ಚುನಾವಣಾ ಅಖಾಡಕ್ಕೆ ಆಮ್ ಆದ್ಮಿ ಪಕ್ಷ
Team Udayavani, Jan 19, 2018, 6:45 AM IST
ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಎಲ್ಲಾ ಕ್ಷೇತ್ರಗಳಲ್ಲಿ ಕಣಕ್ಕಿಳಿಯಲಿದೆ ಎಂದು ಪಕ್ಷದ ಕರ್ನಾಟಕ ಉಸ್ತುವಾರಿ ಪಂಕಜ್ ಗುಪ್ತಾ ಹೇಳಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ಅಭ್ಯರ್ಥಿಗಳು ಕಣಕ್ಕಿಳಿಯಲು ಇದು ಸೂಕ್ತವಾದ ಸಮಯವಾಗಿದೆ ಎಂಬುದು ಸಮೀಕ್ಷೆಯಿಂದ ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ಕರ್ನಾಟಕ ವಿಧಾನ ಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಕಣಕ್ಕಿಳಿಯಲು ನಿರ್ಧರಿಸಿದೆ ಎಂದು ತಿಳಿಸಿದರು.
ಪಕ್ಷ ನಡೆಸಿರುವ ಸಮೀಕ್ಷೆಯಲ್ಲಿ ಕರ್ನಾಟದ ಜನರು ಬದಲಾವಣೆಯನ್ನು ಬಯಸಿದು,ª ಕಂಡುಬಂದಿದೆ. ಶೇಕಡ 70 ರಷ್ಟು ಜನರು ಬದಲಾವಣೆಯನ್ನು ಬಯಸಿದ್ದು ಈ ಹಿನ್ನಲೆಯಲ್ಲಿ ಕರ್ನಾಟಕದಲ್ಲಿ ಪಕ್ಷ ಕಣಕ್ಕಿಳಿಯಲು ತೀರ್ಮಾನಿಸಿದೆ. ಈ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನವನ್ನು ಕೈಗೊಂಡಿದ್ದು ಪಕ್ಷವನ್ನು ರಾಜ್ಯದಲ್ಲಿ ಮತ್ತಷ್ಟು ಬಲಿಷ್ಠಗೊಳಿಸಲು ಸೂಚನೆ ನೀಡಿದ್ದಾರೆ ಎಂದು ಹೇಳಿದರು.
ಕಾಂಗ್ರೆಸ್ ಮತ್ತು ಬಿಜೆಪಿ ಮುಖಂಡರುಗಳನ್ನು ತರಾಟೆಗೆ ತೆಗೆದುಕೊಂಡ ಅವರು ಈ ಎರಡೂ ಪಕ್ಷಗಳು ಸಾಧಿಸಲಾಗದ ಕೆಲಸವನ್ನು ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ ಸಾಧಿಸಿ ತೋರಿಸಿದೆ. ಎರಡೂ ಪಕ್ಷಗಳು ಭ್ರಷ್ಟಾಚಾರವನ್ನು ನಡೆಸುತ್ತಾ ಜನತೆಗೆ ಬರೀ ಪೊಳ್ಳು ಭರವಸೆಯನ್ನು ನೀಡುತ್ತಿವೆ ಎಂದು ದೂರಿದರು. ಭ್ರಷ್ಟಾಚಾರ ರಹಿತ ಆಡಳಿತ ನೀಡುವುದು ಆಮ್ ಆದ್ಮಿ ಪಕ್ಷದ ಉದ್ದೇಶವಾಗಿದ್ದು, ಹಿರಿಯ ವರಿಷ್ಠರು ಚುನಾವಣಾ ತಂತ್ರಗಳನ್ನು ರೂಪಿಸಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್ ಎಚ್ಚರಿಕೆ
ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.