ಪಾಕ್‌ಗೆ ಬಿಸಿ ಮುಟ್ಟಿಸುವ ಕೆಲಸ ಚುರುಕಾಗಲಿ
Team Udayavani, Jan 15, 2018, 6:55 AM IST
ಹೊಸದಿಲ್ಲಿ: ಗಡಿಯಾಚೆ ಉಗ್ರರನ್ನು ಕಳುಹಿಸುತ್ತಿರುವಂಥ ಪಾಕಿಸ್ಥಾನಕ್ಕೆ ಬಿಸಿ ಮುಟ್ಟಿಸುವ ಕೆಲಸ ಇನ್ನಷ್ಟು ಚುರುಕಾಗಬೇಕು. ಹೊಸ ಹೊಸ ಕಾರ್ಯತಂತ್ರಗಳನ್ನು ರೂಪಿಸುವ ಮೂಲಕ ಸೇನಾ ಕಾರ್ಯಾಚರಣೆಯನ್ನು ತೀವ್ರಗೊಳಿಸಬೇಕು ಎಂದು ಭೂಸೇನಾ ಮುಖ್ಯಸ್ಥ ಜ| ಬಿಪಿನ್ ರಾವತ್ ಹೇಳಿದ್ದಾರೆ.
ಪಿಟಿಐ ಸುದ್ದಿಸಂಸ್ಥೆಗೆ ಭಾನುವಾರ ನೀಡಿದ ಸಂದರ್ಶನದಲ್ಲಿ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಜಮ್ಮು-ಕಾಶ್ಮೀರದಲ್ಲಿ ಶಾಂತಿ ನೆಲೆಸಬೇಕೆಂದರೆ ಸೇನಾ ಕಾರ್ಯಾ ಚರಣೆಯ ಜೊತೆ ಜತೆಗೇ ಸರಕಾರದ ಇಚ್ಛಾಶಕ್ತಿಯೂ ಸಾಗಬೇಕು ಎಂದಿದ್ದಾರೆ. ತಾವು ಅಧಿಕಾರ ವಹಿಸಿಕೊಂಡಾಗಿನಿಂದ ಪರಿಸ್ಥಿತಿಯು ಸ್ವಲ್ಪಮಟ್ಟಿಗೆ ಸುಧಾರಿಸಿದೆ ಎಂದೂ ಅವರು ಹೇಳಿದ್ದಾರೆ. ಸರಕಾರವು ಈಗಾಗಲೇ ಸಂಧಾನ ಕಾರರೊಬ್ಬರನ್ನು ನೇಮಿಸಿದೆ. ಅವರು ಕಣಿವೆ ರಾಜ್ಯದ ಜನರ ಸಂಕಷ್ಟಗಳು, ಅಹವಾಲುಗಳನ್ನು ಆಲಿಸಲಿದ್ದಾರೆ. ನಂತರ ರಾಜಕೀಯ ಮಟ್ಟದಲ್ಲೇ ಅವುಗಳನ್ನು ಪರಿಹರಿಸಲಾಗುತ್ತದೆ. ಸೇನೆಯ ಬಳಕೆಯು ಕಾಶ್ಮೀರ ವಿವಾದ ಬಗೆಹರಿಸುವ ಒಂದು ಭಾಗವಷ್ಟೆ. ಹಿಂಸೆಗೆ ಪ್ರಚೋದಿಸುವಂಥ ಉಗ್ರರನ್ನು ಮೊದಲು ಸದೆಬಡಿಯಬೇಕು. ನಂತರ, ಯುವಕರು ಉಗ್ರವಾದದತ್ತ ಆಕರ್ಷಿತರಾಗದಂತೆ ಮಾಡಬೇಕು. ಸೇನೆಯು ಈಗಾಗಲೇ ಉಗ್ರ ಸಂಘಟನೆಗಳ ಮೇಲೆ ಒತ್ತಡ ತರುವಂಥ ಕೆಲಸ ಮಾಡುತ್ತಿದೆ ಎಂದೂ ಹೇಳಿದ್ದಾರೆ ಜ. ರಾವತ್.
