ಇಂದಿನಿಂದ ಸಿರಿಧಾನ್ಯ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ
Team Udayavani, Jan 19, 2018, 11:23 AM IST
ಬೆಂಗಳೂರು: ಸಾವಯವ ಮತ್ತು ಸಿರಿಧಾನ್ಯಗಳ ಅಂತಾರಾಷ್ಟ್ರೀಯ ವಾಣಿಜ್ಯ ಮೇಳಕ್ಕೆ ನಗರದ ಅರಮನೆ ಸಜ್ಜುಗೊಂಡಿದೆ. ದೇಶ-ವಿದೇಶಗಳಿಂದ ಆಹಾರ ಕಂಪನಿಗಳು, ವಿಜ್ಞಾನಿಗಳು ಆಗಮಿಸಲಿದ್ದು, ಮೂರು ದಿನಗಳ ಮೇಳದಲ್ಲಿ ಸುಮಾರು ಹತ್ತು ಸಾವಿರ ರೈತರು, 200ಕ್ಕೂ ಅಧಿಕ ಖರೀದಿದಾರರು, ಸಿರಿಧಾನ್ಯಗಳನ್ನು ಮೌಲ್ಯವರ್ಧನೆ ಮಾಡುವ ನುರಿತ ತಜ್ಞರು ಭಾಗವಹಿಸಲಿದ್ದಾರೆ.
ಅಂದಾಜು 500 ವ್ಯಾಪಾರಿಗಳು-ರೈತರ ನಡುವೆ ಸಭೆಗಳು ನಡೆಯಲಿದೆ ಎಂದು ಕೃಷಿ ಇಲಾಖೆ ಆಯುಕ್ತ ಜಿ. ಸತೀಶ್ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಮೇಳಕ್ಕೆ ಶುಕ್ರವಾರ ಬೆಳಗ್ಗೆ 11ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದು, ಕೇಂದ್ರ ಕೃಷಿ ಸಚಿವ ರಾಧಾಮೋಹನ್ ಸಿಂಗ್ ವಸ್ತುಪ್ರದರ್ಶನ ಉದ್ಘಾಟಿಸುವರು.
ಕೇಂದ್ರ ಸಚಿವರಾದ ಅನಂತಕುಮಾರ್, ಡಿ.ವಿ. ಸದಾನಂದಗೌಡ, ನಿರ್ಮಲಾ ಸೀತಾರಾಮನ್, ಹರ್‌ಸಿಮ್ರತ್ ಕೌರ್ ಬಾದಲ್, ಸಚಿವರಾದ ಕೃಷ್ಣ ಭೈರೇಗೌಡ, ಕೆ.ಜೆ. ಜಾರ್ಜ್, ಎಸ್.ಎಸ್. ಮಲ್ಲಿಕಾರ್ಜುನ ಮತ್ತಿತರರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. 21ರ ಸಮಾರೋಪದಲ್ಲಿ ಸಚಿವ ಆರ್.ವಿ. ದೇಶಪಾಂಡೆ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.
ವಾಣಿಜ್ಯ ಮೇಳದಲ್ಲಿ ಸುಮಾರು 350 ಮಳಿಗೆಗಳು ತಲೆಯೆತ್ತಲಿವೆ. ಈ ಪೈಕಿ ಈಗಾಗಲೇ 225 ಕಂಪನಿಗಳು ಖಚಿತಪಡಿಸಿದ್ದು, ಉಳಿದವು ಖರೀದಿದಾರರಾಗಿ ಭಾಗವಹಿಸುವ ಭರವಸೆ ನೀಡಿವೆ ಎಂದರು.
ವ್ಯವಸ್ಥೆ: ಸಾರ್ವಜನಿಕರಿಗೆ ಮೇಳದಲ್ಲಿ ಉಚಿತ ಪ್ರವೇಶ ಕಲ್ಪಿಸಲಾಗಿದೆ. ವಿಧಾನಸೌಧ ಮೆಟ್ರೋ ನಿಲ್ದಾಣದಿಂದ ಅರಮನೆಗೆ ಬರಲು ಪ್ರತಿ 15ರಿಂದ 20 ನಿಮಿಷಕ್ಕೊಂದು ಬಿಎಂಟಿಸಿ ಬಸ್ ವ್ಯವಸ್ಥೆ ಮಾಡಿದ್ದು, ಪ್ರಯಾಣ ಉಚಿತವಾಗಿದೆ ಎಂದರು.
ಖಾನಾವಳಿ ಮೇಳದ ಕೇಂದ್ರ ಬಿಂದು: ಈ ಬಾರಿಯ ಮೇಳದಲ್ಲಿ ಬೃಹತ್ ಖಾನಾವಳಿಯನ್ನು ಪರಿಚಯಿಸಲಾಗಿದ್ದು, 20 ರೆಸ್ಟೋರೆಂಟ್‌ಗಳು ಔಟ್‌ಲೆಟ್‌ಗಳನ್ನು ಸ್ಥಾಪಿಸಿವೆ. ಕೃಷಿ ಇಲಾಖೆ, ರಾಮಯ್ಯ ಅನ್ವಯಿಕ ವಿಜ್ಞಾನಗಳ ವಿಶ್ವವಿದ್ಯಾಲಯದ ನ್ಯೂಟ್ರಾಸುಟಿಕಲ್ಸ್ ಸಂಶೋಧನೆ ಕೇಂದ್ರದ ಸಹಯೋಗದಲ್ಲಿ ಈ “ಖಾನಾವಳಿ’ ತೆರೆಯಲಾಗಿದ್ದು,
ಸಾಂಪ್ರದಾಯಿಕ ಸಿರಿಧಾನ್ಯ ಆಹಾರದ ಟ್ರೆಂಡ್, ಅಡಿಗೆ ಪ್ರದರ್ಶನ, ಸ್ಪರ್ಧೆಗಳು ಇಲ್ಲಿ ನಡೆಯಲಿವೆ. ರೈತರಿಗಾಗಿ ಪ್ರತ್ಯೇಕ ಕೃಷಿ ಕಾರ್ಯಾಗಾರ ಕೂಡ ಏರ್ಪಡಿಸಲಾಗಿದೆ. ವಿದ್ಯಾರ್ಥಿಗಳಿಗಾಗಿ ಪೋಸ್ಟರ್ ಮತ್ತು ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆಗೂ ಇದು ವೇದಿಕೆ ಆಗಲಿದೆ ಎಂದು ಆಯುಕ್ತರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
IPL Mega Auction: ಸ್ಪಿನ್ನರ್ ಚಾಹಲ್ ಗೆ ಭಾರೀ ಬೇಡಿಕೆ; ಮಿಲ್ಲರ್ ಲಕ್ನೋಗೆ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
IPL Mega Auction: ಭರ್ಜರಿ ಬಿಡ್ ಗಳಿಸಿ ಅಯ್ಯರ್ ದಾಖಲೆ ಮುರಿದ ರಿಷಭ್ ಪಂತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.