ಫೆ.10,11:ಮುಂಬಯಿಯಲ್ಲಿ ಅ.ಭಾ.ಹೊರನಾಡ ಕನ್ನಡಿಗರ ಸಮಾವೇಶ

Team Udayavani, Jan 17, 2018, 2:41 PM IST

kannada.jpg

ಮುಂಬಯಿ: ನಗರದ ಕನ್ನಡ ಸಂಘ-ಸಂಸ್ಥೆಗಳು ಒಗ್ಗೂಡಿ ಕನ್ನಡ ಸಾಹಿತ್ಯ ಪರಿಷತ್‌ ಬೆಂಗಳೂರು ಸಂಸ್ಥೆಯ ಸಹಯೋಗ ದಿಂದಿಗೆ ಬೃಹನ್ಮುಂಬಯಿಯಲ್ಲಿ ಫೆ.  10 ಮತ್ತು ಫೆ. 11ರಂದು ಅಖೀಲ ಭಾರತ ಹೊರನಾಡ ಕನ್ನಡಿಗರ ಸಮಾವೇಶವನ್ನು ಆಯೋಜಿಸಲಾಗಿದೆ.

ಮುಂಬಯಿಯ ಮೊಟ್ಟ ಮೊದಲ ಕನ್ನಡ ಸಂಸ್ಥೆ  ಎಂಬ ಹೆಗ್ಗಳಿಕೆ ಪಡೆದಿರುವ ಹಾಗೂ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗಳಿಸಿರುವ ಮೊಗವೀರ ವ್ಯವಸ್ಥಾಪಕ ಮಂಡಳಿ ತಮ್ಮ ಅಂಧೇರಿ ಪಶ್ಚಿಮದ ವೀರಾ ದೇಸಾಯಿ ರಸ್ತೆಯಲ್ಲಿರುವ ಮೊಗವೀರ ಭವನದಲ್ಲಿ ಅದ್ದೂರಿಯಾಗಿ ಹಮ್ಮಿಕೊಂಡಿರುವ ಸಮಾವೇಶವನ್ನು ಯಶಸ್ವಿಯಾಗಿ ನಡೆಸಲು ಕನ್ನಡ ಸಂಸ್ಥೆಗಳು ಸಹಯೋಗ ನೀಡಲು ಮುಂದೆ ಬಂದಿವೆ. ಜೊತೆಗೆ ಮುಂಬಯಿಯ ಹೆಸರಾಂತ ಹಾಗೂ ಅತಿ ಹಳೆಯ ಕನ್ನಡ ಸಂಸ್ಥೆಗಳಾದ ಮೈಸೂರು ಅಸೋಸಿಯೇಶನ್‌, ಬಿಎಸ್‌ಕೆಬಿ ಅಸೋಸಿಯೇಶನ್‌, ಬಿಲ್ಲವರ ಅಸೋಸಿಯೇಶನ್‌ ಮುಂಬಯಿ, ಕರ್ನಾಟಕ ಸಂಘ ಮುಂಬಯಿ, ಬಂಟರ ಸಂಘ ಮುಂಬಯಿ, ಕನ್ನಡ ಸಂಘ ಮುಂಬಯಿ ಹಾಗೂ ನವಿಮುಂಬಯಿ ಕನ್ನಡ ಸಂಘಗಳು ಈ ಸಮಾವೇಶದ ಯಶಸ್ವಿಗಾಗಿ ತಮ್ಮ ಸಹಯೋಗ ನೀಡಿದ್ದು ಈಗಾಗಲೇ ಸಮಾವೇಶದ ರೂಪರೇಷೆಗಳು ರೂಪುಗೊಂಡಿವೆ.

ಸಮಾವೇಶವು ಮುಂಬಯಿ ಕನ್ನಡ ಶಾಲಾ ಮಕ್ಕಳು ಹಾಗೂ ಸಂಘ ಸಂಸ್ಥೆಗಳ ಸದಸ್ಯರೊಡಗೂಡಿ ಕನ್ನಡ ತಾಯಿ ಭುವನೇಶ್ವರಿ ಹಾಗೂ ಪಾಂಡುರಂಗ ವಿಠuಲನ ಮೆರವಣಿಗೆಯೊಂದಿಗೆ ಪ್ರಾರಂಭಗೊಂಡು ಆನಂತರ ಸಮಾವೇಶದ ಉದ್ಘಾಟನಾ ಸಮಾರಂಭ ನಡೆಯಲಿದೆ.  ಪ್ರತಿದಿನ ಮೂರು ವಿವಿಧ ವಿಚಾರ ಗೋಷ್ಠಿಗಳು ನಡೆಯಲಿದ್ದು,  ಮಧ್ಯೆ ಹಾಗೂ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ಕೊನೆಗೆ ಸಮಾರೋಪದೊಂದಿಗೆ ಮುಕ್ತಾಯ ಕಾಣಲಿದೆೆ.

