ದಂಡ ವಿಧಿಸಿ, ಕ್ರಿಮಿನಲ್‌ ಮೊಕದ್ದಮೆ ದಾಖಲಿಸಿದರೂ ಬುದ್ಧಿ ಬರಲಿಲ್ಲ


Team Udayavani, Jan 13, 2018, 11:50 AM IST

danda-ofc.jpg

ಬೆಂಗಳೂರು: ನಗರದಲ್ಲಿ ಅನಧಿಕೃತವಾಗಿ ಆಪ್ಟಿಕಲ್‌ ಫೈಬರ್‌ ಕೇಬಲ್‌ (ಒಎಫ್ಸಿ) ಅಳವಡಿಸುವ ಏಜೆನ್ಸಿಗಳಿಗೆ ದುಬಾರಿ ದಂಡ ವಿಧಿಸಿ, ಕ್ರಿಮಿನಲ್‌ ಮೊಕದ್ದಮೆ ದಾಖಲಿಸಿದರೂ ತಮ್ಮ ಹಳೆಯ ಪ್ರವೃತ್ತಿಯನ್ನು ಮುಂದುವರಿಸಿದ್ದು, ಪಾಲಿಕೆಗೆ ತೆರಿಗೆ ವಂಚಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದಾರೆ.

ನಗರದ ರಸ್ತೆಗಳಲ್ಲಿ ಅಳವಡಿಸಿರುವ ಅನಧಿಕೃತ ಒಎಫ್ಸಿ ಕೇಬಲ್‌ಗ‌ಳ ವಿರುದ್ಧ ಈ ಹಿಂದೆ ಸಮರ ಸಾರಿದ ಪಾಲಿಕೆಯ ಅಧಿಕಾರಿಗಳು, ನೂರಾರು ಮೀಟರ್‌ ಕೇಬಲ್‌ ಕತ್ತರಿಸಿ, ಒಂದು ಕೋಟಿ ರೂ. ವರೆಗೆ ದಂಡ ವಿಧಿಸಿ ಏಜೆನ್ಸಿಗಳಿಗೆ ಬಿಸಿಮುಟ್ಟಿಸಿದ್ದರು. ಜತೆಗೆ ಏಜೆನ್ಸಿಗಳ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಿದ್ದಾರೆ. ಅದರ ನಡುವೆಯೂ ಏಜೆನ್ಸಿಗಳು ನಾಗರಿಕಗೆ ತೊಂದೆರಯಾಗುವ ರೀತಿಯಲ್ಲಿ ಕೇಬಲ್‌ ಅಳವಡಿಸುವುದನ್ನು ಮಾತ್ರ ನಿಲ್ಲಿಸಿಲ್ಲ. 

ಮೊದಲ ಹಂತವಾಗಿ ಪಾಲಿಕೆಯಿಂದ ಕೋಟ್ಯಂತರ ರೂ. ವೆಚ್ಚದಲ್ಲಿ ನಿರ್ಮಿಸಿದ ಟೆಂಡರ್‌ಶ್ಯೂರ್‌ ರಸ್ತೆಗಳಲ್ಲಿ ಮರಗಳ ಮೂಲಕ ಕೇಬಲ್‌ ಅಳವಡಿಸದಂತೆ ಒಎಫ್ಸಿ ಏಜೆನ್ಸಿಗಳಿಗೆ ಪಾಲಿಕೆಯ ಅಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದರು. ಅದರಂತೆ ಮೂರು ತಿಂಗಳ ಹಿಂದೆ ಟೆಂಡರ್‌ ಶ್ಯೂರ್‌ ರಸ್ತೆಗಳಲ್ಲಿ ಕಾರ್ಯಾಚರಣೆಗಿಳಿದ ಅಧಿಕಾರಿಗಳು ಅನಧಿಕೃತ ಕೇಬಲ್‌ಗ‌ಳನ್ನು ತೆರವುಗೊಳಿಸಿ, ದುಬಾರಿ ದಂಡ ವಿಧಿಸಿದ್ದರು. 

ಆದರೆ, ಪಾಲಿಕೆಯ ಅಧಿಕಾರಿಗಳು ನಿರಂತರವಾಗಿ ಒಎಫ್ಸಿ ಕೇಬಲ್‌ಗ‌ಳ ವಿರುದ್ಧ ಕಾರ್ಯಾಚರಣೆ ನಡೆಸದ ಹಿನ್ನೆಲೆಯಲ್ಲಿ ಸಂಸ್ಥೆಗಳು ರಾಜಾರೋಷವಾಗಿ ಕೇಬಲ್‌ಗ‌ಳನ್ನು ಅಳವಡಿಸುತ್ತಲೇ ಇವೆ. ಈ ಕುರಿತು ಒಎಫ್ಸಿ ವಿಭಾಗದ ಅಧಿಕಾರಿಗಳನ್ನು ಪ್ರಶ್ನಿಸಿದರೆ ಸಂಸ್ಥೆಗಳಿಗೆ ಮಾಹಿತಿ ನೀಡಲು ಹಾಗೂ ಶುಲ್ಕ ಪಾವತಿಸಲು ಅವಕಾಶ ನೀಡಲಾಗಿದೆ ಎಂದು ಸಮಜಾಯಿಷಿ ನೀಡುತ್ತಾರೆ. 

