ಸರಕಾರಿ ಜಾಗ ಅತಿಕ್ರಮಣ ಯತ್ನ: ಸ್ಥಳೀಯರಿಂದ ಆಕ್ಷೇಪ


Team Udayavani, Jan 18, 2018, 3:41 PM IST

18-Jan-19.jpg

ಉಪ್ಪಿನಂಗಡಿ : ಮಹಿಳೆಯೊಬ್ಬರು ಸರಕಾರಿ ಜಾಗ ಅತಿಕ್ರಮಿಸಲು ನಡೆಸಿದ ಯತ್ನವನ್ನು ಸ್ಥಳೀಯರು ತಡೆದ ಘಟನೆ 34ನೇ  ನೆಕ್ಕಿಲಾಡಿ ಗ್ರಾಮದ ಆದರ್ಶನಗರದಲ್ಲಿ ಮಂಗಳವಾರ ನಡೆದಿದೆ.

ಆದರ್ಶನಗರದಲ್ಲಿರುವ ಸರಕಾರಿ ಜಾಗದಲ್ಲಿ ನಿರ್ಮಾಣಗೊಂಡಿರುವ ಜಿ.ಪಂ.ನ ಶುದ್ಧ ಕುಡಿಯುವ ನೀರಿನ ಘಟಕದ ಬಳಿ ಖಾಲಿ ಸರಕಾರಿ ಜಾಗವಿತ್ತು. ಅದನ್ನು ಬೇರೆ ಗ್ರಾಮದ ಮಹಿಳೆಯೊಬ್ಬರು ಬಂದು ಜೆಸಿಬಿಯಿಂದ ಸಮತಟ್ಟು ಮಾಡಿಸಲು ಮುಂದಾದರು. ಇದನ್ನು ಸ್ಥಳೀಯರು ಆಕ್ಷೇಪಿಸಿದಾಗ, 34ನೇ ನೆಕ್ಕಿಲಾಡಿ ಗ್ರಾ.ಪಂ. ಅಧ್ಯಕ್ಷರೇ ತನಗೆ ಈ ಜಾಗ ತೋರಿಸಿದ್ದಾರೆ ಎಂದು ಮಹಿಳೆ ಹೇಳಿದ್ದು ಇದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಯಿತು.

ಕುಡಿಯುವ ನೀರಿನ ಘಟಕಕ್ಕೆ ಕುತ್ತು?
ಉಪ್ಪಿನಂಗಡಿ- ಪುತ್ತೂರು ರಾಜ್ಯ ಹೆದ್ದಾರಿಯ ಬದಿಯಲ್ಲಿರುವ ಈ ಸರಕಾರಿ ಜಾಗವನ್ನು ಸಮತಟ್ಟುಗೊಳಿಸಲಾಗಿದ್ದು, ಇದರಿಂದ ಅಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಗ್ರಾ.ಪಂ.ನ ಕೊಳವೆ ಬಾವಿಗೆ ಕುತ್ತು ಬರುವ ಸಾಧ್ಯತೆಯಿದೆ ಎಂದು ಸ್ಥಳೀಯರು ಆತಂಕ ವ್ಕಕ್ತಪಡಿಸಿದ್ದಾರೆ.

