ಫೆ.4ರ ಸಮಾವೇಶ ಸಾಮರ್ಥ್ಯ ಪ್ರದರ್ಶನ
Team Udayavani, Jan 20, 2018, 6:15 AM IST
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಫೆ.4ರಂದು ಬೆಂಗಳೂರಿನಲ್ಲಿ ನಡೆಯಲಿರುವ ನವ ಕರ್ನಾಟಕ ನಿರ್ಮಾಣ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾವೇಶವನ್ನು ಬಿಜೆಪಿಯ ಸಾಮರ್ಥ್ಯ ತೋರಿಸುವ ಸಮಾವೇಶವಾಗಿ ನಡೆಸಲು ತೀರ್ಮಾನಿಸಲಾಗಿದೆ.
ಆ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಕನಿಷ್ಠ 10 ಸಾವಿರ ಜನ ಹಾಗೂ ಬೆಂಗಳೂರು ಹಾಗೂ ಸುತ್ತಲಿನ ಪ್ರದೇಶಗಳಿಂದ ಇನ್ನೂ ಹೆಚ್ಚಿನ ಜನರನ್ನು ಸೇರಿಸುವ ಬಗ್ಗೆ ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಲಾಗಿದ್ದು, ಇದರ ಜವಾಬ್ದಾರಿಯನ್ನು ಪಕ್ಷದ ಜಿಲ್ಲಾಧ್ಯಕ್ಷರು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ವಹಿಸಲು ನಿರ್ಧರಿಸಲಾಗಿದೆ.
ಇವರಿಗೆ ಆಯಾ ಜಿಲ್ಲೆಗಳಲ್ಲಿ ಸಂಸದರು, ಶಾಸಕರು ಮತ್ತು ಮುಂಬರುವ ವಿಧಾನಸಭಾ ಚುನಾವಣಾ ಟಿಕೆಟ್ ಆಕಾಂಕ್ಷಿಗಳನ್ನು ಸಂಪರ್ಕಿಸಿ ಸೂಕ್ತ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಲಾಗುತ್ತದೆ. ಫೆ.4ರಂದು ಸಮಾರೋಪ ಸಮಾರಂಭದಲ್ಲಿ ಪ್ರಧಾನಿ ಮೋದಿ ಭಾಗವಹಿಸುತ್ತಿರುವುದರಿಂದ ಈ ಸಮಾವೇಶವನ್ನು ರಾಜ್ಯಕ್ಕೆ ಸಕಾರಾತ್ಮಕ ಸಂದೇಶ ನೀಡುವ ನಿಟ್ಟಿನಲ್ಲಿ ಆಯೋಜಿಸಲಾಗುತ್ತಿದೆ. ಜತೆಗೆ, ಬಿಜೆಪಿ ಸಾಮರ್ಥ್ಯ ತೋರಿಸುವ ಸಮಾವೇಶ ಇದಾಗಬೇಕು ಎಂದು ಕೋರ್ ಕಮಿಟಿ ಸಭೆಯಲ್ಲಿ ನಿರ್ಧರಿಸಿರುವುದಾಗಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಶಾಸಕ ಅರವಿಂದ ಲಿಂಬಾವಳಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ
Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು
Bantwal: ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಪ್ರಯಾಣ ದರ ಏರಿಕೆ
Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು
Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.