ಕನ್ನಡಿಗರ ಅವಹೇಳನ ಸಲ್ಲದು
Team Udayavani, Jan 18, 2018, 4:45 PM IST
ಮಂಡ್ಯ: ಕನ್ನಡಿಗರ ಬಗ್ಗೆ ಅವಹೇಳನಕಾರಿ ಯಾಗಿ ಮಾತನಾಡಿರುವ ಗೋವಾ ರಾಜ್ಯದ ಜಲಸಂಪನ್ಮೂಲ ಸಚಿವ ವಿನೋದ್ ಪಾಲೇಕರ್ ವಿರುದ್ಧ ರಾಜ್ಯ ರೈತಸಂಘದ ಕಾರ್ಯಕರ್ತರು ನಗರದಲ್ಲಿ ಬುಧವಾರ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.
ನಗರದ ಸರ್ ಎಂ.ವಿ. ಪ್ರತಿಮೆ ಬಳಿ ಜಮಾಯಸಿದ ಕಾರ್ಯಕರ್ತರು, ಕೆಲ ಕಾಲ ಹೆದ್ದಾರಿ ತಡೆ ನಡೆಸಿ ರಸ್ತೆ ಸಂಚಾರಕ್ಕೆ ಅಡ್ಡಿ ಪಡಿಸಿದರು. ಕರ್ನಾಟಕದವರನ್ನು “ಹರಾಮಿ’ ಗಳು ಎಂದು ಕರೆದ ಗೋವಾ ಜಲಸಂಪನ್ಮೂಲ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ದರಲ್ಲದೆ, ತಕ್ಷಣ ಕನ್ನಡಿಗರ ಕ್ಷಮೆಯಾಚಿ ಸುವಂತೆ ಒತ್ತಾಯಿಸಿದರು.
ಇಂತಹ ಸಚಿವರನ್ನು ಸಂಪುಟದಲ್ಲಿ ಇಟ್ಟು ಕೊಂಡು ಆಡಳಿತ ನಡೆಸುತ್ತಿರುವ ಗೋವಾ ಮುಖ್ಯಮಂತ್ರಿ ಮನೋಹರ್ ಪರ್ರಿಕರ್ ಅವರೂ ಸಹ ಕನ್ನಡಿಗರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು. ಕನ್ನಡಿಗರು ಶಾಂತಿಪ್ರಿಯರು, ಹೃದಯ ವೈಶಾಲ್ಯತೆಯುಳ್ಳವರು. ನಮ್ಮ ತಾಳ್ಮೆಗೂ ಒಂದು ಮಿತಿ ಇದೆ. ಕನ್ನಡಿಗರು ಒಮ್ಮೆ ಸಿಡಿದೆದ್ದರೆ ಎಲ್ಲರನ್ನೂ ಮಣಿಸುವ ಚೈತನ್ಯ ವಿದೆ. ಕನ್ನಡಿಗರ ಬಗ್ಗೆ ಮಾತನಾಡುವಾಗ ನಾಲಿಗೆ ಮೇಲೆ ಹಿಡಿತವಿರಬೇಕೇ ಹೊರತು ಹರಿತವಿರ ಬಾರದು ಎಂದು ಕಿಡಿಕಾರಿದರು.
ಕುಡಿಯುವ ನೀರಿನ ಉದ್ದೇಶಕ್ಕೆ ಮಹದಾಯಿ ನೀರನ್ನು ಕೇಳುತ್ತಿದ್ದೇವೆಯೇ ಹೊರತು ಕೃಷಿ ಉದ್ದೇಶಕ್ಕಲ್ಲ. ಕುಡಿಯುವ
ನೀರನ್ನು ನೀಡುವ ಕನಿಷ್ಠ ಮಾನವೀಯತೆಯೂ ನಿಮಗಿಲ್ಲ. ಜನರ ದಾಹ ಇಂಗಿಸುವ ನೀರನ್ನು ವ್ಯರ್ಥವಾಗಿ ಸಮುದ್ರಕ್ಕೆ ಹರಿಸುವ ದುಷ್ಟತನ ನಿಮ್ಮಲ್ಲಿರುವುದೇ ವಿನಃ ನಮ್ಮಲ್ಲಲ್ಲ ಎಂದು ಆಕ್ರೋಶದಿಂದ ಹೇಳಿದರು.
ರಾಜ್ಯಸರ್ಕಾರ ಸರ್ವೋತ್ಛ ನ್ಯಾಯಾಲಯದ ಆದೇಶವನ್ನು ಎಂದೂ ಉಲ್ಲಂಘಿಸಿದ ಉದಾಹರಣೆಗಳಿಲ್ಲ. ಅದು ಕಾವೇರಿ ವಿಚಾರವಾಗಿರಲಿ, ಮಹದಾಯಿ ವಿಚಾರವಾಗಿರಲಿ. ಕನ್ನಡಿಗರ ಮೇಲೆ ಸುಳ್ಳು ಆರೋಪ ಮಾಡುವ ಮೂಲಕ ಪಾಲೇಕರ್ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಕನ್ನಡಿಗರ ಬಗ್ಗೆ ಹಗುರವಾಗಿ ಮಾತ ನಾಡಿರುವುದು ಪಾಲೇಕರ್‌ರ ಮುಠ್ಠಾಳತನ ವನ್ನು ತೋರಿಸುತ್ತದೆ. ಇದು ಒಕ್ಕೂಟ ವ್ಯವಸ್ಥೆಗೆ ಮಾಡಿರುವ ಅಪಮಾನ. ಒಂದು ರಾಜ್ಯದ ಸಚಿವನಾಗಿ ಜವಾಬ್ದಾರಿ ಸ್ಥಾನದಲ್ಲಿರುವ ವ್ಯಕ್ತಿ ಮತ್ತೂಂದು ರಾಜ್ಯದ ಜನರ ಬಗ್ಗೆ ಇಂತಹ ಕೀಳು ಮಟ್ಟದ ಹೇಳಿಕೆ ನೀಡುವುದು ಅವರಿಗೆ ಶೋಭೆ ತರುವುದಿಲ್ಲ. ಇನ್ನಾದರೂ ಇಂತಹ ಹೇಳಿಕೆ ನೀಡುವುದನ್ನು ಬಿಟ್ಟು ತಕ್ಷಣ ಕನ್ನಡಿಗರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಮುಖಂಡರಾದ ಶಂಭೂನಹಳ್ಳಿ ಸುರೇಶ್, ರಾಮಕೃಷ್ಣೇಗೌಡ, ಬೊಮ್ಮೇಗೌಡ, ಲತಾ ಶಂಕರ್ ಇತರರು
ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.