​​​​​​​ಹಸಿವು ಮುಕ್ತ ಅನ್ನುವುದಕ್ಕಿಂತ ಪೌಷ್ಟಿಕ ಆಹಾರಕ್ಕೆ ಆದ್ಯತೆ

Team Udayavani, Jan 17, 2018, 12:26 PM IST

m1-hasivu.jpg

ಮೈಸೂರು: ಹಸಿವು ಮುಕ್ತ ಕರ್ನಾಟಕ ನಿರ್ಮಾಣ ಅನ್ನುವುದಕ್ಕಿಂತ ಸರ್ಕಾರಗಳು ಜನತೆಗೆ ಪೌಷ್ಟಿಕ ಆಹಾರ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ಹೇಳಿದರು.

ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವದ ಅಂಗವಾಗಿ ಮಂಗಳವಾರ ಸುತ್ತೂರು ಶ್ರೀಕ್ಷೇತ್ರದಲ್ಲಿ ನಡೆದ ರೈತ ಉತ್ಪಾದನಾ ಕಂಪನಿಗಳು-ಅವಕಾಶಗಳು ಮತ್ತು ಸವಾಲುಗಳು ವಿಷಯ ಕುರಿತ ಕೃಷಿ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.

ಹಸಿವು ಮುಕ್ತ ಕರ್ನಾಟಕ ನಿರ್ಮಾಣ ಮಾಡುವುದು ರಾಜ್ಯ ಸರ್ಕಾರದ ಸಂಕಲ್ಪ. ಯುಪಿಎ ಸರ್ಕಾರ ಜಾರಿಗೆ ತಂದ ಆಹಾರ ಭದ್ರತಾ ಕಾಯ್ದೆಯ ಮುಂದುವರಿದ ಭಾಗವಾಗಿ ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಗಾಗಿ ವಾರ್ಷಿಕ 3500 ಕೋಟಿ ವೆಚ್ಚ ಮಾಡಲಾಗುತ್ತಿದ್ದು, ರಾಜ್ಯದ ನಾಲ್ಕು ಕೋಟಿ ಜನರಿಗೆ ಉಚಿತ ಆಹಾರ ಒದಗಿಸಲಾಗುತ್ತಿದೆ.

ಆದರೆ,ಅಪೌಷ್ಟಿಕತೆ ನಮ್ಮ ಮುಂದಿರುವ ಸವಾಲು. ಹೀಗಾಗಿ ನಾವು ಕೊಡುತ್ತಿರುವ ಆಹಾರದಲ್ಲಿ ಪೌಷ್ಟಿಕತೆ ಎಷ್ಟಿದೆ ಎಂಬುದನ್ನು ನೋಡಬೇಕು. ಈ ನಿಟ್ಟಿನಲ್ಲಿ ಸರ್ಕಾರ, ಕೃಷಿ ವಿಶ್ವವಿದ್ಯಾನಿಲಯಗಳು ಹಾಗೂ ರೈತ ಮುಖಂಡರುಗಳು ಕುಳಿತು ಚರ್ಚಿಸಿ ಕಾರ್ಯಕ್ರಮ ರೂಪಿಸಬೇಕು ಎಂದು ಹೇಳಿದರು.

ಅವಿಷ್ಕಾರ ಕೃಷಿ ಕ್ಷೇತ್ರ ತಲುಪಲಿ: ವಿಜಾnನದ ಆವಿಷ್ಕಾರಗಳು ಕೃಷಿ ಕ್ಷೇತ್ರವನ್ನು ತಲುಪುವಂತಾಗಬೇಕು. ಸಿರಿಧಾನ್ಯಗಳಿಂದ ಆಗುವ ಪರಿಣಾಮಗಳ ಬಗ್ಗೆ ವೈಜಾnನಿಕ ಸಂಶೋಧನೆ ಆಗಿಲ್ಲ. ಸಿರಿಧಾನ್ಯಗಳಲ್ಲಿ ರೋಗ ನಿರೋಧಕ ಅಂಶಗಳಿದ್ದರೂ ಉಪೇಕ್ಷೆ ಮಾಡಿದ್ದೇವೆ. ಸ್ವಯಂ ಸೇವಾ ಸಂಸ್ಥೆಗಳು ಸಿರಿಧಾನ್ಯಗಳ ಬಗ್ಗೆ ಪ್ರಚಾರ ಮಾಡುತ್ತಿರುವುದು ಸಮಾಧಾನಕರ ಸಂಗತಿ ಎಂದರು.

