ಪಡಿತರ ಗೋಣಿಯಲ್ಲಿ ತೂಕ ವ್ಯತ್ಯಾಸ


Team Udayavani, Jan 18, 2018, 12:09 PM IST

18-Jan-10.jpg

ಬೆಳ್ತಂಗಡಿ: ತಾಲೂಕಿನಲ್ಲಿ ಪಡಿತರ ಚೀಟಿ ಅಂಗಡಿಗಳಿಗೆ ಅಕ್ಕಿ ಸರಬರಾಜು ಮಾಡುವ ವೇಳೆ ತೂಕದಲ್ಲಿ ವ್ಯತ್ಯಾಸ ಕಂಡುಬರುತ್ತಿದ್ದು, ಇದರಿಂದ ಪಡಿತರ ಅಂಗಡಿಗಳಿಗೆ ನಷ್ಟ ಉಂಟಾಗುತ್ತಿದೆ. ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಜಿ.ಪಂ. ಸದಸ್ಯ ಕೊರಗಪ್ಪ ನಾಯ್ಕ ಆಗ್ರಹಿಸಿದರು. ಅವರು ಬುಧವಾರ ಇಲ್ಲಿನ ಬೆಳ್ತಂಗಡಿ ತಾ.ಪಂ. ಸಭಾಭವನದಲ್ಲಿ ತ್ತೈಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದರು.

ಕ್ರಮಕ್ಕೆ ಸೂಚನೆ
ಸಭೆಯ ಅಧ್ಯಕ್ಷತೆ ವಹಿಸಿದ್ದ ಶಾಸಕ ಕೆ. ವಸಂತ ಬಂಗೇರ, ಪ್ರತೀ ಕೆಡಿಪಿ ಸಭೆಯಲ್ಲಿ ಇಂತಹ ಆರೋಪ ಬರುತ್ತಿದೆ. ತತ್‌ಕ್ಷಣ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಗೋಣಿ ಚೀಲದಲ್ಲಿದ್ದ ಅಕ್ಕಿಯನ್ನು ಯಾರು ತೆಗೆಯುತ್ತಾರೆ, ಎಲ್ಲಿ ತೆಗೆಯುತ್ತಾರೆ ಎಂಬುದನ್ನು ಪತ್ತೆಹಚ್ಚಬೇಕು. ಪಡಿತರ ಅಕ್ಕಿ ಸಾಗಿಸುವ ವಾಹನದ ಹಿಂದೆ ಅಧಿಕಾರಿಗಳು ಹೋಗಿ ಪತ್ತೆಹಚ್ಚಬೇಕು. ಮುಂದೆ ಇಂತಹ ಘಟನೆ ನಡೆದರೆ ಅ ಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

ಮೆಸ್ಕಾಂ
ಕಳೆಂಜ, ನಿಡ್ಲೆ, ಶಿಶಿಲ ಮುಂತಾದೆಡೆ ಹಳೆ ವಿದ್ಯುತ್‌ ವಯರ್‌ಗಳನ್ನು ಬದಲಾಯಿಸಲು ಸಭೆಯಲ್ಲಿ ಅನೇಕ ಬಾರಿ ಪ್ರಸ್ತಾವ ಸಲ್ಲಿಸಲಾಗಿತ್ತು. ಈ ಬಗ್ಗೆ ಕ್ರಮ ಕೈಗೊಂಡಿಲ್ಲ ಎಂದು ಕೊರಗಪ್ಪ ನಾಯ್ಕ ಆರೋಪಿಸಿದರು. ಇದಕ್ಕೆ ಉತ್ತರಿಸಿದ ಸಹಾಯಕ ಕಾರ್ಯಪಾಲಕ ಅಭಿಯಂತ ಶಿವಶಂಕರ್‌, ಈಗಾಗಲೇ 1.3 ಕೋಟಿ ರೂ. ಮಂಜೂರಾಗಿದ್ದು, ಇದಕ್ಕೆ ಅತ್ಯಾಧುನಿಕ ಉಪಕರಣಗಳು ಬರಬೇಕಾಗಿವೆ. ಈಗಾಗಲೇ ಟೆಂಡರ್‌ ಮುಗಿದಿದೆ. 2 ತಿಂಗಳೊಳಗಕಾಮಗಾರಿ ಪೂರ್ಣಗೊಳ್ಳಲಿದೆ. ಅಲ್ಲದೆ ತಾಲೂಕಿಗೆ 360 ಟ್ರಾನ್ಸ್‌ಫಾರ್ಮರ್‌ ಮಂಜೂರಾಗಿದ್ದು, ಶೀಘ್ರ ಅಳವಡಿಸಲಾಗುವುದು ಎಂದರು.

