ಅಧಿಕಾರ ನಿಮ್ಮ ಕೈಯಲ್ಲೇ ಇದೆ, ಅರೆಸ್ಟ್ ಮಾಡಿಸಿ
Team Udayavani, Jan 15, 2018, 7:25 AM IST
ಮೈಸೂರು: ಆರೆಸ್ಸೆಸ್, ಬಿಜೆಪಿ ಹಾಗೂ ಭಜರಂಗದಳದವರು ಉಗ್ರಗಾಮಿಗಳು ಎನ್ನುವುದಾದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಮ್ಮನ್ನೆಲ್ಲ ಅರೆಸ್ಟ್ ಮಾಡಿಸಲಿ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಜಗದೀಶ ಶೆಟ್ಟರ್ ಸವಾಲು ಹಾಕಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎಂಬ ಹತಾಶೆಯಿಂದ ಮಾನಸಿಕ ಸ್ಥಿಮಿತ ಕಳೆದುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅವರ ಕೈಯಲ್ಲೇ ಇನ್ನೂ ಅಧಿಕಾರವಿದೆ, ತಾಕತ್ತಿದ್ದರೆ ನಮ್ಮನ್ನೆಲ್ಲ ಅರೆಸ್ಟ್ ಮಾಡಿಸಲಿ ಎಂದರು.
ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ,ಬಿಜೆಪಿ ಅಧ್ಯಕ್ಷ ಅಮಿತ್ ಶಾ ಬರುವವರಿದ್ದಾರೆ. ಅವರುಬಂದು ಮತ್ತೇನು ಮಾತನಾಡುತ್ತಾರೋ ಎಂಬ ಭಯ ಅವರಿಗೆ ಈಗಲೇ ಶುರುವಾಗಿದೆ ಎಂದು ಲೇವಡಿ ಮಾಡಿದರು. ರಾಜ್ಯದಲ್ಲಿ ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಯಡಿಯೂರಪ್ಪ ಅವರನ್ನು ಘೋಷಿಸಲಾಗಿದೆ. ಆದರೆ, ಕಾಂಗ್ರೆಸ್ನಲ್ಲಿ ಇನ್ನೂ
ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆಯಾಗಿಲ್ಲ.ಮುಂಬರುವ ಚುನಾವಣೆಗೂ ಸಿದ್ದರಾಮಯ್ಯ ಅವರನ್ನೇ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿದರೆ ಪಕ್ಷದೊಳಗಿನ ಬಂಡಾಯದ ಬಿಸಿ ಹೈಕಮಾಂಡ್ಗೆ ತಟ್ಟಲಿದೆ. ಹೀಗಾಗಿ ಅವರು ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಮಾಡಲು ಹೆದರುತ್ತಿದ್ದಾರೆ ಎಂದು ಹೇಳಿದರು.
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಡಿರುವ
ಆರೋಪಗಳಲ್ಲಿ ಸತ್ಯಾಂಶವಿದ್ದರೆ ಬಿಜೆಪಿ ಕೂಡ ರಾಜ್ಯಾದ್ಯಂತ ಹೋರಾಟ ನಡೆಸಲಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.