ಕೇಂದ್ರ ಚುನಾವಣಾ ಆಯೋಗಕ್ಕೆ ತುರ್ತು ನೋಟಿಸ್‌


Team Udayavani, Jan 13, 2018, 11:50 AM IST

KMC-Soochane-2.jpg

ಬೆಂಗಳೂರು: ಮತದಾರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಸಂಬಂಧಿಸಿದಂತೆ ಆನ್‌ಲೈನ್‌ ನೋಂದಣಿ ವ್ಯವಸ್ಥೆಯಲ್ಲಿನ ಲೋಪಗಳನ್ನು ಸರಿಪಡಿಸಲು ನಿರ್ದೇಶಿಸುವಂತೆ ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ಕೇಂದ್ರ ಚುನಾವಣಾ ಆಯೋಗ ಹಾಗೂ ಚುನಾವಣಾ ಆಯುಕ್ತರಿಗೆ ಹೈಕೋರ್ಟ್‌ ಶುಕ್ರವಾರ ತುರ್ತು ನೋಟಿಸ್‌ ಜಾರಿಗೊಳಿಸಿದೆ.

ಈ ಕುರಿತು ವೈಟ್‌ಫೀಲ್ಡ್‌  ರೈಸಿಂಗ್‌ ಟ್ರಸ್ಟ್‌  ಸಲ್ಲಿಸಿದ್ದ ಪಿಐಎಲ್‌ ಅರ್ಜಿಯ ವಿಚಾರಣೆಯನ್ನು ಹಂಗಾಮಿ ಮುಖ್ಯನ್ಯಾಯಮೂರ್ತಿ ಎಚ್‌.ಜಿ ರಮೇಶ್‌ ಹಾಗೂ ನ್ಯಾಯಮೂರ್ತಿ ಪಿ.ಎಸ್‌ ದಿನೇಶ್‌ ಕುಮಾರ್‌ ಅವರಿದ್ದ ವಿಭಾಗೀಯ ಪೀಠ ನಡೆಸಿತು.

ವಾದ -ಪ್ರತಿವಾದ ಆಲಿಸಿದ ನ್ಯಾಯಪೀಠ, ಅರ್ಜಿದಾರರು ನೀಡಿರುವ ಮಾಹಿತಿ ಮೇರೆಗೆ ಇದುವೆರೆಗೂ ಮತದಾರಪಟ್ಟಿಗೆ ಸೇರ್ಪಡೆಯ ಆನ್‌ಲೈನ್‌  ನೋಂದಣಿ ಪ್ರಕ್ರಿಯೆಯ ಲೋಪಗಳನ್ನು ಸರಿಪಡಿಸಲು ಯಾವ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬುದನ್ನು ತಿಳಿಸುವಂತೆ ಸೂಚಿಸಿ, ಕೇಂದ್ರ ಚುನಾವಣಾ ಆಯೋಗಕ್ಕೆ ತುರ್ತು ನೋಟಿಸ್‌ ಹಾಗೂ ಇತರೆ ಪ್ರತಿವಾದಿಗಳಾದ  ರಾಜ್ಯಸರ್ಕಾರ, ಬಿಬಿಎಂಪಿಗೆ ನೋಟಿಸ್‌ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.

ಮುಂದಿನ ಕೆಲವೇ ತಿಂಗಳಲ್ಲಿ ರಾಜ್ಯವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಮತದಾರಪಟ್ಟಿಗೆ ಹೊಸ ಮತದಾರರ ನೋಂದಣಿ ಪ್ರಕ್ರಿಯೆ ನಡೆಸಲಾಗುತ್ತಿದೆ. ಆದರೆ, ಆನ್‌ಲೈನ್‌ ನೋಂದಣಿಯಲ್ಲಿ ಸಾಕಷ್ಟು ತಾಂತ್ರಿಕ ಲೋಪಗಳಿವೆ. ಯಾವುದೇ ವ್ಯಕ್ತಿ ಅರ್ಜಿ ಸಲ್ಲಿಸಿದ ಸಂಬಂಧ  ಸ್ವೀಕೃತಿ ಪ್ರತಿಯೂ ಲಭ್ಯವಾಗುವುದಿಲ್ಲ. ನೋಂದಣಿ ಪ್ರಕ್ರಿಯೆ ಯಾವ ಹಂತದಲ್ಲಿದೆ,

