ಮಾಸ್ತಿಗುಡಿ ದುರಂತ ಆರೋಪಿಗಳಿಗೆ ಕೊಂಚ ರಿಲೀಫ್


Team Udayavani, Jan 13, 2018, 11:51 AM IST

mastigudi.jpg

ಬೆಂಗಳೂರು: “ಮಾಸ್ತಿಗುಡಿ’ ಚಿತ್ರದ ಚಿತ್ರೀಕರಣದ ವೇಳೆ ತಿಪ್ಪಗೊಂಡನಹಳ್ಳಿ ಜಲಾಶಯದಲ್ಲಿ ಮುಳುಗಿ ಇಬ್ಬರು ನಟರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳಾದ ಚಿತ್ರನಿರ್ದೇಶಕ ನಾಗಶೇಖರ್‌ ಸೇರಿದಂತೆ ಐವರು ಆರೋಪಿಗಳ ವಿರುದ್ಧ ಐಪಿಸಿ ಕಲಂ 304(ಎ) ಅಡಿಯಲ್ಲಿ ವಿಚಾರಣೆ ನಡೆಸಿ ತೀರ್ಪು ನೀಡುವಂತೆ ಅಧೀನ ನ್ಯಾಯಾಲಯಕ್ಕೆ ಆದೇಶಿಸಿದೆ.

ಈ ಕುರಿತು ಶುಕ್ರವಾರ ತೀರ್ಪು ಪ್ರಕಟಿಸಿ ನ್ಯಾಯಮೂರ್ತಿ ಅರವಿಂದಕುಮಾರ್‌ ಅವರಿದ್ದ ಏಕಸದಸ್ಯ ಪೀಠ, ಆರೋಪಿಗಳ ವಿರುದ್ಧದ ಪ್ರಕರಣ ರದ್ದುಪಡಿಸಲು ನಿರಾಕರಿಸಿತು. ಆದರೆ, ಆರೋಪಿಗಳ ವಿರುದ್ಧದ ಐಪಿಸಿ ಕಲಂ 304 ಅಡಿಯ ಪ್ರಕರಣದ ಬದಲಿಗೆ, ನಿರ್ಲಕ್ಷ್ಯದಿಂದ ಸಾವಿಗೆ ಕಾರಣ 304(ಎ)ಅಡಿಯಲ್ಲಿ ವಿಚಾರಣೆ ನಡೆಸಿ ತೀರ್ಪು ನೀಡುವಂತೆ  ರಾಮನಗರ ಜೆಎಂಎಫ್ಸಿ ನ್ಯಾಯಾಲಯಕ್ಕೆ ಆದೇಶಿಸಿದೆ. 

 2016ರ ನವೆಂಬರ್‌ 7ರಂದು ತಿಪ್ಪಗೊಂಡನಳ್ಳಿ ಜಲಾಶಯದಲ್ಲಿ ನಡೆಯುತ್ತಿದ್ದ ಮಾಸ್ತಿಗುಡಿ ಚಿತ್ರದ ಸಾಹಸ ದೃಶ್ಯದ ಚಿತ್ರೀಕರಣದ ವೇಳೆ, ಹೆಲಿಕಾಪ್ಟರ್‌ನಿಂದ ಹಾರಿದ್ದ ಖಳನಟರಾದ ಉದಯ್‌  ಹಾಗೂ ಅನಿಲ್‌ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರು. ಚಿತ್ರೀಕರಣದ ವೇಳೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದ ಕಾರಣದಿಂದಲೇ ನಟರಿಬ್ಬರ ಸಾವಿಗೆ ಕಾರಣ ಎಂದು ತಿಳಿದು ಬಂದಿತ್ತು.