ಕೆರೆ ಜೀರ್ಣೋದ್ಧಾರ ಅವಶ್ಯ: ಕೃಷಿಯಲ್ಲಿ ಯಥೇಚ್ಚ ರಸಗೊಬ್ಬರ ಬಳೆಕೆಯಿಂದ ಭೂಮಿ ಮತ್ತು ಮಾನವನ ಆರೋಗ್ಯದ ಮೇಲೆ ದುಷ್ಪ$ರಿಣಾಮ ಬೀರುತ್ತಿದೆ ಎಂದ ಅವರು, ಕೆರೆಗಳ ಜೀರ್ಣೋದ್ಧಾರಕ್ಕೆ ಸರ್ಕಾರ ವಿಶೇಷ ಗಮನಕೊಡಬೇಕಿದೆ. ಸರ್ಕಾರದ ಹೂಳೆತ್ತುವ ಕಾಮಗಾರಿಗೆ ಬದಲಾಗಿ ರೈತರೇ ಕೆರೆಯ ಗೋಡನ್ನು ಹೊಲಕ್ಕೆ ಬಳಸಿಕೊಂಡಲ್ಲಿ ಉತ್ತಮ ಗೊಬ್ಬರ ದೊರಕಲಿದೆ ಎಂದು ಹೇಳಿದರು.

ರೈತರ ಸ್ಥಿತಿ ಅತಂತ್ರ: ಭಗೀರಥ ಉಪ್ಪಾರ ಪೀಠದ ಪುರುಷೋತ್ತಮಾನಂದ ಮಹಾಸ್ವಾಮಿ ಮಾತನಾಡಿ, ಯುವಕರು ಕೃಷಿಯಿಂದ ವಿಮುಖರಾಗಿ ನಗರಗಳಿಗೆ ವಲಸೆ ಹೋಗುತ್ತಿದ್ದಾರೆ. ಇದನ್ನು ತಪ್ಪಿಸಿ ಕೃಷಿಯತ್ತ ಯುವಜನರನ್ನು ಆಕರ್ಷಿಸುವ ಕೆಲಸವಾಗಬೇಕು.

ಆದರೆ, ಸರ್ಕಾರದ ನೀತಿ-ನಿಯಮಗಳು ಸಮರ್ಪಕವಾಗಿ ಜಾರಿಯಾಗದಿರುವುದರಿಂದ ರೈತರ ಸ್ಥಿತಿ ಡೋಲಾಯಮಾನವಾಗಿದೆ. ಕೃಷಿಗೆ ನೀರು, ವಿದ್ಯುತ್‌ ಸಮರ್ಪಕವಾಗಿ ಒದಗಿಸದೆ, ಬೆಳೆಗೆ ವೈಜಾnನಿಕ ಬೆಲೆ ಕೊಡದ ಸರ್ಕಾರಗಳು ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಪರಿಹಾರ ನೀಡಿ ಕೈತೊಳೆದುಕೊಳ್ಳುವ ಮಟ್ಟಕ್ಕೆ ತಲುಪಿವೆ ಎಂದು ವಿಷಾದಿಸಿದರು.

ಭಾಗ್ಯ ಕೊಟ್ಟು ಜನರ ಸೋಮಾರಿ ಮಾಡಿದ ಸರ್ಕಾರ: ಸಾಣೇಹಳ್ಳಿ ತರಳಬಾಳು ಶಾಖಾ ಮಠದ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು ಮಾತನಾಡಿ, ಉಚಿತ ಆಹಾರದ ಜತೆಗೆ ಮದ್ಯವನ್ನೂ ಕೊಟ್ಟ ಸರ್ಕಾರ ಹಲವು ಭಾಗ್ಯಗಳನ್ನು ಕೊಟ್ಟು ಜನರನ್ನು ಸೋಮಾರಿಗಳನ್ನಾಗಿಸಿದೆ. ಸಾಲ ಮಾಡಿದ ರೈತರು ಮರ್ಯಾದೆಗೆ ಅಂಜಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ.

