ಟೆಕ್ಕಿ ಪತ್ತೆಗೆ ಎಸ್ಐಟಿ ರಚಿಸಲು ಹೈಕೋರ್ಟ್ ನಿರ್ದೇಶನ
Team Udayavani, Jan 17, 2018, 12:07 PM IST
ಬೆಂಗಳೂರು: ಒಎಲ್ಎಕ್ಸ್ನಲ್ಲಿ ಕಾರು ಮಾರಾಟ ಮಾಡುವುದಾಗಿ ಮನೆಯಿಂದ ಹೋಗಿ ವಾಪಾಸ್ ಬಾರದ ಟೆಕ್ಕಿ ಅಜಿತಾಬ್ ನಾಪತ್ತೆ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚಿಸುವಂತೆ ನಗರ ಪೊಲೀಸ್ ಆಯುಕ್ತರಿಗೆ ಹೈಕೋರ್ಟ್ ನಿರ್ದೇಶಿಸಿದೆ.
ಅಜೀತಾಬ್ ನಾಪತ್ತೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಅವರ ತಂದೆ ಅಶೋಕ್ ಕುಮಾರ್ ಸಿನ್ಹಾ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎ.ಎಸ್ ಬೋಪಣ್ಣ ಅವರಿದ್ದ ಏಕಸದಸ್ಯ ಪೀಠ ಮಂಗಳವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಪೊಲೀಸರ ಪರವಾಗಿ ಸರ್ಕಾರದ ಪರ ವಕೀಲರು, ಅಜಿತಾಬ್ ನಾಪತ್ತೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಇದುವರೆಗೂ ನಡೆದ ತನಿಖಾ ವರದಿ ಸಲ್ಲಿಸಿ,ವಿವಿಧ ಆಯಾಮಗಳಲ್ಲಿ ಪೊಲೀಸರ ತನಿಖೆ ಪ್ರಗತಿಯಲ್ಲಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.
ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಅಜಿತಾಬ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ನಡೆಸುವ ಸಲುವಾಗಿ, ಅನುಭವಿ ಹಿರಿಯ ಪೊಲೀಸ್ ಅಧಿಕಾರಿಗಳನ್ನೊಳಗೊಂಡ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿ ಮುಂದಿನ ವಿಚಾರಣೆ ವೇಳೆ ವರದಿ ಸಲ್ಲಿಸುವಂತೆ ನಗರ ಪೊಲೀಸ್ ಆಯುಕ್ತರಿಗೆ ನಿರ್ದೇಶಿಸಿ ಜನವರಿ 22ಕ್ಕೆ ವಿಚಾರಣೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress: ಇದೇ ಅವಧಿಯಲ್ಲಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗ್ತಾರೆ: ಶಾಸಕ ಶಿವಗಂಗಾ
Chhattisgarh: ಮೂವರು ನಕ್ಸಲರ ಎನ್ಕೌಂಟರ್… ವರ್ಷ ಆರಂಭದಲ್ಲೇ 9 ನಕ್ಸಲರು ಉಡೀಸ್
Ajekar: ಎಷ್ಟು ದಿನ ಟವರ್ ನೋಡ್ಕೊಂಡಿರ್ಲಿ, ನಮ್ಗೆ ಬೇಗನೆ ಕನೆಕ್ಷನ್ ಕೊಡಿ ಸ್ವಾಮಿ!
Champions Trophy: ಬಾಂಗ್ಲಾದೇಶ ತಂಡ ಪ್ರಕಟ; ಇಬ್ಬರು ಹಿರಿಯ ಆಟಗಾರರಿಗೆ ಇಲ್ಲ ಸ್ಥಾನ
Kundapura: ಕೋಡಿ ಸಮುದ್ರ ತೀರದಲ್ಲಿ ಶೌಚಾಲಯ ಸಿದ್ಧವಾದರೂ ಪ್ರವಾಸಿಗರ ಬಳಕೆಗೆ ಇಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.