ಟ್ರಾಫಿಕ್‌
ಉಜಿರೆ-ಗುರುವಾಯನಕೆರೆ ಮಧ್ಯೆ ಟ್ರಾಫಿಕ್‌ ಸಮಸ್ಯೆ ಬಗ್ಗೆ ಸದಸ್ಯರು ಅತೃಪ್ತಿ ಸೂಚಿಸಿದರು. ಇದಕ್ಕೆ ಸರ್ಕಲ್‌ ಇನ್‌ಸ್ಪೆಕ್ಟರ್‌ ನಾಗೇಶ್‌ ಕದ್ರಿ ಅವರಿಗೆ ಶಾಸಕ ಬಂಗೇರ, ರಸ್ತೆ ಮಧ್ಯದಲ್ಲಿ ವಾಹನ ನಿಲ್ಲಿಸುವವರಿಗೆ ಕೇಸು ದಾಖಲಿಸಬೇಕು. ಸಮರ್ಥ ಪೊಲೀಸ್‌ ಸಿಬಂದಿಯನ್ನು ಟ್ರಾಫಿಕ್‌ ನಿಯಂತ್ರಣಕ್ಕೆ ನೇಮಿಸಿ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಬೇಕೆಂದು ಸೂಚಿಸಿದರು. ಅನೇಕ ಬಾರಿ ಈ ಕುರಿತು ಸೂಚಿಸಿದರೂ ಯಾವುದೇ ಕ್ರಮ ಕೈಗೊಳ್ಳದ ಕುರಿತು ಅಸಮಾಧಾನ ವ್ಯಕ್ತಪಡಿಸಿದರು.

ಅಪಾಯದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡ
ಅರಸಿನಮಕ್ಕಿ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿ ಅಪಾಯಕಾರಿ ಮರ ಬಿದ್ದು ಕಟ್ಟಡಕ್ಕೆ ತೊಂದರೆಯಾಗುತ್ತಿದೆ.
ಇದನ್ನು ತೆರವುಗೊಳಿಸುವಂತೆ ಕಳೆದ ಎರಡು ಕೆಡಿಪಿ ತ್ತೈಮಾಸಿಕ ಸಭೆಯಲ್ಲಿ ಪ್ರಸ್ತಾವಿಸಿದರೂ ಕ್ರಮ ಕೈಗೊಂಡಿಲ್ಲ
ಎಂದು ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು. ಇದಕ್ಕೆ ಉತ್ತರಿಸಿದ ಉಪ್ಪಿನಂಗಡಿ ಅರಣ್ಯ ವಲಯಾಧಿಕಾರಿ
ಸೌಮ್ಯಲತಾ, ಕೋರ್ಟ್‌ ಆದೇಶದಂತೆ ಸರಕಾರಿ ಪ್ರದೇಶದ ಮರವನ್ನು ಕಡಿಯಬೇಕಾದರೆ 10 ಗಿಡಗಳನ್ನು ನೆಡಬೇಕು
ಮತ್ತು ಅದರ 5 ವರ್ಷ ನಿರ್ವಹಣೆಗೆ ಹಣ ಠೇವಣಿ ಇಡಬೇಕು ಎಂಬ ನಿಯಮವಿದ್ದು, ಇದರಿಂದ ವಿಳಂಬವಾಗಿದೆ.
ಇದೀಗ ಆ ನಿಯಮಕ್ಕೆ ತಡೆಯಾಜ್ಞೆ ಬಂದಿದ್ದು, ಮುಂದೆ ಕಾನೂನಿನಡಿಯಲ್ಲಿ ತೆರವುಗೊಳಿಸಲಾಗುವುದು ಎಂದರು.
ಇದಕ್ಕೆ ಶಾಸಕ ಬಂಗೇರ, ತತ್‌ಕ್ಷಣ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.

