ಟ್ಯಾಂಕ್‌ ಕಟ್ಟಿಸುವಾಗ ಸುಮ್ಮನಿದ್ದು, ಪೈಪ್‌ ತಂದಾಗ ಜಾಗ ತಮ್ಮದೆಂದರು!


Team Udayavani, Jan 12, 2018, 4:38 PM IST

12-Jan-24.jpg

ಉಪ್ಪಿನಂಗಡಿ: ಗ್ರಾಮಸ್ಥರಿಗೆ ಕುಡಿಯುವ ನೀರೊದಗಿಸಲು ಸರಕಾರಿ ವೆಚ್ಚದಲ್ಲಿ, ಸರಕಾರಿ ಭೂಮಿಯಲ್ಲಿ ಟ್ಯಾಂಕ್‌ ನಿರ್ಮಿಸಿ, ಗ್ರಾಮ ಪಂಚಾಯತ್‌ಗೆ ಹಸ್ತಾಂತರಿಸಿದ ಮೇಲೆ, ಟ್ಯಾಂಕ್‌ ಇರುವ ಭೂಮಿ ಅಕ್ರಮ ಸಕ್ರಮದಡಿ ತನ್ನ ಅನುಭೋಗದಲ್ಲಿದೆ ಎಂದು ವಾದಿಸಿ ಟ್ಯಾಂಕ್‌ಗೆ ಪೈಪ್‌ ಜೋಡಿಸಲು ತಡೆಯೊಡ್ಡಿದ ಘಟನೆ ಬೆಳ್ತಂಗಡಿ ತಾಲೂಕು ಬಾರ್ಯ ಗ್ರಾಮದ ಗಡಿಕಲ್ಲು ಎಂಬಲ್ಲಿಂದ ವರದಿಯಾಗಿದೆ.

ಜಿ.ಪಂ.ನ ಕಳೆದ ಅವಧಿಯಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ ಓವರ್‌ ಹೆಡ್‌ ಟ್ಯಾಂಕ್‌ ನಿರ್ಮಿಸಲಾಗಿತ್ತು. ಆದರೆ, ಖಾಸಗಿ ವ್ಯಕ್ತಿಯೊಬ್ಬರ ಬಳಕೆಗೆ ಅದು ಮೀಸಲಾಗಿದ್ದನ್ನು ಮನಗಂಡ ಸ್ಥಳೀಯರು ಮುಖ್ಯಮಂತ್ರಿವರೆಗೂ ದೂರು ಸಲ್ಲಿಸಿ, ಕುಡಿಯಲು ನೀರು ಕೊಡಿಸಿ ಎಂದು ಆಗ್ರಹಿಸಿದರು.

ನಾಗರಿಕರ ದೂರಿಗೆ ಸ್ಪಂದಿಸಿದ ಜಿ.ಪಂ. ಎಂಜಿನಿಯರಿಂಗ್‌ ವಿಭಾಗ, ಗ್ರಾ.ಪಂ.ಗೆ ಟ್ಯಾಂಕ್‌ ಹಸ್ತಾಂತರಿಸಿತ್ತು. ನೀರು ಸರಬರಾಜು ಪೈಪ್‌ ಅಳವಡಿಸಲು ಮುಂದಾದಾಗ ವ್ಯಕ್ತಿಯೊಬ್ಬರು ತಡೆಯೊಡ್ಡಿದ್ದಾರೆ. ಟ್ಯಾಂಕ್‌ ನಿರ್ಮಿಸುವಾಗ ಸುಮ್ಮನಿದ್ದ ಅವರು, ಆಮೇಲೆ ಬೇಲಿ ಹಾಕಿ, ತಡೆಯೊಡ್ಡಿದ್ದು ಅಚ್ಚರಿ ಮೂಡಿಸಿದೆ. ಈ ಬಗ್ಗೆ ವ್ಯಾಪಕ ಆಕ್ರೋಶವೂ ವ್ಯಕ್ತವಾಗಿದ್ದು, ರಾಜಕೀಯ ಪ್ರಭಾವ ಬಳಸಿ, ಟ್ಯಾಂಕ್‌ ಕಬಳಿಸಲು ಈ ಜಾಗ ಅಕ್ರಮ- ಸಕ್ರಮದಲ್ಲಿ ತನ್ನದಾಗಿದೆ ಎಂದು ವಾದಿಸುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಒಂದು ವೇಳೆ ಅಕ್ರಮ- ಸಕ್ರಮ ಅಡಿ ಖಾಸಗಿಗೆ ಭೂಮಿ ಮಂಜೂರಾಗಿದ್ದರೂ, ಮಂಜೂರಾತಿ ಆದೇಶವನ್ನು ರದ್ದುಪಡಿಸುವ ಅಧಿಕಾರ ಕಂದಾಯ ಇಲಾಖೆಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಬಾರ್ಯ ಗ್ರಾ.ಪಂ. ಅಧ್ಯಕ್ಷ ಪ್ರಶಾಂತ ಪೈ, ಹಿಂದಿನ ಜಿ.ಪಂ. ಅವಧಿಯಲ್ಲಿ ಟ್ಯಾಂಕ್‌ ಕಾಮಗಾರಿಯಾಗಿದ್ದು, ನಮ್ಮ ಅವಧಿಯಲ್ಲಿ ಹಸ್ತಾಂತರಗೊಂಡಿದೆ. ಈ ಟ್ಯಾಂಕ್‌ ಗ್ರಾಮಸ್ಥರಿಗೆ ನೀರು ಪೂರೈಸುವ ಬದಲು ಖಾಸಗಿ ವ್ಯಕ್ತಿಯೊಬ್ಬರ ತೋಟಕ್ಕೆ ಬಳಕೆಯಾಗುತ್ತಿದೆ ಎಂದು ಮುಖ್ಯಮಂತ್ರಿಗಳವರೆಗೂ ಅರ್ಜಿ ಸಲ್ಲಿಕೆಯಾಗಿತ್ತು. ಟ್ಯಾಂಕ್‌ಗೆ ಪೈಪ್‌ ಅಳವಡಿಸಲು ಮುಂದಾದಾಗ ಸ್ಥಳೀಯರೊಬ್ಬರು, ಈ ಭೂಮಿ ಅಕ್ರಮ ಸಕ್ರಮ ಅಡಿಯಲ್ಲಿ ಬಳಕೆಯಲ್ಲಿದೆ ಎಂದು ವಾದಿಸಿ, ಬೇಲಿ ಹಾಕಿದ್ದಾರೆ. ಭೂಮಿಯನ್ನು ಅಳತೆ ಮಾಡಿ, ಗಡಿ ಗುರುತು ಹಾಕಿಕೊಡುವಂತೆ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆಯಾಗಿದ್ದರೂ ಈ ವರೆಗೆ ಅಳತೆ ಕಾರ್ಯ ನಡೆದಿಲ್ಲ. ಗ್ರಾಮಸ್ಥರ ನೀರಿನ ಸಮಸ್ಯೆ ನಿವಾರಿಸಲು ಕೊಳವೆ ಬಾವಿಯಿಂದ ನೇರವಾಗಿ ನೀರು ಸರಬರಾಜು ಮಾಡಲಾಗುತ್ತಿದೆ. ಈ ಟ್ಯಾಂಕ್‌ ಬಳಕೆಯಾಗುತ್ತಿದ್ದರೆ ಸಮರ್ಪಕ ನೀರು ಸರಬರಾಜಿಗೆ ಅವಕಾಶವಾಗುತ್ತಿತ್ತು ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

