ಜಾತ್ರೆಗಳು ಭಾವೈಕ್ಯತೆಯ ಪ್ರತಿರೂಪ
Team Udayavani, Jan 19, 2018, 11:53 AM IST
ಮೈಸೂರು: ಜಾತ್ರೆಗಳು ಭಾವೈಕ್ಯತೆಯ ಪ್ರತಿರೂಪಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣಿಸಿದರು. ಸುತ್ತೂರು ಶ್ರೀಕ್ಷೇತ್ರದಲ್ಲಿ ಆರು ದಿನಗಳ ಕಾಲ ನಡೆದ ಆದಿ ಜಗದ್ಗುರು ಶ್ರೀಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ಅವರು ಸಮಾರೋಪ ಭಾಷಣ ಮಾಡಿದರು.
ಜಾತ್ರೆ, ಹಬ್ಬ,ಹರಿದಿನಗಳು ಅನಾದಿಕಾಲದಿಂದ ನಮ್ಮ ಸಂಪ್ರದಾಯಗಳಾಗಿವೆ. ಹುಟ್ಟು ಆಕಸ್ಮಿಕ-ಸಾವು ನಿಶ್ಚಿತ. ಈ ಹುಟ್ಟು-ಸಾವಿನ ಮಧ್ಯೆ ಬದುಕು ಸಾರ್ಥಕವಾಗಬೇಕು. ಅದಕ್ಕಾಗಿ ನಮ್ಮ ಪೂರ್ವಿಕರು ಅನಾದಿ ಕಾಲದಿಂದಲೂ ಜಾತ್ರೆ, ಹಬ್ಬ-ಹರಿದಿನಗಳನ್ನು ಮಾಡುತ್ತಾ ಬಂದಿದ್ದಾರೆ, ನಾವೂ ಕೂಡ ಅದನ್ನು ಮುಂದುವರಿಸುತ್ತಾ ಬಂದಿದ್ದೇವೆ. ಮನುಷ್ಯನ ಬದುಕಿಗೆ ಸಂಬಂಧಿಸಿದ ಜಾತ್ರೆಗಳು ಭಾವೈಕ್ಯತೆಯ ಪ್ರತಿರೂಪಗಳು ಎಂದರು.
ಸಹಬಾಳ್ವೆಯಿಂದ ಬದುಕಿಗೆ ಅರ್ಥ: ಸಮಾಜದಲ್ಲಿ ಭಾವೈಕ್ಯತೆ ಇರಬೇಕು, ಸಂವಿಧಾನದಲ್ಲೂ ಇದಕ್ಕೆ ಒತ್ತು ನೀಡಿದೆ. ಭಾರತ ಅನೇಕ ಧರ್ಮಗಳಿರುವ ವಿಶಿಷ್ಟ ದೇಶ, ಇಲ್ಲಿ ಎಲ್ಲರೂ ಸಹಬಾಳ್ವೆ ನಡೆಸಿದಾಗ ಬದುಕಿಗೆ ಅರ್ಥ ಬರುತ್ತದೆ. ಪ್ರತಿ ಮಗು ಹುಟ್ಟುವಾಗ ವಿಶ್ವ ಮಾನವನಾಗಿ ಹುಟ್ಟುತ್ತೆ, ಸಾಮಾಜಿಕ ವ್ಯವಸ್ಥೆಯ ಪರಿಣಾಮವಾಗಿ ಬೆಳೆಯುತ್ತಾ ಬೆಳೆಯುತ್ತಾ ಅಲ್ಪ ಮಾನವರಾಗಿಬಿಡುತ್ತಾರೆ ಎಂದು ಕುವೆಂಪು ಹೇಳಿದ್ದಾರೆ.
ಕುವೆಂಪು ಅವರ ಮಾತಿನಂತೆ ವಿಶ್ವ ಮಾನವರಾದರೆ ಸಮಾಜಕ್ಕೆ ಆಸ್ತಿಯಾಗುತ್ತೇವೆ. ಅಲ್ಪ ಮಾನವರಾದರೆ ಸಮಾಜಕ್ಕೆ ಭಾರವಾಗುತ್ತೇವೆ. ಎಲ್ಲ ಮಠಗಳೂ ಇದನ್ನು ತಿಳಿಸುವ ಕೆಲಸವನ್ನು ನೂರಾರು ವರ್ಷಗಳಿಂದ ಮಾಡುತ್ತಾ ಬಂದಿದ್ದರು ನಿರೀಕ್ಷಿತ ಫಲ ಸಿಕ್ಕಿಲ್ಲ. ಧಾರ್ಮಿಕ, ಸಾಂಸ್ಕೃತಿಕವಾಗಿ ಜನರನ್ನು ತಲುಪಲು ಇಂತಹ ಜಾತ್ರಾ ಮಹೋತ್ಸವಗಳ ಆಚರಣೆ ಅಗತ್ಯ. ಜಾತ್ರಾ ಮಹೋತ್ಸವದ ಉದ್ದೇಶ ಜನರಿಗೆ ತಲುಪಿದರೆ ಜಾತ್ರೆ ಸಾರ್ಥಕತೆ ಕಾಣುತ್ತೆ ಎಂದು ಹೇಳಿದರು.
