ಪಠ್ಯೇತರ ಚಟುವಟಿಕೆಗಳಲ್ಲಿ ಅಭಿರುಚಿ ಇರಲಿ: ಡುಂಡಿರಾಜ್
Team Udayavani, Jan 16, 2018, 11:29 AM IST
ಬಂಟ್ವಾಳ: ವಿದ್ಯಾರ್ಥಿಗಳ ಬದುಕು ಅರಳಿಸುವಲ್ಲಿ ಶಿಕ್ಷಣ ಸಂಸ್ಥೆಗಳ ಪಾತ್ರ ಹಿರಿದಾದುದು. ವಿದ್ಯಾರ್ಥಿಗಳು ಪಠ್ಯ ಕೇಂದ್ರಿತ ಶಿಕ್ಷಣದ ಜತೆಗೆ ಪಠ್ಯೇತರ ಚಟು ವಟಿಕೆಗಳಾದ ಕಲೆ, ಸಾಹಿತ್ಯ, ಸಂಸ್ಕೃತಿಯ ಕುರಿತ ಅಭಿರುಚಿಯನ್ನು ಹೊಂದಿರಬೇಕು ಎಂದು ಹಾಸ್ಯ ಸಾಹಿತಿ ಎಚ್. ಡುಂಡಿರಾಜ್ ಅಭಿಪ್ರಾಯ ಪಟ್ಟರು.
ಅವರು ಶನಿವಾರ ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಪದವಿ ಮತ್ತು ಪ.ಪೂ. ಕಾಲೇಜು ಗಳ ಸುವರ್ಣ ಮಹೋತ್ಸವದ ಮೂರನೇ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದರು. ವರ್ತಮಾನದ ಸ್ಪರ್ಧಾತ್ಮಕ ಪರಿಸರವು ವಿದ್ಯಾರ್ಥಿಗಳನ್ನು ಸಂಕುಚಿತ ಮನಸ್ಥಿತಿಯವರ ನ್ನಾಗಿಸುತ್ತಿದೆ. ಮಾನವನ ಬದುಕು ವಿಕಾಸ ಗೊಳ್ಳುವಲ್ಲಿ ಸಾಹಿತ್ಯದ ಓದು, ಬರವಣಿಗೆ ಮಹತ್ವದ ಪಾತ್ರ ವಹಿಸುತ್ತದೆ. ವಿದ್ಯಾರ್ಥಿ ಜೀವನದಲ್ಲಿರುವಾಗ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ವಿದ್ಯಾರ್ಥಿಗಳು ಗೆಲುವಿಗಿಂತ ಸ್ಪರ್ಧೆಗಳಲ್ಲಿ ಭಾಗವಹಿಸುವುದರಿಂದಲೇ ಆತ್ಮವಿಶ್ವಾಸ, ಛಲ, ಕುತೂಹಲ ಮೂಡಲು ಸಾಧ್ಯ ಎಂದರು.
ಪ್ರತಿಭೆಗೆ ಪರಿಸರ ಮುಖ್ಯ
ಎಸ್.ವಿ.ಎಸ್. ವಿದ್ಯಾಸಂಸ್ಥೆಯು ಉತ್ತಮ ಶಿಕ್ಷಣವನ್ನು ನೀಡುತ್ತಾ ಬಂದ ವಿದ್ಯಾರ್ಥಿ ಪೋಷಕ ಸಂಸ್ಥೆಯಾಗಿದೆ. ಸಾಹಿತ್ಯದ ಓದು ನಮ್ಮನ್ನು ಬೆಳೆಸುತ್ತದೆ. ಸಾಹಿತ್ಯದ ಓದಿನ ಮುಖೇನ ಸಮಾಜದ ನೋವು ನಲಿವಿಗೆ ಸ್ಪಂದಿಸುವ ಮನಸ್ಸು ನಿರ್ಮಾಣವಾಗುತ್ತದೆ. ಒಳ್ಳೆಯ ಪ್ರತಿಭೆ ಹುಟ್ಟಲು ಒಳ್ಳೆಯ ಪರಿಸರ ವಾತಾವರಣವು ಅಷ್ಟೇ ಮುಖ್ಯ. ವಿದ್ಯಾ ಕೇಂದ್ರಗಳು ವಿದ್ಯಾರ್ಥಿಗಳ ಸರ್ವಾಂಗೀಣ ವಿಕಾಸವನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಶಿಕ್ಷಣದ ಸ್ವರೂಪವನ್ನು ಯೋಜಿಸಬೇಕಾಗಿದೆ ಎಂದರು.
ಶ್ರೀ ವೆಂಕಟರಮಣ ಸ್ವಾಮಿ ಕಾಲೇಜುಗಳ ಸಂಚಾಲಕ ಕೂಡಿಗೆ ಪ್ರಕಾಶ್ ಶೆಣೈ ಅಧ್ಯಕ್ಷತೆ ವಹಿಸಿದ್ದರು. ಪದವಿ ಕಾಲೇಜಿನ ಪ್ರಾಂಶುಪಾಲ ಡಾ| ಪಾಂಡುರಂಗ ನಾಯಕ್ ಮತ್ತು ಪ. ಪೂ. ಕಾಲೇಜಿನ ಪ್ರಾಂಶುಪಾಲೆ ಶಶಿಕಲಾ ಕೆ. ಉಪಸ್ಥಿತರಿದ್ದರು.
ಪದವಿ ಕಾಲೇಜಿನ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಗ್ರೀಷ್ಮಾ ಶಲ್ಮಾ ವೇಗಸ್, ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಅನನ್ಯಾ ಜಿ. ವಿದ್ಯಾರ್ಥಿ ಸಂಘದ ವಾರ್ಷಿಕ ವರದಿ ಮಂಡಿಸಿದರು. ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ಕೆ. ವೆಂಕಟೇಶ್ ನಾಯಕ್ ಮತ್ತು ಸಂಜು ಕಲ್ಬಿ ಪಟೇಲ್ ಉಪಸ್ಥಿತರಿದ್ದರು.
ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಮಹಾಲಸಾ ಆರ್.ಬಿ. ನಾಯಕ್ ಸ್ವಾಗತಿಸಿ, ಪದವಿ ಕಾಲೇಜಿನ ಜತೆ ಕಾರ್ಯದರ್ಶಿ ಅನುಷಾ ವಂದಿಸಿದರು. ಪ.ಪೂ. ವಿಭಾಗದ ವಿದ್ಯಾರ್ಥಿ ಸಂಘದ ನಾಯಕ ವೆಂಕಟರಮಣ ಭಟ್ ಎ. ಅತಿಥಿಗಳನ್ನು ಪರಿಚಯಿಸಿದರು. ನತಾಶಾ ಕಾರ್ಯಕ್ರಮ ನಿರ್ವಹಿಸಿದರು. ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಈ ಸಂದರ್ಭದಲ್ಲಿ ಬಹುಮಾನ ವಿತರಿಸಲಾಯಿತು. ದೈಹಿಕ ಶಿಕ್ಷಣ ನಿರ್ದೇಶಕ ಲೆ| ಸುಂದರ್ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ಸಭಾ ಕಾರ್ಯಕ್ರಮದ ಅನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈವಿಧ್ಯ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ
Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ
Belthangady: ಕ್ರಿಸ್ಮಸ್ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು
Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ
Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.