ಕುಮಾರ ಉದ್ಯೋಗ’ ಆ್ಯಪ್ ಬಿಡುಗಡೆ
Team Udayavani, Jan 13, 2018, 7:55 AM IST
ಬೆಂಗಳೂರು: ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ಜೆಡಿಎಸ್ “ಕುಮಾರ ಉದ್ಯೋಗ’ ಎಂಬ ಆ್ಯಪ್ ಬಿಡುಗಡೆ ಮಾಡಿದೆ. ಈ ಮೂಲಕ ನಿರುದ್ಯೋಗ ಯುವಕ-ಯುವತಿಯರಿಗೆ ಜೆಡಿಎಸ್ ಸರ್ಕಾರ ಬಂದರೆ ಸರ್ಕಾರಿ ಅಥವಾ ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗ ಕೊಡಿಸುವ ಭರವಸೆ ನೀಡಿದೆ.
ಸ್ವಾಮಿ ವಿವೇಕಾನಂದರ ಹುಟ್ಟುಹಬ್ಬದ ಪ್ರಯುಕ್ತ ಕರ್ನಾಟಕದ ಯುವಕರಿಗೆ ನನ್ನದೊಂದು ಸಣ್ಣ ಉಡುಗೊರೆ ಎಂದು ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಸಂದೇಶ ರವಾನೆಯಾಗುತ್ತಿದ್ದಂತೆ ಒಂದು ಗಂಟೆ ಅವಧಿಯಲ್ಲಿ ಎಂಟು ಸಾವಿರ ಮಂದಿ ನೋಂದಣಿ ಸಹ ಮಾಡಿಕೊಂಡಿದ್ದಾರೆ.
ನೋಂದಣಿ ಹೇಗೆ?: ಉದ್ಯೋಗದ ಹುಡುಕಾಟದಲ್ಲಿರುವ ರಾಜ್ಯದ ನಿರುದ್ಯೋಗಿ ಯುವಕ-ಯುವತಿಯರು ತಮ್ಮ ವಿದ್ಯಾರ್ಹತೆ ಸಮೇತ “ಕುಮಾರ ಉದ್ಯೋಗ’ ಎನ್ನುವ ಅಂಡ್ರಾಯ್ಡ ಅಪ್ಲಿಕೇಶನ್‌ನ್ನು ಗೂಗಲ್ ಅಂಡ್ರಾಯ್ಡ ಪ್ಲೇ ಸ್ಟೋರ್‌ನಿಂದ ಡೌನ್‌ಲೋಡ್ ಮಾಡಿಕೊಂಡು ಮಾಹಿತಿ ಸಲ್ಲಿಸಬಹುದು. ಈ ರೀತಿ ಸಂಗ್ರಹಿಸಿದ ಮಾಹಿತಿ ಪಡೆದು 2018 ರ ವಿಧಾನಸಭೆ ಚುನಾವಣೆಯಲ್ಲಿ ನನ್ನ ನೇತೃತ್ವದ ಸರ್ಕಾರ ರಚನೆ ಆದ ಕೂಡಲೇ ಸರ್ಕಾರಿ/ ಖಾಸಗಿ ಕಂಪನಿಗಳ ಜತೆ ಚರ್ಚಿಸಿ ಆದ್ಯತೆ ಮೇರೆಗೆ ವಿವರ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಉದ್ಯೋಗ ದೊರಕಿಸಿಕೊಡುವ ಯೋಜನೆ ರೂಪಿಸಲಾಗುವುದು. ಚುನಾವಣೆಗೆ ಮೊದಲೇ ಉದ್ಯೋಗದ ಅವಶ್ಯಕತೆ ಇರುವ ಯುವಕ-ಯುವತಿಯರ ವಿವರ ಪಡೆಯಲಾಗುವುದು. ಎಲ್ಲ ವಿವರ ದಾಖಲಾತಿ ಸಮೇತ ಇಡಲಾಗುವುದು ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
MUST WATCH
ಹೊಸ ಸೇರ್ಪಡೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು
Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್‌ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.