ಪ್ರಜ್ಞಾಹೀನ ಸ್ಥಿತಿಯಲ್ಲಿ ತೊಗಾಡಿಯಾ ಪತ್ತೆ ?
Team Udayavani, Jan 16, 2018, 6:45 AM IST
ಅಹ್ಮದಾಬಾದ್: ವಿಶ್ವ ಹಿಂದೂ ಪರಿಷತ್(ವಿಎಚ್ಪಿ)ನ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾ ಅವರು ನಾಪತ್ತೆಯಾಗಿ ಕೆಲವು ಗಂಟೆಗಳ ಬಳಿಕ ಅಹ್ಮದಾಬಾದ್ನ ಸಸಿಭಾಗ್ನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸದ್ಯ ಅವರಿಗೆ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಾಹಿತಿ ಲಭಿಸಿದೆ.
ಸೋಮವಾರ ಬೆಳಗ್ಗೆಯಿಂದಲೇ ತೊಗಾಡಿಯಾ ಅವರು ಕಣ್ಮರೆಯಾಗಿದ್ದು, ಎಲ್ಲಿದ್ದಾರೆ ಎಂಬುದೇ ಗೊತ್ತಿಲ್ಲ ಎಂದು ವಿಶ್ವ ಹಿಂದೂ ಪರಿಷತ್ ಹೇಳಿಕೆ ನೀಡಿತ್ತು. ಅಲ್ಲದೆ ಪ್ರಕರಣವೊಂದಕ್ಕೆ ಸಂಬಂಧಿಸಿ ಅವರನ್ನು ರಾಜಸ್ಥಾನ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವಿಹಿಂಪ ಆರೋಪಿಸಿತ್ತು. ಆದರೆ ಇದಕ್ಕೆ ಪ್ರತಿಕ್ರಿಯಿಸಿದ ಪೊಲೀಸರು, ನಾವು ತೊಗಾಡಿ ಅವರನ್ನು ಬಂಧಿಸಿಲ್ಲ. ಅವರೆಲ್ಲಿದ್ದಾರೆಂದು ನಮಗೆ ಗೊತ್ತಿಲ್ಲ ಎಂದು ಸ್ಪಷ್ಟನೆ ನೀಡಿದ್ದರು. ಈ ಎಲ್ಲ ಬೆಳವಣಿಗೆಗಳು ಗೊಂದಲಕ್ಕೆ ಕಾರಣವಾಗಿತ್ತು.
ಬಳಿಕ ಕಾರ್ಯಾಚರಣೆಗಿಳಿದ ಪೊಲೀಸರಿಗೆ ನಗರಕ್ಕೆ ಹತ್ತಿರದ ಸಸಿಭಾಗ್ನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗಿದೆ.
ಅಹ್ಮದಾಬಾದ್ನ ಸೋಲಾ ಠಾಣೆಯ ಪೊಲೀಸರು ಈ ಕುರಿತು ಪ್ರತಿಕ್ರಿಯಿಸಿದ್ದು, “ಹಳೆಯ ಪ್ರಕರಣವೊಂದಕ್ಕೆ ಸಂಬಂಧಿಸಿ ತೊಗಾ ಡಿಯಾ ಅವರನ್ನು ಬಂಧಿಸಲು ವಾರಂಟ್ ಸಿದ್ಧಪಡಿಸುವು ದಕ್ಕಾಗಿ ರಾಜಸ್ಥಾನ ಪೊಲೀಸರ ತಂಡವೊಂದು ಬೆಳಗ್ಗೆ ಪೊಲೀಸ್ ಠಾಣೆಗೆ ಭೇಟಿ ನೀಡಿತ್ತು. ಆದರೆ, ತೊಗಾಡಿಯಾ ಅವರು ಅವರ ಮನೆಯಲ್ಲಿ ಇಲ್ಲದ ಕಾರಣ, ಅವರನ್ನು ಬಂಧಿಸದೇ ರಾಜಸ್ಥಾನದ ತಂಡ ವಾಪಸಾಯಿತು’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics; ಮತಕ್ಕಾಗಿ ಮುಸ್ಲಿಮರನ್ನು ಒಡೆವ ಕೆಲಸ ಕಾಂಗ್ರೆಸ್ ಮಾಡುತ್ತಿದೆ: ಬಿಜೆಪಿ
Maha Election; ಚು.ಆಯೋಗದಿಂದ ಉದ್ಧವ್ ಠಾಕ್ರೆ ಬ್ಯಾಗ್ ಪರಿಶೀಲನೆ, ವಿವಾದ
Manipura: ಇಬ್ಬರು ಶವ ಪತ್ತೆ, ಮಕ್ಕಳು ಸೇರಿ 6 ಮಂದೆ ಕಾಣೆ
ದಾವೂದ್, ನಟ ಸಲ್ಮಾನ್ ಸಂಪರ್ಕ ಇದ್ದಿದ್ದಕ್ಕೆ ಸಿದ್ಧಿಕಿ ಹತ್ಯೆ: ಶೂಟರ್
Ranchi: ವಕ್ಫ್ ಮಂಡಳಿಯು ಕರ್ನಾಟಕದಲ್ಲಿ ದೇಗುಲ, ರೈತರ ಭೂಮಿಯ ಕಸಿದಿದೆ: ಅಮಿತ್ ಶಾ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.