ನಮ್ಮದು ರೈತಪರ ಸರ್ಕಾರ ಅನ್ನುವವರು ರೈತರಿಗಾಗಿ ಮಾಡಿರುವುದೇನು ಎಂದು ಪ್ರಶ್ನಿಸಿದರು.ರೈತರ ಸಮಸ್ಯೆಗಳಿಗೆ ಸರ್ಕಾರ ಮನ್ನಣೆ ನೀಡಿದ್ದರೆ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿರಲಿಲ್ಲ, ಸರ್ಕಾರ ಆತ್ಮಹತ್ಯೆಗೆ ಪರಿಹಾರ ನೀಡಬೇಕಾದ ಪ್ರಮೇಯವು ಬರುತ್ತಿರಲಿಲ್ಲ. ರೈತರನ್ನು ಸರಿಯಾದ ರೀತಿಯಲ್ಲಿ ಪ್ರೋತ್ಸಾಹಿಸದೆ ಯಾವ ಭಾಗ್ಯವು ಬೇಕಿಲ್ಲ ಎಂದರು. ಸಿರಿಧಾನ್ಯ ಬೆಳೆದರೂ ಸೂಕ್ತ ಮಾರುಕಟ್ಟೆ ಸಿಗುತ್ತಿಲ್ಲ.

ರಾಗಿ ಬೆಳೆಯಲು ಹೋಗಿ ಹಾಕಿದ ಬಂಡವಾಳ ವಾಪಸ್‌ ಬಾರದೆ ಕೈಸುಟ್ಟುಕೊಂಡ ಉದಾಹರಣೆಗಳಿದೆ. ಹೀಗಾಗಿ ಸರ್ಕಾರ ಕ್ವಿಂಟಾಲ್‌ ರಾಗಿಗೆ 5 ಸಾವಿರ ರೂ. ಬೆಂಬಲ ಘೋಷಿಸಲಿ ಎಂದು ಆಗ್ರಹಿಸಿದರು. ಸರ್ಕಾರದ ವಿರುದ್ಧ ರೈತರು ಬಂಡೇಳುವ, ಪ್ರಶ್ನಿಸುವ ಮನಸ್ಥಿತಿ ಬೆಳೆಸಿಕೊಳ್ಳಬೇಕು. ಆಗ ರೈತರ ಆತ್ಮಹತ್ಯೆಯೂ ತಪ್ಪುತ್ತೆ ಎಂದು ಹೇಳಿದರು.

ಸಂಘಟಿತರಾದರೆ ಶೋಷಣೆಯಿಂದ ಮುಕ್ತ: ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್‌ ಮಾತನಾಡಿ, ರೈತರು ಸಂಘಟಿತರಾದರೆ ಶೋಷಣೆಯಿಂದ ಮುಕ್ತರಾಗಲು ಸಾಧ್ಯ. ಈ ನಿಟ್ಟಿನಲ್ಲಿ 8-10ಹಳ್ಳಿಗಳ ರೈತರು ಸೇರಿ ರೈತ ಉತ್ಪಾದನಾ ಕಂಪನಿಗಳನ್ನು ಸ್ಥಾಪಿಸಿಕೊಂಡರೆ ಅನುಕೂಲವಾಗಲಿದೆ. ಸರ್ಕಾರಗಳನ್ನು ಎಚ್ಚರಿಸಲು ಸಾಕಷ್ಟು ಹೋರಾಟ ಮಾಡುತ್ತಿದ್ದೇವೆ.

ಆದರೆ, ರಾಜಕಾರಣಿಗಳೇ ಕಾರ್ಖಾನೆಗಳ ಮಾಲೀಕರಾಗಿರುವುದರಿಂದ ನ್ಯಾಯಯುತ ಬೆಲೆಕೊಡಿಸಲಾಗಿಲ್ಲ. ಹೀಗಾಗಿ ರೈತರು ಸಂಘಟಿತರಾಗಿ ಜಾಗೃತರಾಗಬೇಕು ಎಂದರು. ಮಾರಿಷಸ್‌ ಉಪ ರಾಷ್ಟ್ರಪತಿ ಪರಮಶಿವುಂ ಪಿಳ್ಳೆ„ ವ್ಯಾಪೂರಿ, ತಮಿಳುನಾಡು ಶಾಸಕ ವಿಜಯನ್‌ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

CID

CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.