ರಾಜಕೀಯ ಭಾಷಣ
ಶಾಲಾ ವಾರ್ಷಿಕೋತ್ಸವದಲ್ಲಿ ಸ್ಥಳೀಯ ಜನಪ್ರತಿನಿಧಿಗಳಲ್ಲದೆ ಹೊರಗಿನವರನ್ನು ಪಕ್ಷದ ಹುದ್ದೆಯಲ್ಲಿದ್ದವರನ್ನು ಸಭೆಗೆ ಕರೆಸಿ ದಿಕ್ಸೂಚಿ ಭಾಷಣ ಮಾಡಿಸುತ್ತಿದ್ದಾರೆ. ಇದು ಶಿಕ್ಷಣ ಇಲಾಖೆ ನಿಯಮ ಮೀರಿ ಮಾಡುವ ಕೆಲಸವಾಗಿದೆ ಈ ಬಗ್ಗೆ ತನಿಖೆ ನಡೆಸಬೇಕು ಎಂದು ಜಿ.ಪಂ. ಶಿಕ್ಷಣ ಮತ್ತು ಸ್ಥಾಯೀಸಮಿತಿ ಅಧ್ಯಕ್ಷ ಶಾಹುಲ್‌ ಸಮೀದ್‌ ಆಗ್ರಹಿಸಿದರು. ಈ ಬಗ್ಗೆ ಶಾಸಕ ಬಂಗೇರ ಶಿಕ್ಷಣ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಇದಕ್ಕೆ ಉತ್ತರಿಸಿದ ಶಿಕ್ಷಣಾಧಿಕಾರಿ ಗುರುಪ್ರಸಾದ್‌, ಕೆಲವೊಂದು ಕಡೆ ಇಂತಹ ಎಡವಟ್ಟು ನಡೆದಿದೆ. ಮುಂದೆ
ಸರಿಪಡಿಸಲಾಗುವುದು ಎಂದಾಗ ಮತ್ತೆ ಆಕ್ರೋಶಗೊಂಡ ಶಾಸಕರು, ಶಾಲೆಯ ವಾರ್ಷಿಕೋತ್ಸವ ವಿದ್ಯಾರ್ಥಿಗಳಿಗೆ
ಪ್ರಯೋಜನವಾಗಬೇಕೆ ಹೊರತು ರಾಜಕೀಯ ಉದ್ದೇಶಕ್ಕೆ ಬಳಕೆಯಾಗಬಾರದು. ಮುಂದೆ ಇಂತಹ ಘಟನೆ ಸಂಭವಿಸಿದರೆ ನಿಮ್ಮ ಇರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಡಿಪೋ ಆಗಿಲ್ಲ
ಉಜಿರೆ ಅರಳಿ ಎಂಬಲ್ಲಿ ಕೆಎಸ್‌ಆರ್‌ಟಿಸಿ ಡಿಪ್ಪೋಗೆ ಜಮೀನು ಮಂಜೂರಾತಿ ಬಗ್ಗೆ ಕಳೆದ ಮೂರು ಸಭೆಗಳಲ್ಲಿ ಪ್ರಸ್ತಾವವಾದರೂ ಕ್ರಮ ಕೈಗೊಂಡಿಲ್ಲ ಎಂದು ಜಿ.ಪಂ. ಸದಸ್ಯ ಕೊರಗಪ್ಪ ನಾಯ್ಕ ತಿಳಿಸಿದರು. ಇದಕ್ಕೆ ಮಧ್ಯ ಪ್ರವೇಶಿಸಿದ ಜಿ.ಪಂ. ಸದಸ್ಯೆ ನಮಿತಾ, ಇದು ನನ್ನ ವ್ಯಾಪ್ತಿಗೆ ಒಳಪಟ್ಟ ವಿಚಾರ. ಇದನ್ನು ನಾನೇ ಸಭೆಯಲ್ಲಿ ಪ್ರಸ್ತಾವಿಸುತ್ತೇನೆ. ನಿಮ್ಮ ವ್ಯಾಪ್ತಿಯನ್ನು ನೀವು ನೋಡಿಕೊಳ್ಳಿ ಎಂದಾಗ ಸ್ವಲ್ಪ ಮಾತಿನ ಚಕಮಕಿ ನಡೆಯಿತು. ಇದಕ್ಕೆ ಉತ್ತರಿಸಿದ ಕೊರಗಪ್ಪ ನಾಯ್ಕ, ತಾಲೂಕಿನ ಅಭಿವೃದ್ಧಿ ಹಿತದೃಷ್ಟಿಯಲ್ಲಿ ಯಾರೂ ಎಲ್ಲಿಯ ವಿಚಾರವನ್ನೂ ಈ ಸಭೆಯಲ್ಲಿ ಪ್ರಸ್ತಾವಿಸಬಹುದು ಎಂದು ಮಾತು ಮುಂದುವರಿಸಿದರು.

