ಸಂಪುಟದಲ್ಲಿ ಬಡ್ತಿ ಮೀಸಲಾತಿ ಚರ್ಚೆ?
Team Udayavani, Jan 18, 2018, 9:09 AM IST
ಬೆಂಗಳೂರು: ಬಡ್ತಿ ಮೀಸಲಾತಿ ವಿಚಾರದಲ್ಲಿ ಮೂರು ತಿಂಗಳು ಕಾಲಾವಕಾಶ ನೀಡುವಂತೆ ರಾಜ್ಯ ಸರ್ಕಾರದ ಕೋರಿಕೆಗೆ ಸುಪ್ರೀಂಕೊರ್ಟ್ ಒಪ್ಪದಿದ್ದರೆ ಮುಂದೇನು ಮಾಡಬೇಕು ಎಂಬ ಬಗ್ಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಯಿತು. ಮಸೂದೆ ರಾಷ್ಟ್ರಪತಿಯವರ ಒಪ್ಪಿಗೆಗೆ ಕಳುಹಿಸಿರುವುದರ ಬಗ್ಗೆ ಪ್ರಮಾಣಪತ್ರದಲ್ಲಿ ಪ್ರಸ್ತಾಪಿಸಿರುವುದರಿಂದ ಬಹುತೇಕ ಕಾಲಾವಕಾಶ ಸಿಗಬಹುದು ಎಂಬ ಅಭಿಪ್ರಾಯ ವ್ಯಕ್ತವಾಯಿತು. ಆದರೂ, ಯಾವುದಕ್ಕೂ ಎಲ್ಲ ಇಲಾಖೆಗಳ ಪರಿಷ್ಕೃತ ಜೇಷ್ಠತಾ ಪಟ್ಟಿ ಸಿದ್ಧಪಡಿಸಿಕೊಳ್ಳಿ ಎಂಬ ಸೂಚನೆಯನ್ನೂ ನೀಡಲಾಯಿತು ಎಂದು ತಿಳಿದು ಬಂದಿದೆ.
ಸಿದ್ದರಾಮಯ್ಯ ಅವರು ನಡೆಸಿದ ಸಾಧನಾ ಸಂಭ್ರಮ ಯಾತ್ರೆ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ನಡೆಸಿದ ಯಾತ್ರೆಗೆ ಜನರ ಸ್ಪಂದನೆ, ಬಿಜೆಪಿ ಹಾಗೂ ಜೆಡಿಎಸ್ ಯಾತ್ರೆ ಹಾಗೂ ಬಿಜೆಪಿ ನಾಯಕರ ಟೀಕೆಗಳ ಬಗ್ಗೆಯೂ ಕೆಲವು ಸಚಿವರು ಪ್ರಸ್ತಾಪಿಸಿ ದರು. ಟೀಕೆಗಳಿಗೆ ತಿರುಗೇಟು ನೀಡುವಾಗ ಉದ್ರೇಕಕಾರಿ ಅಥವಾ ಪ್ರಚೋದನೆ ಹೇಳಿಕೆ ಕೊಡುವುದು ಸೂಕ್ರವಲ್ಲ ಎಂದು ಹಿರಿಯ ಸಚಿವರು ಅಭಿಪ್ರಾಯಪಟ್ಟರು.
ಹುದ್ದೆ ಸೃಷ್ಟಿಸಲು ಆದೇಶ
ಬೆಂಗಳೂರು: ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಹೊಸ ತಾಲೂಕುಗಳಿಗೆ ಅನ್ವಯ ಆಗುವಂತೆ ಕಂದಾಯ ಇಲಾಖೆಯಲ್ಲಿ ಹೊಸ ಹುದ್ದೆಗಳನ್ನು ಸೃಷ್ಟಿಸಿ ಸರ್ಕಾರ ಆದೇಶ ಹೊರಡಿಸಿದೆ. ತಹಸೀಲ್ದಾರ್ ಗ್ರೇಡ್ 1 ಹಾಗೂ ಗ್ರೇಡ್ 2 ಎರಡು ಹುದ್ದೆಗಳು, ಶಿರಸ್ತೆದಾರ 2 ಹುದ್ದೆ, ಪ್ರಥಮ ದರ್ಜೆ ಸಹಾಯಕ 3 ಹುದ್ದೆಗಳು, ಆಹಾರ ನಿರೀಕ್ಷಕ 1, ದ್ವಿತೀಯ ದರ್ಜೆ ಸಹಾಯಕ 4 ಹುದ್ದೆಗಳನ್ನು ವೃಂದ ಮತ್ತು ನೇಮಕಾತಿ ನಿಯಮಗಳ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳುವುದು. ಬೆರಳಚ್ಚು ಹಾಗೂ ಡಾಟಾ ಎಂಟ್ರಿ ಆಪರೇಟರ್ 1, ಗ್ರೂಪ್ ಡಿ ದರ್ಜೆಯ ನೌಕರ 3, ವಾಹನ ಚಾಲಕ 1 ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಸರ್ಕಾರ ಆದೇಶದಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ
Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Arrested: ಪೈಂಟ್ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ
Dharmasthala: ದೇವರ ದರ್ಶನ ಇನ್ನಷ್ಟು ಸುಲಲಿತ
ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ
OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.