ಪರೀಕ್ಷಾ ಕೇಂದ್ರದಲ್ಲಿ ಕ್ಯಾಮೆರಾ ಕಣ್ಗಾವಲು
Team Udayavani, Jan 16, 2018, 6:05 AM IST
ಬೆಂಗಳೂರು: ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಮತ್ತು ಕೊಠಡಿ ಮೇಲ್ವಿಚಾರಕರ ಮೇಲೆ ನಿಗಾ ಇಡಲು ಇದೇ ಮೊದಲ ಬಾರಿಗೆ ಎಲ್ಲಾ ಪರೀಕ್ಷಾ ಕೇಂದ್ರದಲ್ಲೂ ಸಿಸಿ ಕ್ಯಾಮೆರಾ ಅಳವಡಿಕೆ ಮಾಡಲಾಗುತ್ತಿದೆ.
ಉತ್ತರ ಕರ್ನಾಟಕ ಕೆಲವು ಜಿಲ್ಲೆಗಳು ಸೇರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯು ವಾರ್ಷಿಕ ಪರೀಕ್ಷೆಯಲ್ಲಿ ಒಂದಿಲ್ಲೊಂದು ರೀತಿಯ ಅಕ್ರಮ ಎಸಗಿ ಡಿಬಾರ್ ಆಗುವ ವಿದ್ಯಾರ್ಥಿಗಳ ಸಂಖ್ಯೆ ಇದ್ದೇ ಇರುತ್ತದೆ.
ಕೆಲವು ಕೇಂದ್ರದಲ್ಲಿ ಪರೀಕ್ಷಾ ಮೇಲ್ವಿಚಾರಕರೇ ವಿದ್ಯಾರ್ಥಿಗಳಿಗೆ ನಕಲು ಮಾಡಲು ಅವಕಾಶ ನೀಡುತ್ತಾರೆ. ಕೆಲವೆಡೆ ಹೊರಗಿನಿಂದ ಬಂದು ಕಿಟಕಿ ಮೂಲಕ ಚೀಟಿ, ಪುಸ್ತಕ ಹಾಗೂ ಮೊಬೈನ್‌ನಲ್ಲಿ ಮಾಹಿತಿ ನೀಡಿದ ನಿದರ್ಶನವೂ ಇದೆ.
ಇದಕ್ಕೆಲ್ಲ ಕಡಿವಾಣ ಹಾಕುವ ನಿಟ್ಟಿನಲ್ಲಿ ಎಲ್ಲಾ ಕೇಂದ್ರಗಳಲ್ಲೂ ಸಿಸಿ ಕ್ಯಾಮೆರಾ ಅಳವಡಿಸಲಾಗುತ್ತಿದೆ. ಇದು ಚುನಾವಣಾ ವರ್ಷ. ಮೇನಲ್ಲಿ ಚುನಾವಣೆ ನಡೆಯುವುದರಿಂದ ಮಾರ್ಚ್/ ಏಪ್ರಿಲ್‌ನಲ್ಲೇ ಎರಡೂ ಪರೀಕ್ಷೆ
ಮುಗಿಯುತ್ತದೆ. ಪರೀಕ್ಷಾ ಅಕ್ರಮ ಮತ್ತು ನಕಲು ಹೆಚ್ಚಾದರೆ, ಚುನಾವಣೆ ಫಲಿತಾಂಶದ ಮೇಲೂ ಪರಿಣಾಮ ಬೀರುವ ಸಾಧ್ಯತೆಯಿದೆ. ಹೀಗಾಗಿಯೇ ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮ ನಡೆಯದಂತೆ ಎಚ್ಚರ ವಹಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಪರೀಕ್ಷಾ ಅಕ್ರಮ ಅಥವಾ ಪ್ರಶ್ನೆಪತ್ರಿಕೆ ಸೋರಿಕೆಯಾದಲ್ಲಿ ಪ್ರತಿಭಾವಂತ ವಿದ್ಯಾರ್ಥಿ ಹಾಗೂ ಪೋಷಕರಲ್ಲಿ ಭಯ
ಆರಂಭವಾಗುತ್ತದೆ. ರಾಜ್ಯ ವಿಧಾನಸಭೆ ಚುನಾವಣೆಗೂ ಪೂರ್ವದಲ್ಲೇ ಎಸ್ಸೆಸ್ಸೆಲ್ಸಿ ಮತ್ತು ಪಿಯು ಫಲಿತಾಂಶ
ಪ್ರಕಟಿಸುವುದರಿಂದ ಫಲಿತಾಂಶದ ಪ್ರಮಾಣ ಎಷ್ಟಿದೆ ಎಂಬುದು ಬಹಳ ಮುಖ್ಯವಾಗಲಿದೆ.
ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸುಮಾರು 3300 ಪರೀಕ್ಷಾ ಕೇಂದ್ರಗಳನ್ನು ನಿಗದಿ ಪಡಿಸಿದ್ದು, ಅದರಲ್ಲಿ 1,390 ಕೇಂದ್ರಗಳಲ್ಲಿ ಈಗಾಗಲೇ ಸಿಸಿ ಕ್ಯಾಮೆರಾ ಅಳವಡಿಕೆ ಪೂರ್ಣಗೊಂಡಿದೆ. ಉಳಿದ ಕೇಂದ್ರಗಳಿಗೆ ಸಿಸಿ ಕ್ಯಾಮೆರಾ ಅಳವಡಿಸುವ ಪ್ರಕ್ರಿಯೆಡೆಯುತ್ತಿದೆ. ಹಾಗೆಯೇ ದ್ವಿತೀಯ ಪಿಯುವಾರ್ಷಿಕ ಪರೀಕ್ಷೆಗೆ ಸಾವಿರಕ್ಕೂ ಅಧಿಕ ಕೇಂದ್ರಗಳನ್ನು ಗುರುತಿಸಿದ್ದು, ಬಹುತೇಕ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ಉಳಿದ ಕೆಲವು ಕೇಂದ್ರಗಳಿಗೆ ಅಳವಡಿಸಲಾಗುತ್ತಿದೆ. ಫೆಬ್ರವರಿ ಅಂತ್ಯದೊಳಗೆ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲೂ ಸಿಸಿ ಕ್ಯಾಮೆರಾ ಇರಲಿದೆ. ಸಿಸಿ ಕ್ಯಾಮೆರಾದ ರಕ್ಷಣೆ ಹಾಗೂ ನಿರ್ವಹಣೆಗೆ ಬೇಕಾದ ಮುನ್ನೆಚ್ಚರಿಕೆ ಕ್ರಮವನ್ನು ಇಲಾಖೆ ಹಾಗೂ ಆಯಾ ಸಂಸ್ಥೆಯ ಮೂಲಕ ತೆಗೆದುಕೊಳ್ಳಲಾಗಿದೆ ಎಂದು ಪಿಯು ಇಲಾಖೆ ಹಿರಿಯ ಅಧಿಕಾರಿಯೊಬ್ಬರು ಉದಯವಾಣಿಗೆ ಮಾಹಿತಿ ನೀಡಿದರು.
ಈ ಹಿಂದಿನ ವರ್ಷಗಳಲ್ಲಿ ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಪರೀಕ್ಷಾ ಕೇಂದ್ರದಲ್ಲಿ ಮಾತ್ರ ಸಿಸಿ ಕ್ಯಾಮೆರಾ ಅವಳಡಿಸಲಾಗಿತ್ತು. ಅದರ ಜತೆಗೆ ಪರೀಕ್ಷಾ ಕೇಂದ್ರದೊಳಗೆ ಪ್ರವೇಶಿಸುವ ವಿದ್ಯಾರ್ಥಿಗಳ ವಿಡಿಯೋ ರೆಕಾರ್ಡಿಂಗ್ ಕೂಡ ಮಾಡಲಾಗಿತ್ತು. ಪರೀಕ್ಷಾ ಅಕ್ರಮಗಳು ಅತಿ ಹೆಚ್ಚು ನಡೆಯುವ ಜಿಲ್ಲೆಗಳನ್ನು ಗಮನದಲ್ಲಿಟ್ಟುಕೊಂಡು ಸಂಚಾರಿ ಜಾಗೃತ ದಳ ರಚನೆ ಮಾಡಲಾಗುತ್ತದೆ.
ದ್ವಿತೀಯ ಪಿಯು ಪರೀಕ್ಷೆ ನಡೆಯುವ ಎಲ್ಲಾ ಕೇಂದ್ರಗಳಿಗೂ ಸಿಸಿ ಕ್ಯಾಮರಾ ಅಳವಡಿಸಲು ಕಳೆದ ವರ್ಷವೇ ಪ್ರಯತ್ನಿಸಿದ್ದೆವು. ಆದರೆ, ಸಾಧ್ಯವಾಗಿಲ್ಲ.ಈ ವರ್ಷ ಎಲ್ಲಾ ಕೇಂದ್ರಗಳಿಗೂ ಸಿಸಿ ಕ್ಯಾಮೆರಾ ಅಳವಡಿಸಿ, ವಿದ್ಯಾರ್ಥಿಗಳು ಹಾಗೂ ಮೇಲ್ವಿಚಾರಕರ ಮೇಲೆ ನಿಗಾ ವಹಿಸಲಿದ್ದೇವೆ.
– ಸಿ.ಶಿಖಾ, ಪಿಯು ಇಲಾಖೆ ನಿರ್ದೇಶಕಿ
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಯಾವುದೇ ರೀತಿಯ ಅವ್ಯವಹಾರ ನಡೆಯದಂತೆ ಎಲ್ಲಾ ರೀತಿಯ ಕ್ರಮ ತೆಗೆದುಕೊಂಡಿದ್ದೇವೆ. ಪರೀಕ್ಷಾ ಕೇಂದ್ರಗಳಿಗೆ ಸಿಸಿ ಕ್ಯಾಮೆರಾ ಅಳವಡಿಸುವ ಪ್ರಕ್ರಿಯೆ ನಡೆಯುತ್ತಿದೆ.ಫೆಬ್ರವರಿ ಅಂತ್ಯದೊಳಗೆ ಪೂರ್ಣಗೊಳ್ಳಲಿದೆ.
– ವಿ.ಸುಮಂಗಳಾ, ನಿರ್ದೇಶಕಿ,
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.