ದಕ್ಷಿಣ ಕನ್ನಡ ಜಿ.ಪಂ. ಸಿಇಒ ಆದೇಶಕ್ಕೆ ಮಧ್ಯಂತರ
Team Udayavani, Jan 19, 2018, 6:35 AM IST
ಬೆಂಗಳೂರು: ಭುವನಜ್ಯೋತಿ ಎಜುಕೇಷನ್ ಟ್ರಸ್ಟ್‌ಗೆ ಆಸ್ತಿ ತೆರಿಗೆ ಪಾವತಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಗುರುವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಆಸ್ತಿ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಲು ನಿರಾಕರಿಸಿದ್ದ ದಕ್ಷಿಣ ಕನ್ನಡ ಜಿ.ಪಂ ಸಿಇಒ ಕ್ರಮ ಪ್ರಶ್ನಿಸಿ ದಕ್ಷಿಣ ಕನ್ನಡ ಜಿಲ್ಲೆಯ ಭುವನಜ್ಯೋತಿ ಚಾರಿಟಬಲ್ ಟ್ರಸ್ಟ್‌ನ ಭುವನಜ್ಯೋತಿ ಎಜುಕೇಷನ್ ಟ್ರಸ್ಟ್ ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿನೀತ್ ಕೊಠಾರಿ ಅವರಿದ್ದ ಪೀಠ ತಡೆಯಾಜ್ಞೆ ನೀಡಿತು.
ಜೊತೆಗೆ ಯಾವ ಆಧಾರದಲ್ಲಿ ಅರ್ಜಿದಾರರಿಗೆ ತೆರಿಗೆ ವಿನಾಯ್ತಿ ನಿರಾಕರಿಸಲಾಗಿದೆ, ಯಾವ ನಿಯಮದಡಿ ತೆರಿಗೆ ಪಾವತಿಸುವಂತೆ ಸೂಚಿಸಲಾಗಿದೆ ಎಂದು ಪ್ರಮಾಣ ಪತ್ರ ಸಲ್ಲಿಸುವಂತೆ ಜಿ.ಪಂ. ಸಿಇಒಗೆ ನಿರ್ದೇಶನ ನೀಡಿರುವ ನ್ಯಾಯಪೀಠ, ಪ್ರಕರಣದ ಪ್ರತಿವಾದಿಗಳಾದ ಶಿರ್ತಾಡಿ ಗ್ರಾಮ ಪಂಚಾಯಿತಿ ಪಿಡಿಒ, ದಕ್ಷಿಣ ಕನ್ನಡ ಜಿ.ಪಂ ಸಿಇಒ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಿತು.
ಪ್ರಮಾಣಪತ್ರದ ಸಲ್ಲಿಸಲು ವಿಫಲವಾದಲ್ಲಿ ಮುಂದಿನ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಖುದ್ದು ಹಾಜರಾಗಿ ಠೇವಣ ರೂಪದಲ್ಲಿ 50 ಸಾವಿರ ರೂ. ನ್ಯಾಯಾಲಯಕ್ಕೆ ಸಲ್ಲಿಸಬೇಕು. ಆ ಠೇವಣಿ ಮೊತ್ತವನ್ನು ಅರ್ಜಿದಾರ ಸಂಸ್ಥೆಗೆ ಪರಿಹಾರ ರೂಪದಲ್ಲಿ ಏಕೆ ಕೊಡಬಾರದು ಎಂಬುದರ ಬಗ್ಗೆ ವಿವರಣೆ ನೀಡಬೇಕು ಎಂದು ಸಿಇಒಗೆ ತಾಕೀತು ಮಾಡಿದ ನ್ಯಾಯಪೀಠ, ವಿಚಾರಣೆಯನ್ನು ನಾಲ್ಕು ವಾರಗಳ ಕಾಲ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್ ಭೇಟಿ ಸಾಧ್ಯತೆ
DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ
DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Kiccha Sudeepa: ಕ್ರಿಸ್ಮಸ್ ಗೆ ಬರುತ್ತಿದೆ ʼಮ್ಯಾಕ್ಸ್ʼ
IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್ ವಿರುದ್ದ ಫಿಕ್ಸಿಂಗ್ ಆರೋಪ ಮಾಡಿದ ಲಲಿತ್ ಮೋದಿ
Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.