ಡೋಕ್ಲಾಂ ವಿವಾದಿತ ಪ್ರದೇಶ : ಜ| ರಾವತ್ ಹೇಳಿಕೆಗೆ ಚೀನ ಗರಂ
Team Udayavani, Jan 15, 2018, 5:07 PM IST
ಬೀಜಿಂಗ್ : ಭಾರತ – ಚೀನ ಸೇನೆಯ ಸುದೀರ್ಘ ಕಾಲದ ಮುಖಾಮುಖೀಗೆ ಸಾಕ್ಷಿಯಾದ ಸಿಕ್ಕಿಂ ಗಡಿಯಲ್ಲಿನ ಡೋಕ್ಲಾಂ ವಿವಾದಿತ ಪ್ರದೇಶ ಎಂದು ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಹೇಳಿರುವುದು ರಚನಾತ್ಮಕವಲ್ಲದ ಟೀಕೆಯಾಗಿದೆ ಎಂದು ಚೀನ ಅದನ್ನು ಬಲವಾಗಿ ಖಂಡಿಸಿದೆ.
ಜನರಲ್ ರಾವತ್ ಅವರ ವಿವಾದ್ಮಾಕ ಹೇಳಿಕೆಗೆ ಕೋಪೋದ್ರಿಕ ಪ್ರತಿಕ್ರಿಯೆ ನೀಡಿರುವ ಚೀನದ ವಿದೇಶಾಂಗ ಸಚಿವಾಲಯದ ವಕ್ತಾರ ಲೂ ಕಾಂಗ್ ಅವರು, “ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನದ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಕಳೆದ ವರ್ಷ ಸೆಪ್ಟಂಬರ್ನಲ್ಲಿ ಬ್ರಿಕ್ಸ್ ಶೃಂಗದಲ್ಲಿ ಉಭಯ ದೇಶಗಳ ಗಡಿಯಲ್ಲಿ ಶಾಂತಿ, ನೆಮ್ಮದಿಯನ್ನು ಕಾಪಿಡುವ ನಿಟ್ಟಿನಲ್ಲಿ ಸಾಧಿಸಿದ ಒಮ್ಮತದ ಸ್ಪೂರ್ತಿಗೆ ಇದು ವಿರುದ್ಧವಾಗಿದೆ’ ಎಂದು ಹೇಳಿದರು.
ಜನರಲ್ ರಾವತ್ ಅವರು ಎರಡು ದಿನಗಳ ಹಿಂದಷ್ಟೇ “ಗಡಿ ನಿಯಂತ್ರಣ ರೇಖೆಯಲ್ಲಿ ಚೀನ ಹೇರುತ್ತಿರುವ ಒತ್ತಡವನ್ನು ಅನುಲಕ್ಷಿಸಿ ಭಾರತ ಈಗಿನ್ನು ಪಾಕ್ ಗಡಿಯಲ್ಲಿನ ತನ್ನ ಕೇಂದ್ರೀಕರಣವನ್ನು ಚೀನ ಗಡಿಗೆ ವರ್ಗಾಯಿಸುವ ಅಗತ್ಯವಿದೆ’ ಎಂದು ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Appoint: ಲಾಕ್ಡೌನ್ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ
Pakistan: ಪೊಲೀಸರ ಕಾರ್ಯಾಚರಣೆಗೆ ಪಿಟಿಐ ಪ್ರತಿಭಟನೆ ರದ್ದು!
Bangladeshದಲ್ಲಿ ಇಸ್ಕಾನ್ ನಿಷೇಧಿಸಬೇಕು: ಹೈಕೋರ್ಟ್ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!
Israel ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ: ಅಮೆರಿಕ ಮಧ್ಯಸ್ಥಿಕೆಗೆ ಹಸಿರು ನಿಶಾನೆ
Bangladesh: ಚಿನ್ಮಯ್ ಕೃಷ್ಣದಾಸ್ ಬಂಧನ ಖಂಡಿಸಿ ಪ್ರತಿಭಟನೆ: ವಕೀಲನ ಹ*ತ್ಯೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Kiccha Sudeepa: ಕ್ರಿಸ್ಮಸ್ ಗೆ ಬರುತ್ತಿದೆ ʼಮ್ಯಾಕ್ಸ್ʼ
IPL : ಸಿಎಸ್ಕೆ ಮಾಲಿಕ ಶ್ರೀನಿವಾಸನ್ ವಿರುದ್ದ ಫಿಕ್ಸಿಂಗ್ ಆರೋಪ ಮಾಡಿದ ಲಲಿತ್ ಮೋದಿ
Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.