ತೆರಿಗೆ ವಂಚಿಸಲು ಸಾರ್ವಜನಿಕರಿಗೆ ತೊಂದರೆ: ಹಗರುವಾದ ಕೆಲ ಕೇಬಲ್‌ಗ‌ಳನ್ನು ಪೋಲ್‌ಗ‌ಳ ಮೂಲಕ ತೆಗೆದುಕೊಂಡು ಹೋಗಲು ಪಾಲಿಕೆಯಿಂದ ಅನುಮತಿ ನೀಡಲಾಗುತ್ತದೆ. ಅದರಂತೆ ಏಜೆನ್ಸಿಗಳು ಪ್ರತಿ ಪೋಲ್‌ಗೆ ಪಾಲಿಕೆಯಿಂದ ಅನುಮತಿ ಪಡೆದು ನಿಗದಿತ ಶುಲ್ಕ ಪಾವತಿಸಿ ಕೇಬಲ್‌ಗ‌ಳನ್ನು ಅಳವಡಿಸಬಹುದಾಗಿದೆ. ಆದರೆ, ಪೋಲ್‌ಗ‌ಳನ್ನು ಅಳವಡಿಸಿದರೆ ಪಾಲಿಕೆಗೆ ಶುಲ್ಕ ಪಾವತಿಸಬೇಕೆಂಬ ಕಾರಣದಿಂದ ಏಜೆನ್ಸಿಗಳು ಮರಗಳ ಮೂಲಕ ಕೇಬಲ್‌ಗ‌ಳನ್ನು ತೆಗೆದುಕೊಂಡು ಹೋಗುತ್ತಿದ್ದು, ಅರ್ಧ ಮುರಿದಿರುವ ಕೇಬಲ್‌ಗ‌ಳು ರಸ್ತೆಯಲ್ಲಿ ಸಂಚರಿಸುವವರಿಗೆ “ಸಾವಿನ ಕುಣಿಕೆ’ಗಳಾಗಿ ಪರಿಣಮಿಸಿವೆ. 
ಒಎಫ್ಸಿಯಿಂದ ರಸ್ತೆಗುಂಡಿಗಳು 

ನೆಲದಡಿಯಲ್ಲಿ ಹಾರಿಜೆಂಟಲ್‌ ಡೈರೆಕ್ಷನಲ್‌ ಡ್ರಿಲ್ಲಿಂಗ್‌ (ಎಚ್‌ಡಿಡಿ) ಯಂತ್ರದ ಮೂಲಕ ಒಎಫ್ಸಿ ಕೇಬಲ್‌ಗ‌ಳನ್ನು ಅಳವಡಿಸಲು ಕೆಲ ಏಜೆನ್ಸಿಗಳು ಅನುಮತಿ ಪಡೆದಿವೆ. ಆದರೆ, ಪಾಲಿಕೆಯಿಂದ 100 ಮೀಟರ್‌ಗೆ ಅನುಮತಿ ಪಡೆಯುವ ಸಂಸ್ಥೆಗಳು 500 ಮೀಟರ್‌ ಕೇಬಲ್‌ ಅಳವಡಿಸುತ್ತಾರೆ. ಜತೆಗೆ ಕಾಮಗಾರಿ ಮುಗಿದ ನಂತರ ರಸ್ತೆಯನ್ನು ಪುನರ್‌ ದುರಸ್ತಿಪಡಿಸದೆ ರಸ್ತೆಗಳಲ್ಲಿ ರಸ್ತೆಗುಂಡಿ ಸೃಷ್ಟಿಗೆ ಕಾರಣರಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು. 

ಅನುಸರಿಬೇಕಾದ ನಿಯಮಗಳೇನು?: ಪಾಲಿಕೆಯಿಂದ ಅನುಮತಿ ಪಡೆದ ಏಜೆನ್ಸಿಗಳು ಕೆಲಸ ಪ್ರಾರಂಭಿಸುವ ಮುನ್ನ ಸಂಬಂಧಿಸಿದ ವಲಯ ಅಧಿಕಾರಿಗಳಿಗೆ, ಪಾಲಿಕೆಯ ಮೂಲಭೂತ ಸೌಕರ್ಯ ವಿಭಾಗದ ಮುಖ್ಯ ಎಂಜಿನಿಯರ್‌ಗಳಿಗೆ ಲಿಖೀತ ರೂಪದಲ್ಲಿ ಮಾಹಿತಿ ನೀಡಬೇಕು.