ಪಾಕ್ ಪ್ರತಿಕ್ರಿಯೆ: ಗಡಿ ದಾಟಿ ಪಾಕಿಸ್ಥಾನದ ಮೇಲೆ ದಾಳಿ ನಡೆಸಲು ಗೊತ್ತಿದೆ ಎಂಬ ಜ. ರಾವತ್ ಅವರ ಹೇಳಿಕೆಗೆ ರವಿವಾರ ಪಾಕಿಸ್ಥಾನ ಪ್ರತಿಕ್ರಿಯೆ ನೀಡಿದೆ. ಜ| ರಾವತ್ ಅವರು ಬೇಜವಾಬ್ದಾರಿಯುತ ಹೇಳಿಕೆ ನೀಡುತ್ತಿದ್ದಾರೆ. ಅವರು ಬಯಸಿದ್ದೇ ಆದಲ್ಲಿ, ನಮ್ಮ ಸಾಮರ್ಥ್ಯವನ್ನು ಪರೀಕ್ಷಿಸಲಿ. ಅವರಲ್ಲಿರುವ ಅನುಮಾನವನ್ನು ನಿವಾರಿಸಲು ನಮಗೂ ಗೊತ್ತು ಎಂದು ಪಾಕ್ ವಿದೇಶಾಂಗ ಸಚಿವ ಖ್ವಾಜಾ ಆಸಿಫ್ ಹೇಳಿದ್ದಾರೆ.
ಹೊಸ ಬೆಟಾಲಿಯನ್: ಇದೇ ವೇಳೆ, ದೇಶದ ಎರಡು ಪ್ರಮುಖ ಗಡಿ ಭದ್ರತಾ ಪಡೆಗಳಾದ ಬಿಎಸ್‌ಎಫ್ ಮತ್ತು ಐಟಿಬಿಪಿಗೆ 15 ಹೊಸ ಬೆಟಾಲಿಯನ್ ಅನ್ನು ಸೇರಿಸಲು ಕೇಂದ್ರ ಸರಕಾರ ಚಿಂತನೆ ನಡೆಸಿದೆ. ಚೀನ, ಪಾಕಿಸ್ಥಾನ ಮತ್ತು ಬಾಂಗ್ಲಾದ ಗಡಿಗಳಲ್ಲಿ ಭದ್ರತೆ ಹೆಚ್ಚಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಗೃಹ ಇಲಾಖೆಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ
Surat: ಭಾನುವಾರ ಉದ್ಘಾಟನೆಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸೋಮವಾರವೇ ಬಿತ್ತು ಬೀಗ
Delhi: ಬಿಗಡಾಯಿಸಿದ ವಾಯುಮಾಲಿನ್ಯ… ಕೃತಕ ಮಳೆಗೆ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ
Dense Smog: ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ
Video: ಮದುವೆ ಸಂಭ್ರಮದಲ್ಲಿದ್ದ ವರನಿಗೆ ಹೃದಯಾಘಾತ… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು
MUST WATCH
ಹೊಸ ಸೇರ್ಪಡೆ
Naxal: ನಕ್ಸಲರ ನೆತ್ತರ ಹೆಜ್ಜೆ..: ರಾಜ್ಯದಲ್ಲಿ ನಕ್ಸಲ್ ಅಟ್ಟಹಾಸದ ಕರಾಳ ಇತಿಹಾಸ ಇಲ್ಲಿದೆ
Mahaveera Hanuma: ಆಲ್ಬಂನಲ್ಲಿ ಹನುಮ ಗಾನ
Tribanadhari Barbarik: ತ್ರಿಬಾಣಧಾರಿ ಬಾರ್ಬರಿಕದಲ್ಲಿ ವಸಿಷ್ಠ
Naxal: ಸರ್ಕಾರಿ ಬಸ್ ಅಡ್ಡ ಹಾಕಿ ಬೆಂಕಿ ಹಚ್ಚಿ ಕರಪತ್ರ ಹಂಚಿದ್ದ ವಿಕ್ರಂಗೌಡ ಮತ್ತು ತಂಡ!
Wine Merchants: ನಾಳೆಯ ಮದ್ಯ ಮಾರಾಟ ಬಂದ್ ನಿರ್ಧಾರ ವಾಪಸ್ ಪಡೆದ ಅಸೋಸಿಯೇಷನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.