ವಿವಿಧ ರಾಜ್ಯಗಳಿಂದ ಪದ್ಮಾವತ್ ಚಿತ್ರ ನಿಷೇಧ: ಸುಪ್ರೀಂ ವಿಚಾರಣೆ
Team Udayavani, Jan 17, 2018, 11:41 AM IST
ಹೊಸದಿಲ್ಲಿ : ವಿವಿಧ ರಾಜ್ಯಗಳು ವಿವಾದಿತ ಐತಿಹಾಸಿಕ ಕಥಾ ಚಿತ್ರ “ಪದ್ಮಾವತ್’ ಗೆ ನಿಷೇಧ ಹೇರಿರುವುದರ ವಿರುದ್ಧ ಪದ್ಮಾವತ್ ಚಿತ್ರ ನಿರ್ಮಾಪಕರು ಸಲ್ಲಿಸಿರುವ ಮನವಿಯನ್ನು ವಿಚಾರಣೆಗೆ ಎತ್ತಿಕೊಳ್ಳಲು ಸುಪ್ರೀಂ ಕೋರ್ಟ್ ಒಪ್ಪಿದೆ.
ಕೇಂದ್ರ ಸೆನ್ಸಾರ್ ಮಂಡಳಿಯಂದ ಯು/ಎ ಸರ್ಟಿಫಿಕೇಟ್ ಪಡೆದಿರುವ ಹೊರತಾಗಿಯೂ ಪದ್ಮಾವತ್ ಚಿತ್ರ ಪ್ರದರ್ಶನಕ್ಕೆ ಕಾನೂನು ಮತ್ತು ಸುವ್ಯವಸ್ಥೆಯ ಕಾರಣ ಒಡ್ಡಿ ವಿವಿಧ ರಾಜ್ಯಗಳು (ರಾಜಸ್ಥಾನ, ಗುಜರಾತ್, ಮಧ್ಯಪ್ರದೇಶ, ಹರಿಯಾಣ) ನಿಷೇಧ ಹೇರಿವೆ.
ಚಿತ್ರವು ಇದೇ ಜನವರಿ 25ರಂದು ಬಿಡುಗಡೆಯಾಗಲಿರುವುದರಿಂದ ನಿಷೇಧವನ್ನು ಪ್ರಶ್ನಿಸಿ ನಾವು ಸಲ್ಲಿಸಿರುವ ಮನವಿಯನ್ನು ಸುಪ್ರೀಂ ಕೋರ್ಟ್ ತುರ್ತಾಗಿ ವಿಚಾರಣೆಗೆ ಎತ್ತಿಕೊಳ್ಳಬೇಕು ಎಂದು ಪದ್ಮಾವತ್ ಚಿತ್ರ ನಿರ್ಮಾಪಕರು ಕೋರಿದ್ದರು.
ಚಿತ್ರ ನಿರ್ಮಾಪಕರ ನಿವೇದನೆಯನ್ನು ಆಲಿಸಿದ ವರಿಷ್ಠ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾ. ಎ ಎಂ ಖಾನ್ವಿಲ್ಕರ್ ಮತ್ತು ನ್ಯಾ. ಡಿ ವೈ ಚಂದ್ರಚೂಡ್ ಅವರನ್ನು ಒಳಗೊಂಡ ಪೀಠವು ಮನವಿಯ ವಿಚಾರಣೆಗೆ ಒಪ್ಪಿಕೊಂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.