ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಸಿದ್ಧತೆ ಪರಿಶೀಲನೆ
Team Udayavani, Jan 16, 2018, 3:31 PM IST
ಮಾನ್ವಿ: ತಾಲೂಕಿನ ಪೋತ್ನಾಳ ಗ್ರಾಮದಲ್ಲಿ ಜ.19, 20ರಂದು ನಡೆಯಲಿರುವ 9ನೇ ರಾಯಚೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ಸಿಗೆ ಪ್ರತಿಯೊಬ್ಬರ ಸಹಾಯ, ಸಹಕಾರ ಅಗತ್ಯವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ಎನ್.ಎಸ್.ಬೋಸರಾಜು ಹೇಳಿದರು.
ತಾಲೂಕಿನ ಪೋತ್ನಾಲ ಗ್ರಾಮದಲ್ಲಿ ನಡೆದ ಸಮ್ಮೇಳನ ಪೂರ್ವ ಸಿದ್ಧತೆ ಸಭೆಯಲ್ಲಿ ಅವರು ಮಾತನಾಡಿದರು. ಪೋತ್ನಾಳದಲ್ಲಿ ನಡೆಯುವ ಜಿಲ್ಲಾ ಸಮ್ಮೇಳನ ಮುಂದಿನ ಸಮ್ಮೇಳನಗಳಿಗೆ ಮಾದರಿಯಾಗಿರಬೇಕು. ಯಶಸ್ಸಿಗೆ ಸಲಹೆ, ಸಹಕಾರವೂ ಅಗತ್ಯ. ಈ ನಿಟ್ಟಿನಲ್ಲಿ ಸ್ಥಳೀಯರು, ಸಾರ್ವಜನಿಕರು, ಶಿಕ್ಷಕರು, ಸಾಹಿತಿಗಳು ಎಲ್ಲರೂ ಒಗ್ಗಟ್ಟಾಗಿ
ಸಮ್ಮೇಳನದಲ್ಲಿ ಭಾಗವಹಿಸಬೇಕು ಎಂದರು.
ಸಮ್ಮೇಳನದಲ್ಲಿ ವಿದ್ಯುತ್ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಸಾರಿಗೆ ವ್ಯವಸ್ಥೆ, ಊಟದ ವ್ಯವಸ್ಥೆ ಉಸ್ತುವಾರಿ ಹೊಣೆಯನ್ನು ಸರ್ಕಾರಿ ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿ ಗಳಿಗೆ ವಹಿಸಲಾಯಿತು.ಊಟದ ವ್ಯವಸ್ಥೆ ಅತ್ಯಂತ ಅಚ್ಚುಕಟ್ಟಾಗಿರುವಂತೆ ನೋಡಿಕೊಳ್ಳಬೇಕೆಂದು ಸೂಚಿಸಿದರು.
ಕಸಾಪ ಜಿಲ್ಲಾಧ್ಯಕ್ಷ ಡಾ| ಬಸವಪ್ರಭು ಪಾಟೀಲ್, ಶಾಸಕ ಹಂಪಯ್ಯ ನಾಯಕ ಮಾತನಾಡಿದರು. ವಕೀಲರ ಸಂಘದ ಮಾಜಿ ಅಧ್ಯಕ್ಷ ಗುಮ್ಮಾ ಬಸವರಾಜ, ನಯೋಪ್ರಾ ಅಧ್ಯಕ್ಷ ಸೈ.ಇಲಿಯಾಸ್ ಖಾದ್ರಿ, ಕರವೇ ಜನಪರ ಬಣ ರಾಜ್ಯಾಧ್ಯಕ್ಷ ಶ್ರೀಕಾಂತ ಪಾಟೀಲ್ ಗೂಳಿ, ಕಸಾಪ ಜಿಲ್ಲಾ ಕೋಶಾಧ್ಯಕ್ಷ ಮಹಾದೇವಪ್ಪ ಮಾಸ್ತಾರ, ಗೌರವ ಕಾರ್ಯದರ್ಶಿ ಭೀಮನಗೌಡ ಇಟಗಿ, ತಾಲೂಕು ಅಧ್ಯಕ್ಷ ಮೂಕಪ್ಪ ಕಟ್ಟಿಮನಿ, ತಹಶೀಲ್ದಾರ್ ಅಮರೇಶ ಬಿರಾದಾರ, ಸಿಪಿಐ ಚಂದ್ರಶೇಖರ, ಜೆಸ್ಕಾಂ ಅಧಿಕಾರಿ ಮೋಹನಕುಮಾರ, ಮುಖಂಡರಾದ ವೀರನಗೌಡ ವಕೀಲ್ ಪೋತ್ನಾಳ,
ಡಿ.ಬಸನಗೌಡ, ಕೆ.ಬಸವಂತಪ್ಪ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
World Prematurity Day: ಅಂತಾರಾಷ್ಟ್ರೀಯ ಅವಧಿಪೂರ್ವ ಶಿಶು ಜನನ ದಿನ; ನವೆಂಬರ್ 17
Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್‌ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.