ಗ್ರಾ.ಪಂ. ಅಧ್ಯಕ್ಷರೇ ಜಾಗ ತೋರಿಸಿದ್ದಾರೆ ಎಂದು ಮಹಿಳೆ ಹೇಳಿದ್ದರಿಂದ ಸ್ಥಳೀಯರು ಗ್ರಾ.ಪಂ. ಉಪಾಧ್ಯಕ್ಷ ಅಸ್ಕರ್‌ ಅಲಿ ಹಾಗೂ ಶೇಖಬ್ಬ ಅವರಿಗೆ ಮಾಹಿತಿ ನೀಡಿದರು. ಅವರು ಸ್ಥಳಕ್ಕೆ ಆಗಮಿಸಿ, ನಮಗೆ ಏನೂ ತಿಳಿದಿಲ್ಲ ಎಂದರಲ್ಲದೆ, ಸ್ಥಳೀಯರ ಪರ ನಿಂತರು. 34ನೇ ನೆಕ್ಕಿಲಾಡಿ ಗ್ರಾಮದಲ್ಲೇ ನಿವೇಶನರಹಿತ ಹಲವು ಕುಟುಂಬಗಳು ಇರುವಾಗ ಬೇರೆ ಗ್ರಾಮದ ಮಹಿಳೆಗೆ ಜಾಗ ತೋರಿಸುವ ಅಗತ್ಯವಾದರೂ ಏನು? ಸರಕಾರಿ ಜಾಗದ ಹಕ್ಕು ಸಾಧಿಸಲು ಪಂಚಾಯತ್‌ ಅಧ್ಯಕ್ಷರಿಗೆ ಅಧಿಕಾರವಿದೆಯೇ? ಜಾಗ ಅತಿಕ್ರಮಿಸಿದ ಮಹಿಳೆಯ ಹೇಳಿಕೆಯಿಂದ ಅಧ್ಯಕ್ಷರ ಮೇಲೆಯೇ ಸಂಶಯ ಮೂಡಿಸಿದೆ. ಸರಕಾರಿ ಜಾಗ ಅತಿಕ್ರಮಿಸಲು ಅವಕಾಶ
ನೀಡಬಾರದು ಎಂದು ಒತ್ತಾಯಿಸಿ, ಸ್ಥಳೀಯರು 34ನೇ ನೆಕ್ಕಿಲಾಡಿ ಗ್ರಾ.ಪಂ.ಗೆ ಮನವಿಯನ್ನೂ ನೀಡಿದ್ದಾರೆ. 

ತೆರವಿಗೆ ಸೂಚನೆ
ಈ ಕುರಿತು ಉದಯವಾಣಿ – ಸುದಿನ ಪ್ರಶ್ನಿಸಿದಾಗ, ಸರಕಾರಿ ಜಾಗದಲ್ಲಿ ಈ ಮಹಿಳೆ ಮನೆ ಕಟ್ಟಲು ಅನುಮತಿ ಕೇಳಿದ್ದರು. ಆದರೆ, ಅಲ್ಲಿ ಪಕ್ಕದಲ್ಲೇ ಕುಡಿಯುವ ನೀರಿನ ಟ್ಯಾಂಕ್‌ ಇರುವ ಕಾರಣ ಸ್ಥಳೀಯರು ಆಕ್ಷೇಪಿಸಿದ್ದಾರೆ. ಇದನ್ನು ಮನಗಂಡು, ಅಕ್ರಮ ನಿರ್ಮಾಣವನ್ನು ತೆರವು ಮಾಡುವಂತೆ ಸೂಚಿಸಿದ್ದೇನೆ ಎಂದು 34ನೇ ನೆಕ್ಕಿಲಾಡಿ ಗ್ರಾ.ಪಂ. ಅಧ್ಯಕ್ಷೆ ರತಿ ಎಸ್‌. ನಾೖಕ್‌ ಪ್ರತಿಕ್ರಿಯಿಸಿದ್ದಾರೆ.

ಟಾಪ್ ನ್ಯೂಸ್

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Suside-Boy

Putturu: ಬಡಗನ್ನೂರು: ನೇಣು ಬಿಗಿದು ಆತ್ಮಹ*ತ್ಯೆ

11

Uppinangady: ಸರಣಿ ಅಪಘಾತ; 19 ಮಂದಿಗೆ ಗಾಯ

Puttur: ಮಾದಕ ಪದಾರ್ಥ ಸೇವಿಸಿ ಅನುಚಿತ ವರ್ತನೆ… ಇಬ್ಬರ ಬಂಧನ

Puttur: ಮಾದಕ ಪದಾರ್ಥ ಸೇವಿಸಿ ಅನುಚಿತ ವರ್ತನೆ… ಇಬ್ಬರ ಬಂಧನ

11-kambala

Kambala ಋತುವಿನ ಪ್ರಥಮ ಕಂಬಳ; ಕೊಡಂಗೆ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.