ಗೋವಾ ಮುಖ್ಯಮಂತ್ರಿ ಮನೋಹರ್‌ ಪರಿಕ್ಕರ್‌, ಯಡಿಯೂರಪ್ಪ ಅವರಿಗೆ ಬರೆದ ಪತ್ರವನ್ನು ಆಧರಿಸಿ ಸುಪ್ರೀಂ ಕೋರ್ಟ್‌ ಮೊರೆ ಹೋಗುವುದಾಗಿ ವಾಟಾಳ್‌ ನಾಗರಾಜ್‌ ತಿಳಿಸಿದರು.

ನೀರು ಬಿಡುವ ಸಂಬಂಧ ಪತ್ರದಲ್ಲಿ ಒಂದು ರೀತಿ ಹೇಳಿಕೆ ನೀಡಿದ್ದರೆ, ಈಗ ಮತ್ತೂಂದು ರೀತಿ ಹೇಳಿಕೆ ನೀಡುತ್ತಿದ್ದಾರೆ. ಕನ್ನಡಿಗರೊಂದಿಗೆ ಗೋವಾ ಮುಖ್ಯಮಂತ್ರಿಗಳು ಚೆಲ್ಲಾಟ ಆಡುತ್ತಿದ್ದಾರೆ. ಪತ್ರವನ್ನು ತೆಗೆದುಕೊಂಡು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ ಮೊರೆಹೋಗಬೇಕು. ಇಲ್ಲವಾದರೆ, ನಾವೇ ಕೋರ್ಟ್‌ ಮೊರೆಹೋಗುತ್ತೇವೆ ಎಂದು ಹೇಳಿದರು.

ದಿನಕ್ಕೊಂದು ಹೇಳಿಕೆ ನೀಡುತ್ತಿರುವ ಮನೋಹರ್‌ ಪರಿಕ್ಕರ್‌ ಅವರಿಗೆ ಗ್ರಾಮ ಪಂಚಾಯ್ತಿ ಅಧ್ಯಕ್ಷರಾಗಲೂ ಯೋಗ್ಯತೆ ಇಲ್ಲ. ಸರ್ಕಾರವನ್ನು ಪ್ರಧಾನಿ ವಜಾಗೊಳಿಸಿ, ರಾಜ್ಯಕ್ಕೆ ನೀರು ಹರಿಸಬೇಕು ಎಂದು ಒತ್ತಾಯಿಸಿದರು.

ಟಾಪ್ ನ್ಯೂಸ್

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Six Naxalites to be brought into the mainstream soon: Process is fast

Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು

Davanagere: Opposition parties should not make baseless allegations: CM Siddaramaiah

Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ

Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Private-Bus

Private Bus fare: ಶೀಘ್ರದಲ್ಲೇ ಖಾಸಗಿ ಬಸ್‌ ಪ್ರಯಾಣ ದರವೂ ಏರಿಕೆ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

Kundapura: ಬಟ್ಟೆ ವ್ಯಾಪಾರಿ ನಾಪತ್ತೆ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-y-1-2-c

Yakshagana; 500 ವಿದ್ಯಾರ್ಥಿಗಳಿಂದ ಯಕ್ಷ ರಂಗಪ್ರವೇಶ

1-y-1-2

Yakshagana; ಕಲಾಸ್ಪಂದನದ ವಿಶಿಷ್ಟ ಪ್ರಯೋಗ ಯಕ್ಷವೀಣಾ

1-y-1

Yakshagana; ರಂಜಿಸಿದ ಯಕ್ಷಗಾನಾರ್ಚನೆ, ಭಕ್ತಿ ಸಂಗೀತ, ದಾಶರಥಿ ದರ್ಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.