ಸಿಎಂ ವಿರುದ್ಧ ಬಿಜೆಪಿ ಜೈಲ್ ಭರೋ ಹೋರಾಟ
Team Udayavani, Jan 13, 2018, 12:07 PM IST
ಬೀದರ: ಬಿಜೆಪಿ ಮತ್ತು ಆರೆಸ್ಸೆಸ್ ಸೇರಿದಂತೆ ಸಂಘ ಪರಿವಾರದವರನ್ನು ಉಗ್ರಗಾಮಿಗಳಿಗೆ ಹೋಲಿಸಿರುವ
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಶುಕ್ರವಾರ ನಗರದಲ್ಲಿ ಜಿಲ್ಲಾ ಬಿಜೆಪಿಯಿಂದ ಜೈಲ್ ಭರೋ ಹೋರಾಟ ನಡೆಸಲಾಯಿತು. ಈ ವೇಳೆ ಕಾಂಗ್ರೆಸ್ ಕಚೇರಿ ಮುತ್ತಿಗೆಗೆ ಯತ್ನಿಸಿದ 80ಕ್ಕೂ ಹೆಚ್ಚು ಕಾರ್ಯಕರ್ತರನ್ನು
ವಶಕ್ಕೆ ಪಡೆಯಲಾಯಿತು.
ಬಿಜೆಪಿ ಜಿಲ್ಲಾಧ್ಯಕ್ಷ ಡಾ| ಶೈಲೇಂದ್ರ ಬೆಲ್ದಾಳೆ ಮತ್ತು ವಿಧಾನ ಪರಿಷತ್ ಸದಸ್ಯ ರಘುನಾಥ ಮಲ್ಕಾಪೂರೆ ನೇತೃತ್ವದಲ್ಲಿ ನಗರದ ಜಿಲ್ಲಾ ಬಿಜೆಪಿ ಕಚೇರಿಯಿಂದ ಕಾಂಗ್ರೆಸ್ ಕಚೇರಿ ವರೆಗೆ ರ್ಯಾಲಿ ನಡೆಸಲಾಯಿತು. “ನಾವು ಬಿಜೆಪಿ, ನಾವು ಆರೆಸ್ಸೆಸ್ -ತಕ್ಷಣ ನಮ್ಮನ್ನು ಬಂಧಿಸಿ ಜೈಲಿನಲ್ಲಿಡಿ’ ಘೋಷಣೆಯೊಂದಿಗೆ ಕಾರ್ಯಕರ್ತರು ಹೆಜ್ಜೆ ಹಾಕಿದರು.
ಈ ವೇಳೆ ಕಾಂಗ್ರೆಸ್ ಭವನದ ನೂರು ಮೀಟರ್ ದೂರದಲ್ಲೇ ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕುವ ಮೂಲಕ
ಪ್ರತಿಭಟನಾಕಾರರನ್ನು ತಡೆದರು.
ಬ್ಯಾರಿಕೇಡ್‌ಗಳನ್ನು ತಳ್ಳಿ ನುಗ್ಗಲು ಯತ್ನಿಸಿದರಾದರೂ ಖಾಕಿ ಪಡೆ ಇದಕ್ಕೆ ಅವಕಾಶ ಕೊಡಲಿಲ್ಲ. ಕೊನೆಗೂ 15ಜನ ಮಹಿಳೆಯರು ಸೇರಿದಂತೆ 80ಕ್ಕೂ ಹೆಚ್ಚು ಮುಖಂಡರು, ಕಾರ್ಯಕರ್ತರನ್ನು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಲಾಯಿತು.
ಈ ವೇಳೆ ಬಿಜೆಪಿ ಮುಖಂಡರು ಮಾತನಾಡಿ, ಮುಖ್ಯಮಂತ್ರಿಯಂಥ ಉನ್ನತ ಸ್ಥಾನದಲ್ಲಿದ್ದುಕೊಂಡು ಯಾವುದೇ ಸಾಕ್ಷಿ ಅಥವಾ ಪುರಾವೆಗಳಿಲ್ಲದೇ ಬಿಜೆಪಿ, ಆರೆಸ್ಸೆಸ್ ಸೇರಿದಂತೆ ಸಂಘ ಪರಿವಾರದವರೆಲ್ಲ ಉಗ್ರಗಾಮಿಗಳು ಎಂದು ಸಿದ್ದರಾಮಯ್ಯ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಹಾಗಾಗಿ ನಾವು ಬಿಜೆಪಿ- ಆರೆಸ್ಸೆಸ್, ನಮ್ಮನ್ನು ತಕ್ಷಣ ಬಂಧಿಸಲಿ ಎಂದು ಒತ್ತಾಯಿಸಿ ಹೋರಾಟ ನಡೆಸುತ್ತಿವೆ. ಹಿಂದೂಗಳ ಹತ್ಯೆ ಮಾಡುತ್ತಿರುವ ಪಿಎಫ್ ಐನಂಥ ಸಂಘಟನೆಗಳ ವಿರುದ್ಧ ಕ್ರಮ ಕೈಗೊಳ್ಳದೇ ಮೌನ ವಹಿಸಿದೆ.
ಈ ಕೂಡಲೇ ಸಿಎಂ ಸಿದ್ಧರಾಮಯ್ಯ ತಮ್ಮ ಹೇಳಿಕೆಗೆ ಕ್ಷಮೆಯಾಗಿಸಬೇಕು ಎಂದು ಆಗ್ರಹಿಸಿದರು. ಪಕ್ಷದ ಪ್ರಧಾನ
ಕಾರ್ಯದರ್ಶಿಗಳಾದ ಈಶ್ವರಸಿಂಗ್ ಠಾಕೂರ, ಜಯಕುಮಾರ ಕಾಂಗೆ, ಬಾಬುರಾವ್ ಜಗದೀಶ ಬಿರಾದಾರ, ಗುರುನಾಥ ರಾಜಗೀರಾ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು
BBK11: ಬಿಗ್ ಬಾಸ್ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ
Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್ ಮದುವೆ?
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.