ಕಾಮಗಾರಿಗೆ ಸಂಬಂಧಪಟ್ಟ ಕಾರ್ಯಯೋಜನೆಯನ್ನು ಸಂಬಂಧಪಟ್ಟ ವಾರ್ಡ್‌ ಎಂಜಿನಿಯರ್‌ ಗಮನಕ್ಕೆ ತಂದು, ಸಂಬಂಧಿಸಿ ವಲಯ ಅಧಿಕಾರಿಗಳು ಅಥವಾ ರಸ್ತೆ ಮೂಲ ಸೌಕರ್ಯ ಎಂಜಿನಿಯರ್‌ಗಳ ಸಲಹೆ ಮೇರೆಗೆ ಮಣ್ಣು ಅಗೆಯುವುದು ಮತ್ತು ಅಗೆತದ ನಂತರ ರಸ್ತೆಯ ಪುನರ್‌ಸ್ಥಾಪನೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂಬ ನಿಯಮಗಳಿದ್ದರೂ, ಏಜೆನ್ಸಿಗಳಾಗಲಿ, ಪಾಲಿಕೆಯ ಅಧಿಕಾರಿಗಳಾಗಲಿ ಅವುಗಳ ಪಾಲನೆಗೆ ಮುಂದಾಗಿಲ್ಲ.

ಪ್ರಶ್ನಿಸಿದರೆ ಸಿಬ್ಬಂದಿ ಮೇಲೆ ಹಲ್ಲೆ: ಅನಧಿಕೃತವಾಗಿ ಒಎಫ್ಸಿ ಕೇಬಲ್‌ ಅಳವಡಿಸುವವರು ರಾತ್ರಿ ವೇಳೆ ಕಾಮಗಾರಿ ನಡೆಸುತ್ತಾರೆ. ಏಜೆನ್ಸಿಗಳು ಹತ್ತಾರು ಮಂದಿಯನ್ನು ನೇಮಿಸಿಕೊಂಡು ಕಾಮಗಾರಿ ತಡೆಯಲು ಬಂದವರ ಮೇಲೆ ಏಕಾಏಕಿ ಹಲ್ಲೆಗೆ ಮುಂದಾಗುತ್ತಾರೆ.

ನಗರದ ಪ್ರಮುಖ ಭಾಗದಲ್ಲಿ ಇಂತಹ ಅನಧಿಕೃತ ಕೇಬಲ್‌ ಅಳವಡಿಕೆ ತಡೆಯಲು ಮುಂದಾದ ಪಾಲಿಕೆಯ ಸಿಬ್ಬಂದಿಗೆ ಹೊಡೆದು ಗಾಯಗೊಳಿಸಿರುವ ಹಲವು ಪ್ರಕರಣಗಳು ವರದಿಯಾಗಿವೆ. ಈ ಬಗ್ಗೆ ಪಾಲಿಕೆಯಿಂದ ಹಲವಾರು ಠಾಣೆಗಳಲ್ಲಿ ದೂರುಗಳನ್ನು ಸಹ ದಾಖಲಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಬೇಸರ ವ್ಯಕ್ತಪಡಿಸಿದರು. 

ಟಾಪ್ ನ್ಯೂಸ್

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

PM-Nigirya

G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್‌, ಗಯಾನಾ ಪ್ರವಾಸ ಶುರು

Chattisgadh-Petrol

Chhattisgarh: ನೀರಿನ ಬಾವೀಲಿ ಪೆಟ್ರೋಲ್‌: ಸಂಗ್ರಹಕ್ಕೆ ಮುಗಿಬಿದ್ದ ಜನ

Manipu: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

Manipur: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

DK-Shivakumar

Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್‌

MNG-hosp

Mangaluru: ವೆನ್ಲಾಕ್‌ ಆಸ್ಪತ್ರೆ 10 ಕೋಟಿ ರೂ. ವೆಚ್ಚದಲ್ಲಿ ಆಧುನೀಕರಣ: ಸಚಿವ ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-darshan

Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್‌

11-KEA-exam

Bengaluru: 54 ಎಂಜಿನಿಯರಿಂಗ್‌ ಸೀಟ್‌ ಬ್ಲಾಕ್‌: ಕೆಇಎ ಶಂಕೆ

6

Bengaluru: ಕಸವನ್ನು ಗೊಬ್ಬರವಾಗಿಸುವ “ಕಪ್ಪು ಸೈನಿಕ ನೊಣ’!

3-beehive

Bengaluru: ಇನ್ಮುಂದೆ ಜೇನುಗೂಡು ಕಟ್ಟಬೇಕಿಲ್ಲ; 3ಡಿ ಗೂಡು ಆವಿಷ್ಕಾರ!

4-cock

Bengaluru: ಮಾಂಸದ ನಾಟಿ ಕೋಳಿಗೆ ಭರ್ಜರಿ ಡಿಮ್ಯಾಂಡ್‌!

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

PM-Nigirya

G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್‌, ಗಯಾನಾ ಪ್ರವಾಸ ಶುರು

Chattisgadh-Petrol

Chhattisgarh: ನೀರಿನ ಬಾವೀಲಿ ಪೆಟ್ರೋಲ್‌: ಸಂಗ್ರಹಕ್ಕೆ ಮುಗಿಬಿದ್ದ ಜನ

Manipu: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

Manipur: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.