ಸ್ವೀಕೃತ/ ತಿರಸ್ಕೃತಗೊಂಡಿರುವ ಬಗ್ಗೆ ಮಾಹಿತಿ ಸಿಗುವುದಿಲ್ಲ. ಪರಿಣಾಮ ಮತದಾನ ಪಟ್ಟಿ ಸೇರ್ಪಡೆಗೆ ಪ್ರಯತ್ನಿಸುವವರಿಗೆ ಸಾಕಷ್ಟು ತೊಂದರೆಯಾಗಲಿದೆ. ಈ ನಿಟ್ಟಿನಲ್ಲಿ ಮುಂದಿನ ನಾಲ್ಕು ವಾರಗಳಲ್ಲಿ ಆನ್‌ಲೈನ್‌ ತಾಂತ್ರಿಕ ದೋಷಗಳನ್ನು ಸರಿಪಡಿಸಬೇಕು ಹಾಗೂ ಈ ಪ್ರಕ್ರಿಯೆ ಪೂರ್ಣಗೊಳ್ಳುವ ತನಕ ಚುನಾವಣಾ ದಿನಾಂಕ ಪ್ರಕಟಿಸದಂತೆ  ನಿರ್ದೇಶಿಸುವಂತೆ ಅರ್ಜಿದಾರರು ಕೋರಿದ್ದಾರೆ. 

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿನ ಮತದಾರ ಪಟ್ಟಿ ಪರಿಷ್ಕರಣೆ ನಡೆಯುತ್ತಿದ್ದು, ಸಾಕಷ್ಟು ಜನ ಹೊಸ ಮತದಾರರು ಸೇರ್ಪಡೆಗೊಳ್ಳಲಿದ್ದಾರೆ. ಆನ್‌ಲೈನ್‌ ಲೋಪಗಳಿಂದ ಈ ಪ್ರಕ್ರಿಯೆಯೂ ವಿಳಂಬವಾಗಿದೆ.ಈ ಅರ್ಜಿ ಇತ್ಯರ್ಥವಾಗುವ ತನಕ ಮತದಾರರ ಪಟ್ಟಿ ಬಿಡುಗಡೆ ಮಾಡಬಾರದಂತೆ ಆದೇಶಿಸುವಂತೆಯೂ ಅರ್ಜಿದಾರರು ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-darshan

Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್‌

11-KEA-exam

Bengaluru: 54 ಎಂಜಿನಿಯರಿಂಗ್‌ ಸೀಟ್‌ ಬ್ಲಾಕ್‌: ಕೆಇಎ ಶಂಕೆ

6

Bengaluru: ಕಸವನ್ನು ಗೊಬ್ಬರವಾಗಿಸುವ “ಕಪ್ಪು ಸೈನಿಕ ನೊಣ’!

3-beehive

Bengaluru: ಇನ್ಮುಂದೆ ಜೇನುಗೂಡು ಕಟ್ಟಬೇಕಿಲ್ಲ; 3ಡಿ ಗೂಡು ಆವಿಷ್ಕಾರ!

4-cock

Bengaluru: ಮಾಂಸದ ನಾಟಿ ಕೋಳಿಗೆ ಭರ್ಜರಿ ಡಿಮ್ಯಾಂಡ್‌!

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Mike Tyson: 58 ವರ್ಷದ ಬಾಕ್ಸಿಂಗ್‌ ದಂತಕಥೆ ಟೈಸನ್‌ಗೆ 27 ವರ್ಷದ ಪೌಲ್‌ ಎದುರು ಸೋಲು

Mike Tyson: 58 ವರ್ಷದ ಬಾಕ್ಸಿಂಗ್‌ ದಂತಕಥೆ ಟೈಸನ್‌ಗೆ 27 ವರ್ಷದ ಪೌಲ್‌ ಎದುರು ಸೋಲು

ACC U-19 Asia Cup: ರಾಜ್ಯದ ಮೂವರು

ACC U-19 Asia Cup: ರಾಜ್ಯದ ಮೂವರು

Ranji Trophy: ಕರ್ನಾಟಕಕ್ಕೆ ನಾಕೌಟ್‌ ಕಷ್ಟ

Ranji Trophy: ಕರ್ನಾಟಕಕ್ಕೆ ನಾಕೌಟ್‌ ಕಷ್ಟ

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ರೈಲು ಬಡಿದು ವ್ಯಕ್ತಿ ಸಾವು

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.