Horoscope

Daily Horoscope: ಈ ರಾಶಿಯವರಿಗಿಂದು ದಿನವಿಡೀ ಮಿಶ್ರ ಫಲಗಳ ಅನುಭವ

GM-Pancha

Average Income: ದೇಶದ ಗ್ರಾಮ ಪಂಚಾಯ್ತಿ ಆದಾಯ ಕೇವಲ 59 ಮಾತ್ರ

KH-Muniyappa

Ration Card: ರಾಜ್ಯದಲ್ಲಿ ಪಡಿತರ ನೀಡಲು ಹಣದ ಕೊರತೆ ಇಲ್ಲ: ಸಚಿವ ಮುನಿಯಪ್ಪ

udupi-Kota-Mee

Udupi: ಕಸ್ತೂರಿ ರಂಗನ್‌ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ

siddanna-2

Congress ಗ್ಯಾರಂಟಿ ಸುಳ್ಳು ಎಂದು ಸಾಬೀತು ಮಾಡಿ: ಮೋದಿಗೆ ಸಿದ್ದರಾಮಯ್ಯ ಸವಾಲು

BJP FLAG

BJP; ಈ ವಾರವೇ ವಕ್ಫ್ ಹೋರಾಟ: ಅಧಿವೇಶನಕ್ಕೂ ಬಿಸಿ…ಹೇಗಿರಲಿದೆ ಪ್ರತಿಭಟನೆ?

1-USAA

America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tractor

Farmers; ಶೂನ್ಯ ಬಡ್ಡಿಯ ಕೃಷಿ ಸಾಲಕ್ಕೆ ಬಡ್ಡಿ ಕಟ್ಟಲು ಸೂಚನೆ

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

5

Sullia: ಅಪಘಾತ; ಪರಾರಿಯಾಗಿದ್ದ ಲಾರಿ ವಶಕ್ಕೆ

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

2-news

ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Horoscope

Daily Horoscope: ಈ ರಾಶಿಯವರಿಗಿಂದು ದಿನವಿಡೀ ಮಿಶ್ರ ಫಲಗಳ ಅನುಭವ

GM-Pancha

Average Income: ದೇಶದ ಗ್ರಾಮ ಪಂಚಾಯ್ತಿ ಆದಾಯ ಕೇವಲ 59 ಮಾತ್ರ

KH-Muniyappa

Ration Card: ರಾಜ್ಯದಲ್ಲಿ ಪಡಿತರ ನೀಡಲು ಹಣದ ಕೊರತೆ ಇಲ್ಲ: ಸಚಿವ ಮುನಿಯಪ್ಪ

Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ

Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ

8

ಗಂಭೀರ್‌ ಅವರ ಯಾತನೆಯ ತರಬೇತಿ ಶೈಲಿ ಭಾರತಕ್ಕೆ ಹೊಂದಲ್ಲ: ಟಿಮ್‌ ಪೇನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.