ಶಾಸಕರು, ಅರಣ್ಯ ಇಲಾಖೆಯವರು ಸರಕಾರಕ್ಕೆ ತಪ್ಪುಮಾಹಿತಿ ನೀಡುತ್ತಿದ್ದಾರೆ. ಕೂಡಲೇ ಈ ಬಗ್ಗೆ ಮರುಪರಿಶೀಲನೆ
ಮಾಡಿ ನಿವೇಶನ ಒದಗಿಸುವಂತೆ ಸೂಚಿಸಿದರು. ಇದಕ್ಕೆ ಉತ್ತರಿಸಿದ ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ, ಇದು
ಡೀಮ್ಡ್ ಫಾರೆಸ್ಟ್‌ ಜಮೀನಾಗಿದ್ದು, ಇದರ ಪಹಣಿಪತ್ರ ನಮ್ಮ ಹೆಸರಿಗೆ ಆಗಿದೆ. ಕೊಡಲು ಸಾಧ್ಯವಿಲ್ಲ ಎಂದಾಗ
ಮತ್ತೆ ತರಾಟೆಗೆ ತೆಗೆದುಕೊಂಡ ಶಾಸಕರು, ಅರಣ್ಯ ಫಾರೆಸ್ಟ್‌ ಮತ್ತು ಡೀಮ್ಡ್ ಫಾರೆಸ್ಟ್‌ ಗೆ ವ್ಯತ್ಯಾಸವಿದ್ದು, ಇದು ನಿಮ್ಮ
ತಪ್ಪಿನಿಂದಲೇ ಈ ರೀತಿಯಾಗಿದೆ. ಕೂಡಲೇ ಇದಕ್ಕೆ ಮರು ಪ್ರಸ್ತಾವನೆ ಕಳಿಸಿ ಕೆಎಸ್‌ಆರ್‌ಟಿಸಿ ಡಿಪ್ಪೋಗೆ ನಿವೇಶನ
ಒದಗಿಸಲು ಆದೇಶಿಸಿದರು.

ತಾ.ಪಂ. ಅಧ್ಯಕ್ಷೆ ದಿವ್ಯಜ್ಯೋತಿ, ಉಪಾಧ್ಯಕ್ಷೆ ವೇದಾವತಿ, ಜಿ.ಪಂ. ಆರೋಗ್ಯ ಮತ್ತು ಶಿಕ್ಷಣ ಸ್ಥಾಯೀ
ಸಮಿತಿ ಅಧ್ಯಕ್ಷ ಶಾಹುಲ್‌ ಹಮೀದ್‌, ತಾ.ಪಂ. ಸ್ಥಾಯೀ ಸಮಿತಿ ಅಧ್ಯಕ್ಷ ಸುಧೀರ್‌ ಆರ್‌. ಸುವರ್ಣ, ತಾ.ಪಂ
ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಬಸವರಾಜ್‌ ಕೆ. ಅಯ್ಯಣ್ಣನವರ್‌ ಉಪಸ್ಥಿತರಿದ್ದರು. ತಾ.ಪಂ. ಸಂಯೋಜಕ ಜಯನಂದ್‌ ಹಾಗೂ ಮ್ಯಾನೇಜರ್‌ ಗಣೇಶ್‌ ಕಾರ್ಯಕ್ರಮ ನಿರೂಪಿಸಿದರು.

ಅಧಿಕಾರಿಗಳಿಗೆ ಕೃತಜ್ಞತೆ 
ಸಭೆ ಪ್ರಾರಂಭವಾಗುತ್ತಿದ್ದಂತೆ ಜ. 7ರಂದು ತಾಲೂಕಿಗೆ ಮುಖ್ಯಮಂತ್ರಿ ಆಗಮನದ ವೇಳೆ ಮುತುವರ್ಜಿಯಿಂದ ಅತ್ಯಂತ ವ್ಯವಸ್ಥಿತವಾಗಿ ಕರ್ತವ್ಯ ನಿರ್ವಹಿಸಿದ ಎಲ್ಲ ಅಧಿಕಾರಿಗಳಿಗೆ ಶಾಸಕ ವಸಂತ ಬಂಗೇರ ಅಭಿನಂದನೆ ಸಲ್ಲಿಸಿದರು.

ಟಾಪ್ ನ್ಯೂಸ್

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

1-trr

CAG Report; ಕೇಂದ್ರ ಸರಕಾರ‌ದ ವಿತ್ತೀಯ ಕೊರತೆ ಶೇ.45ಕ್ಕೆ ಏರಿಕೆ!

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

supreem

ದೇವಾಲಯಗಳ ಪ್ರಸಾದ ಗುಣಮಟ್ಟ ಪರಿಶೀಲನೆ ಅರ್ಜಿಗೆ ಸುಪ್ರೀಂ ನಕಾರ

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.