ಕಡಬ: ಪ್ಲಾಸ್ಟಿಕ್ ತ್ಯಾಜ್ಯ ವಿಲೇವಾರಿ ಜಾಗೃತಿ ಅಭಿಯಾನಕ್ಕೆ ಚಾಲನೆ
Team Udayavani, Jan 19, 2018, 4:52 PM IST
ಕಡಬ : ದ.ಕ. ಜಿಲ್ಲಾ ಪಂಚಾಯತ್ ಮಂಗಳೂರು, ಪುತ್ತೂರು ತಾಲೂಕು ಪಂಚಾಯತ್, ಕಡಬ ಗ್ರಾಮ ಪಂಚಾಯತ್, ಜೇಸಿಐ ಕಡಬ ಕದಂಬ ಹಾಗೂ ಜೇಸಿಐ ಕಡಬ ಕದಂಬ ಚಾರಿಟೆಬಲ್ ಟ್ರಸ್ಟ್‌ನ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿರುವ ಪ್ಲಾಸ್ಟಿಕ್ ತ್ಯಾಜ್ಯ ವಿಲೇವಾರಿ ಜಾಗೃತಿ ಅಭಿಯಾನವನ್ನು ಕಡಬ ಗ್ರಾ.ಪಂ. ಸಭಾಂಗಣದಲ್ಲಿ ಉದ್ಘಾಟಿಸಲಾಯಿತು.
ಉದ್ಘಾಟನೆ ನೆರವೇರಿಸಿ ಮಾತನಾಡಿದ ಕಡಬ ಜಿ.ಪಂ. ಕ್ಷೇತ್ರದ ಸದಸ್ಯ ಪಿ.ಪಿ. ವರ್ಗೀಸ್ ಅವರು, ಪರಿಸರಕ್ಕೆ ಹಾನಿಕಾರಕವಾದ ಪ್ಲಾಸ್ಟಿಕ್ ಬಳಕೆಯನ್ನು ನಿಯಂತ್ರಿಸುವುದು ಮತ್ತು ಬಳಸಿದ ಪ್ಲಾಸ್ಟಿಕ್‌ಗಳನ್ನು ವೈಜ್ಞಾನಿಕ ರೀತಿಯಲ್ಲಿ ಸಮರ್ಪಕವಾಗಿ ವಿಲೇವಾರಿ ಮಾಡುವ ಸಲುವಾಗಿ ಜನರಲ್ಲಿ ಜಾಗೃತಿ ಮೂಡಿಸುವ ಹಲವಾರು ಕಾರ್ಯಕ್ರಮಗಳನ್ನು ಈಗಾಗಲೇ ಸರಕಾರದ ಮೂಲಕ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಪಂಚಾಯತ್‌ನ ನೆರವಿನೊಂದಿಗೆ ಕಡಬ ಗ್ರಾ.ಪಂ. ಈಗಾಗಲೇ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸುವ ನಿಟ್ಟಿನಲ್ಲಿ ಪೇಟೆಯ ವರ್ತಕರು ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿದೆ. ಈ ಅಭಿಯಾನದಲ್ಲಿ ಸ್ಥಳೀಯ ಜೇಸಿ ಸದಸ್ಯರು ಕೂಡ ಕೈಜೋಡಿಸಿರುವುದು ಉತ್ತಮ ಬೆಳವಣಿಗೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕ್ರಾಂತಿಕಾರಿ ಕ್ರಮ
ತಾ.ಪಂ. ಸದಸ್ಯ ಫಝಲ್ ಕೋಡಿಂಬಾಳ ಮಾತನಾಡಿ, ಈಗಾಗಲೇ ಘನತ್ಯಾಜ್ಯ ಮತ್ತು ದ್ರವತ್ಯಾಜ್ಯ ವಿಲೇವಾರಿ ಘಟಕಗಳನ್ನು ಸ್ಥಾಪಿಸಿ ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿರುವ ಕಡಬ ಗ್ರಾ.ಪಂ. ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸುವ ನಿಟ್ಟಿನಲ್ಲಿ ಕ್ರಾಂತಿಕಾರಿ ಕ್ರಮಗಳನ್ನು ಕೈಗೊಳ್ಳುತ್ತಿದೆ. ಪಂಚಾಯತ್‌ನ ಮಾಜಿ ಅಧ್ಯಕ್ಷೆ, ಹಾಲಿ ಸದಸ್ಯೆ ನೀಲಾವತಿ ಶಿವರಾಮ್ ಅವರ ನೇತೃತ್ವದಲ್ಲಿ ಕೊರುಂದೂರು ಅಂಗನವಾಡಿ ಕೇಂದ್ರದ ವ್ಯಾಪ್ತಿಯಲ್ಲಿ ಮಹಿಳೆಯರು ಪ್ಲಾಸ್ಟಿಕ್ ತ್ಯಾಜ್ಯ ವಿಲೇವಾರಿಯಲ್ಲಿ ತೊಡಗಿಸಿಕೊಂಡಿರುವ ಕಾರ್ಯಕ್ರಮವು ಜಿಲ್ಲಾ ಪಂಚಾಯತ್ ವತಿಯಿಂದ ಸಾಕ್ಷ್ಯಚಿತ್ರವಾಗಿ ಚಿತ್ರೀಕರಣಗೊಂಡು ಎಲ್ಲೆಡೆ ಪ್ರದರ್ಶನಗೊಳ್ಳುತ್ತಿರುವುದು ಹೆಮ್ಮೆಯ ಸಂಗತಿ ಎಂದರು.