ಸಮಾವೇಶದ ಅಂಗವಾಗಿ ಹೊರನಾಡ ಕನ್ನಡ ಸಂಘ ಸಂಸ್ಥೆಗಳ ನಡೆದು ಬಂದ ದಾರಿಯ ಬಗೆಗೆ ಛಾಯಾ ಚಿತ್ರಪ್ರದರ್ಶನ, ಹೊರನಾಡ ಸಾಹಿತಿಗಳ ಪುಸ್ತಕ ಪ್ರದರ್ಶನ, ಕನ್ನಡ ಪುಸ್ತಕ ಪ್ರಾಧಿಕಾರದ ಮಾರಾಟ ಮಳಿಗೆ ಹಾಗೂ ನೆನಹೊತ್ತಿಗೆಯ ಬಿಡುಗಡೆ ಕಾರ್ಯಕ್ರಮ ಒಳಗೊಂಡಿವೆ. ಸಮಾವೇಶದಲ್ಲಿ ಪಾಲ್ಗೊಳ್ಳಲು ಭಾರತದ ಎಲ್ಲ ನಗರಗಳಿಂದ ಸುಮಾರು 300 ಕ್ಕೂ ಅಧಿಕ ಕನ್ನಡ ಪ್ರತಿನಿಧಿಗಳು, ಖ್ಯಾತ ಸಾಹಿತಿಗಳು, ಚಿಂತಕರು ಆಗಮಿಸಲಿದ್ದಾರೆ. ಕರ್ನಾಟಕದ ಒಳನಾಡಿನಿಂದಲೂ ಹಿರಿಯ ಸಾಹಿತಿಗಳು ಪಾಲ್ಗೊಳ್ಳಲಿದ್ದಾರೆ.

ಈಗಾಗಲೇ ನಗರದ 25ಕ್ಕೂ ಮಿಕ್ಕಿದ ಸಂಘಗಳು ಸಹಭಾಗಿಗಳಾಗಲು ಒಪ್ಪಿಕೊಂಡಿದ್ದು ಈ ವರೆಗೆ ಇನ್ನೂ ಸಹಭಾಗಿಗಳಾಗದ ಸಂಘ ಸಂಸ್ಥೆಗಳು  ಕೂಡಲೇ ಸಮಿತಿಯನ್ನು ಸಂಪರ್ಕಿಸಿ ತಾವೂ ಈ ವಿಶೇಷ  ಸಮಾವೇಶದಲ್ಲಿ ಪಾಲ್ಗೊಳ್ಳಲು ಮುಂದೆ ಬರುವಂತೆ ಮುಂಬಯಿ  ಸಮಾವೇಶ ಸಮಿತಿಯು ತಿಳಿಸಿದೆ. ಮೈಸೂರು ಅಸೋಸಿಯೇಶನ್‌ ಮುಂಬಯಿ ಇದರ ಡಾ| ಗಣಪತಿ ಶಂಕರಲಿಂಗ, ಮೊಗವೀರ ವ್ಯವಸ್ಥಾಪಕ ಮಂಡಳಿ  ಮುಂಬಯಿ ಅಧ್ಯಕ್ಷ ಕೆ. ಎಲ್‌. ಬಂಗೇರ, ಬಿಎಸ್‌ಕೆಬಿ ಅಸೋಸಿಯೇಶನ್‌ ಅಧ್ಯಕ್ಷ ಡಾ| ಸುರೇಶ್‌ ಎಸ್‌. ರಾವ್‌ ಕಟೀಲು, ಬಂಟರ ಸಂಘ ಮುಂಬಯಿ ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ, ಕರ್ನಾಟಕ ಸಂಘ ಮುಂಬಯಿ ಇದರ ಗೌರವ ಪ್ರಧಾನ ಕಾರ್ಯದರ್ಶಿ ಡಾ| ಭರತಕುಮಾರ್‌ ಪೊಲಿಪು, ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಅಧ್ಯಕ್ಷ  ನಿತ್ಯಾನಂದ ಡಿ. ಕೋಟ್ಯಾನ್‌    ಮತ್ತಿತರ ಸಂಸ್ಥೆಗಳ ಮುಖ್ಯಸ್ಥರು ಮುಂಬಯಿ ಸಮಾವೇಶ ಸಮಿತಿಯಲ್ಲಿದ್ದು ಹೆಚ್ಚಿನ ಮಾಹಿತಿಗಾಗಿ ಸಂಪರ್ಕ ಸ್ಥಳೀಯ ಸಮಿತಿ ಮೈಸೂರು ಅಸೋಸಿಯೇಶನ್‌ ಮುಂಬಯಿ (24024647, 24037065) ಇಲ್ಲಿ ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್‌ ಬಗ್ಗೆ ರಮ್ಯಾ ಮಾತು

ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್‌ ಬಗ್ಗೆ ರಮ್ಯಾ ಮಾತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

4-dandeli

Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.