ಗುರುದೇವ್ ಲೋಕಾರ್ಪಣೆ
Team Udayavani, Jan 12, 2018, 11:41 AM IST
ಬೆಂಗಳೂರು: ಆರ್ಟ್ ಆಫ್ ಲಿವಿಂಗ್‌ನ ಸಂಸ್ಥಾಪಕ ಶ್ರೀಶ್ರೀ ರವಿಶಂಕರ್ ಗುರೂಜಿಯವರ ಮೊಟ್ಟ ಮೊದಲ ಅಧಿಕೃತ ಜೀವನ ಚರಿತ್ರೆ “ಗುರುದೇವ್: ಆನ್ ದಿ ಪ್ಲೆಟಿವ್ ಆಫ್ ದಿ ಪೀಕ್’ ಗುರುವಾರ ಬಿಡುಗಡೆಗೊಂಡಿತು. ಸ್ವತಃ ಶ್ರೀಶ್ರೀ ರವಿಶಂಕರ್ ಗುರೂಜಿಯವರ ಕಿರಿಯ ಸಹೋದರಿ ಭಾನುಮತಿ ನರಸಿಂಹನ್ ಅವರು ಈ ಜೀವನ ಚರಿತ್ರೆ ಬರೆದಿದ್ದು ವೆಸ್ಟ್‌ಲ್ಯಾಂಡ್ ಪ್ರಕಾಶನ ಸಂಸ್ಥೆ ಇದನ್ನು ಪ್ರಕಟಿಸಿದೆ.
ಕನಕಪುರ ರಸ್ತೆಯ ಆರ್ಟ್ ಆಫ್ ಲಿವಿಂಗ್ ಇಂಟರ್‌ನ್ಯಾಷನಲ್ ಸಂಸ್ಥೆಯಲ್ಲಿ ಗುರುವಾರ ಸಂಜೆ ನಡೆದ ಸಮಾರಂಭದಲ್ಲಿ ಗುರೂಜಿಯವರ ಜೀವನ ಚರಿತ್ರೆ ಬಿಡುಗಡೆಗೊಳಿಸಲಾಯಿತು. ಸುಪ್ರೀಂಕೋರ್ಟ್‌ನ ನಿವೃತ್ತ ಮುಖ್ಯನ್ಯಾಯಮೂರ್ತಿ ಎಂ.ಎನ್. ವೆಂಕಟಾಚಲಯ್ಯ, ಮಣಿಪಾಲ್ ಗ್ಲೋಬಲ್ ಎಜುಕೇಷನ್ ಸಂಸ್ಥೆಯ ಅಧ್ಯಕ್ಷ ಟಿ.ವಿ. ಮೋಹನದಾಸ್ ಪೈ, ಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಮತ್ತಿತರ ಗಣ್ಯರು ಸಾಕ್ಷಿಯಾದರು.
ಈ ಸಂದರ್ಭದಲ್ಲಿ ಗುರೂಜಿಯವರ ಜೊತೆಗಿನ ತಮ್ಮ ನೆನಪುಗಳನ್ನು ಹಂಚಿಕೊಂಡ ಭಾನುಮತಿ ನರಸಿಂಹನ್, ಯಾವಾಗಲೂ ನಾನು ಗುರೂಜಿಯವರ ಅನುಕರಣೆ ಮಾಡುತ್ತಾ ಬಂದಿದ್ದೇನೆ. ಚಿಕ್ಕವಳಿದ್ದಾಗ ಗೊತ್ತಿಲ್ಲದೇ ಅನುಕರಣೆ ಮಾಡುತ್ತಿದ್ದೆ, ನಂತರ ಜ್ಞಾನದೊಂದಿಗೆ ಅವರನ್ನು ಅನುಸರಿಸಿದೆ. ಅವರ ಪ್ರತಿಯೊಂದು ಮಾತು ಹಾಗೂ ಪ್ರತಿಯೊಂದು ಹೆಜ್ಜೆ ನನಗೆ ಸದಾ ಮಾರ್ಗದರ್ಶನ ಮಾಡಿವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ
CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್ ಸಿಸಿಬಿಗೆ ವರ್ಗಾವಣೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.