ಗ್ರಾ.ಪಂ. ಅಧ್ಯಕ್ಷ ಬಾಬು ಮುಗೇರ, ಉಪಾಧ್ಯಕ್ಷೆ ಜ್ಯೋತಿ ಡಿ. ಕೋಲ್ಪೆ, ಸದಸ್ಯರಾದ ಸೈಮನ್ ಸಿ.ಜೆ., ಕೆ.ಎಂ. ಹನೀಫ್, ನೀಲಾವತಿ ಶಿವರಾಮ್, ಸರೋಜಿನಿ ಆಚಾರ್ಯ, ಶಾಲಿನಿ ಸತೀಶ್ ನಾೖಕ್, ಶರೀಫ್ ಎ.ಎಸ್., ಯಶೋದಾ, ಹರ್ಷ ಕೋಡಿ, ಜೇಸಿ ವಲಯಾಧಿಕಾರಿ ಶಿವಪ್ರಸಾದ್ ರೈ ಮೈಲೇರಿ, ಜೇಸಿಐ ಕಡಬ ಕದಂಬ ಚಾರಿಟೆಬಲ್ ಟ್ರಸ್ಟ್ ನ ಕಾರ್ಯದರ್ಶಿ ಅಶೋಕ್ ಕುಮಾರ್ ಪಿ., ನಿರ್ದೇಶಕರಾದ ಮಂಜುನಾಥ ಮರ್ದಾಳ, ದಿನೇಶ್ ಆಚಾರ್ಯ, ಫಯಾಝ್ ಕೆನರಾ, ಜೇಸಿ ನಿಕಟ ಪೂರ್ವಾಧ್ಯಕ್ಷ ತಸ್ಲೀಮ್ ಮರ್ದಾಳ, ಕಾರ್ಯದರ್ಶಿ ಮೋಹನ ಕೋಡಿಂಬಾಳ, ಪೂರ್ವಾಧ್ಯಕ್ಷರಾದ ಜಯರಾಮ ಗೌಡ ಆರ್ತಿಲ, ಹರೀಶ್ ಬೆದ್ರಾಜೆ, ಪದಾಧಿಕಾರಿ ಜಯರಾಮ
ಮೂರಾಜೆ ಉಪಸ್ಥಿತರಿದ್ದರು.
ಜೇಸಿ ಅಧ್ಯಕ್ಷ ವೆಂಕಟೇಶ್ ಪಾಡ್ಲ ಅವರು ಅಧ್ಯಕ್ಷತೆ ವಹಿಸಿ ಸ್ವಾಗತಿಸಿದರು. ಸದಸ್ಯ ರಮೇಶ್ ಕೊಠಾರಿ ಜೇಸಿವಾಣಿ ವಾಚಿಸಿದರು. ಪಿಡಿಒ ಚೆನ್ನಪ್ಪ ಗೌಡ ಕಜೆಮೂಲೆ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
MGM: ಮಹಾತ್ಮ ಗಾಂಧಿ ಮೆಮೋರಿಯಲ್ ಕಾಲೇಜು; ಅಮೃತ ಮಹೋತ್ಸವ
SMAT T20: 28 ಎಸೆತದಲ್ಲಿ ಶತಕ ಬಾರಿಸಿ T20ಯಲ್ಲಿ ದಾಖಲೆ ಬರೆದ ಇಂಡಿಯನ್ ಬ್ಯಾಟರ್
Jewelry Clean Tips: ಮನೆಯಲ್ಲೇ ಆಭರಣಗಳನ್ನು ಈ ರೀತಿಯಾಗಿ ಸ್ವಚ್ಛಗೊಳಿಸಿ
Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ
ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.