ಗ್ರಾಮೀಣ ಸಾಂಸ್ಕೃತಿಕ ಬದುಕು: ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಮಾತನಾಡಿ, ಈ ಭಾಗದ ಪ್ರಮುಖ ಧಾರ್ಮಿಕ ಕೇಂದ್ರವಾಗಿರುವ ಸುತ್ತೂರು ಶ್ರೀಮಠಕ್ಕೆ ಒಂದು ಸಾವಿರ ವರ್ಷಗಳ ಇತಿಹಾಸವಿದೆ. ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಬದುಕಿನ ವಿವಿಧ ಮಜಲುಗಳ ಸ್ಥೂಲ ಪರಿಚಯ ಮಾಡುವ ಕೆಲಸ ನಡೆದಿದೆ. ಜಾತ್ರೆಗೆ ಬಂದವರು ಬದುಕಿನ ಒತ್ತಡ ಮರೆತು ಸಂತಸ ಪಡೆದು ಹೋಗುತ್ತಾರೆ. ಜನರಿಗೆ ವ್ಯವಸಾಯ ಪದ್ಧತಿ, ಗ್ರಾಮೀಣ ಸಾಂಸ್ಕೃತಿಕ ಬದುಕನ್ನು ನೆನಪಿಸುವ ಕೆಲಸವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಸುತ್ತೂರು ಜಾತ್ರೆಗೆ ಸೀಮಿತವಾಗಿಲ್ಲ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಎಚ್.ಕೆ.ಪಾಟೀಲ್ ಮಾತನಾಡಿ, ಸುತ್ತೂರು ಜಾತ್ರಾ ಮಹೋತ್ಸವ ಕೇವಲ ಮನರಂಜನೆಗೆ ಸೀಮಿತವಾಗಿಲ್ಲ. ಬದುಕಿನಲ್ಲಿ ಅಳವಡಿಸಿಕೊಳ್ಳು ಸಾಕಷ್ಟು ವಿಷಯಗಳು ಇಲ್ಲಿವೆ ಎಂದರು.
ಜಾತ್ರೆ ಅರ್ಥಪೂರ್ಣ: ಬೆಳಗಾವಿಯ ನಾಗನೂರು ರುದ್ರಾಕ್ಷಿ ಮಠದ ಡಾ.ಸಿದ್ಧರಾಮ ಸ್ವಾಮೀಜಿ ಮಾತನಾಡಿ, ಕೆಲ ಜಾತ್ರೆಗಳಲ್ಲಿ ಏನೂ ಅರ್ಥ ಇರಲ್ಲ. ಕೇವಲ ಮನರಂಜನೆ, ವ್ಯಸನಗಳಿಗೆ ಸೀಮಿತವಾಗಿರುತ್ತವೆ. ಆದರೆ, ಸುತ್ತೂರು ಜಾತ್ರೆ ಅರ್ಥಪೂರ್ಣವಾಗಿ ನಡೆದಿದ್ದು, ಜಾತ್ರೆ ನೋಡಲು ಎರಡು ಕಣ್ಣು ಸಾಲದು ಎಂದು ಬಣ್ಣಿಸಿದರು.
ಬದುಕು ರೂಪಿಸುವ ಜೀವನಯಾತ್ರೆ: ಮುರುಘರಾಜೇಂದ್ರ ಮಠದ ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳು ಮಾತನಾಡಿ, ಇದು ಬರೀ ಜಾತ್ರೆಯಲ್ಲ. ಬದುಕು ರೂಪಿಸುವ ಜೀವನಯಾತ್ರೆ. ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಸುತ್ತೂರು ಮಠ ಮಾದರಿ ಕಾರ್ಯಕ್ರಮಗಳನ್ನು ಮಾಡಿದೆ ಎಂದರು. ಸಚಿವರಾದ ಶರಣಪ್ರಕಾಶ ಪಾಟೀಲ್, ತನ್ವೀರ್ ಸೇಠ್ ಮಾತನಾಡಿದರು.
ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸುವುದರಿಂದ ನನಗೆ ವೈಯಕ್ತಿಕ ಲಾಭ ಆಗುತ್ತೆ. ಜನರ ಆಶೀರ್ವಾದದಿಂದ ಈ ಸ್ಥಾನಕ್ಕೆ ಬಂದಿದ್ದೇನೆ. ನಿಮ್ಮ ಆಶೀರ್ವಾದ ಇಲ್ಲವಾದರೆ ಅಧಿಕಾರದ ಕುರ್ಚಿಯಲ್ಲಿ ಕೂರಲಾಗಲ್ಲ. ನಾಲ್ಕು ವರ್ಷ ಎಂಟು ತಿಂಗಳ ಅವಧಿಯಲ್ಲಿ ಜನರ ನಿರೀಕ್ಷೆಗೆ ಧಕ್ಕೆಯಾಗದಂತೆ ಪ್ರಾಮಾಣಿಕವಾಗಿ ಕೆಲಸ ಮಾಡಿದ ತೃಪ್ತಿ ಇದೆ.
-ಸಿದ್ದರಾಮಯ್ಯ, ಮುಖ್ಯಮಂತ್ರಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ
Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ
ಚಂದ್ರಶೇಖರ ಶ್ರೀ ವಿರುದ್ಧ ಕೇಸ್; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.