ಈ ನಿಟ್ಟಿನಲ್ಲಿ ಚಿತ್ರದ ನಿರ್ಮಾಪಕ ಸುಂದರ್‌ ಪಿ.ಗೌಡ, ನಿರ್ದೇಶಕ ನಾಗಶೇಖರ್‌ ಹಾಗೂ ಮತ್ತಿತರರ ವಿರುದ್ಧ ಪ್ರಕರಣ  ದಾಖಲಿಸಿಕೊಂಡು ತನಿಖೆ ನಡೆಸಿದ ತಾವರೆಕೆರೆ ಠಾಣೆ ಪೊಲೀಸರು,  ಪೂರ್ವನಿರ್ಧಾರಿತ ಕೊಲೆ ಕಲಂ 304 ಅಡಿಯಲ್ಲಿ ರಾಮನಗರ ಜೆಎಂಎಫ್ಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. 

ಮಾಸ್ತಿಗುಡಿ ಚಿತ್ರೀಕರಣದ ವೇಳೆ ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಆದರೆ ದುರದೃಷ್ಟವಶಾತ್‌ ಆಕಸ್ಮಿಕವಾಗಿ ಸಂಭವಿಸಿದ ದುರ್ಘ‌ಟನೆಯಲ್ಲಿ ನಟರಿಬ್ಬರು ಜಲಾಶಯಕ್ಕೆ ಬಿದ್ದು ಮೃತಪಟ್ಟಿದ್ದಾರೆ. ಇದರಲ್ಲಿ ತಮ್ಮ ಪಾತ್ರವಿಲ್ಲ. ಇದು ಪೂರ್ವನಿರ್ಧಾರಿತ ಕೊಲೆಯಲ್ಲ.

ಆದರೆ ಪೊಲೀಸರು, ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡು ಸೆಕ್ಷನ್‌ 304ರ ಅಡಿಯಲ್ಲಿ ಪ್ರಕರಣ ದಾಖಲಿಸಿ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಇದು ಕಾನೂನು ಬಾಹಿರವಾಗಿದೆ. ಈ ನಿಟ್ಟಿನಲ್ಲಿ ತಮ್ಮ ವಿರುದ್ಧದ ಪ್ರಕರಣ ರದ್ದುಪಡಿಸಬೇಕು ಎಂದು ಕೋರಿ  ಆರೋಪಿಗಳು ಹೈಕೋರ್ಟ್‌ ಮೆಟ್ಟಿಲೇರಿದ್ದರು.ಆರೋಪಿಗಳ ಪರ ವಕೀಲ ಎಚ್‌ ಪವನಚಂದ್ರ ಶೆಟ್ಟಿ ವಾದಿಸಿದ್ದರು.

ಟಾಪ್ ನ್ಯೂಸ್

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

PM-Nigirya

G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್‌, ಗಯಾನಾ ಪ್ರವಾಸ ಶುರು

Chattisgadh-Petrol

Chhattisgarh: ನೀರಿನ ಬಾವೀಲಿ ಪೆಟ್ರೋಲ್‌: ಸಂಗ್ರಹಕ್ಕೆ ಮುಗಿಬಿದ್ದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-darshan

Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್‌

11-KEA-exam

Bengaluru: 54 ಎಂಜಿನಿಯರಿಂಗ್‌ ಸೀಟ್‌ ಬ್ಲಾಕ್‌: ಕೆಇಎ ಶಂಕೆ

6

Bengaluru: ಕಸವನ್ನು ಗೊಬ್ಬರವಾಗಿಸುವ “ಕಪ್ಪು ಸೈನಿಕ ನೊಣ’!

3-beehive

Bengaluru: ಇನ್ಮುಂದೆ ಜೇನುಗೂಡು ಕಟ್ಟಬೇಕಿಲ್ಲ; 3ಡಿ ಗೂಡು ಆವಿಷ್ಕಾರ!

4-cock

Bengaluru: ಮಾಂಸದ ನಾಟಿ ಕೋಳಿಗೆ ಭರ್ಜರಿ ಡಿಮ್ಯಾಂಡ್‌!

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.