ಸಿರಿಧಾನ್ಯ ವರ್ಷ ಘೋಷಣೆಗೆ ತೀರ್ಮಾನ


Team Udayavani, Jan 20, 2018, 6:00 AM IST

19BNP-(29).jpg

ಬೆಂಗಳೂರು: ಕೇಂದ್ರ ಸರ್ಕಾರವು 2018ನ್ನು “ರಾಷ್ಟ್ರೀಯ ಸಿರಿಧಾನ್ಯಗಳ ವರ್ಷ’ ಎಂದು ಘೋಷಿಸಲು ನಿರ್ಧರಿಸಿದೆ. ಈ ಮೂಲಕ ಸಿರಿಧಾನ್ಯಗಳಿಗೆ ರಾಷ್ಟ್ರದ ಮನ್ನಣೆ ದೊರಕಿದೆ. ಈ ಸಂಬಂಧ ರಾಜ್ಯ ಸರ್ಕಾರ ಮನವಿ ಮಾಡಿತ್ತು. ಇದಕ್ಕೆ ಸ್ಪಂದಿಸಿದ ಕೇಂದ್ರ ಸರ್ಕಾರವು 2018ನ್ನು ಸಿರಿಧಾನ್ಯಗಳ ವರ್ಷವನ್ನಾಗಿ ಘೋಷಿಸಲು ತೀರ್ಮಾನಿಸಿದೆ ಎಂದು ಸ್ವತಃ ಕೇಂದ್ರ ಸಾಂಖೀÂಕ ಮತ್ತು ಯೋಜನೆಗಳ ಅನುಷ್ಠಾನ ಸಚಿವ ಡಿ.ವಿ. ಸದಾನಂದಗೌಡ ತಿಳಿಸಿದ್ದಾರೆ.

ನಗರದ ಅರಮನೆಯಲ್ಲಿ ಶುಕ್ರವಾರ ಆರಂಭಗೊಂಡ ಮೂರು ದಿನಗಳ ಸಾವಯವ ಮತ್ತು ಸಿರಿಧಾನ್ಯಗಳ ಅಂತಾರಾಷ್ಟ್ರೀಯ ವಾಣಿಜ್ಯ ಮೇಳದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ರಾಜ್ಯದ ಪ್ರಯತ್ನಕ್ಕೆ ಕೇಂದ್ರ ಕೂಡ ಸ್ಪಂದಿಸಿದೆ. 2018ನ್ನು ರಾಷ್ಟ್ರೀಯ ಸಿರಿಧಾನ್ಯಗಳ ವರ್ಷವನ್ನಾಗಿ ಘೋಷಿಸಲು ಈಗಾಗಲೇ ನಿರ್ಧರಿಸಿದ್ದು, ಇದಕ್ಕೆ ಕೇಂದ್ರ ಕೃಷಿ ಸಚಿವರು ಅನುಮತಿ ನೀಡಿದ್ದಾರೆ’ ಎಂದು ಹೇಳಿದರು.

ಇದರಿಂದ ದೇಶಾದ್ಯಂತ ವರ್ಷವಿಡಿ ಸಿರಿಧಾನ್ಯಗಳಿಗೆ ಸಂಬಂಧಿಸಿದ ಚಟುವಟಿಕೆಗಳು ನಡೆಯಲಿವೆ. ದೇಶದಲ್ಲಿ ಕರ್ನಾಟಕವು ಸಿರಿಧಾನ್ಯಗಳ ಉತ್ಪಾದನೆಯಲ್ಲಿ ಮೊದಲ ಸ್ಥಾನ ಹಾಗೂ ಸಾವಯವ ಕೃಷಿ ಉತ್ಪಾದನೆಯಲ್ಲಿ 3ನೇ ಸ್ಥಾನದಲ್ಲಿ ಇದೆ. ಹಾಗಾಗಿ,ಇದರಿಂದ ಸಹಜವಾಗಿಯೇ ರಾಜ್ಯದ ರೈತರಿಗೆ ಉತ್ತೇಜನ ದೊರೆಯಲಿದೆ ಎಂದರು.

ಈಗಾಗಲೇ ರಾಜ್ಯದಲ್ಲಿ ಸಾವಯವ ಮತ್ತು ಸಿರಿಧಾನ್ಯಗಳ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ ನಡೆಯುತ್ತಿದೆ. ಈ ಹಿಂದೆ ರಾಷ್ಟೀಯ ವಾಣಿಜ್ಯ ಮೇಳ ನಡೆಸಲಾಗಿತ್ತು. ಇದರಿಂದ ಉತ್ಪಾದನೆ ಜತೆಗೆ ವಹಿವಾಟು ಕೂಡ ಮೂರ್‍ನಾಲ್ಕು ಪಟ್ಟು ಹೆಚ್ಚಳವಾಗಿದೆ.

ಈಗ ಕೇಂದ್ರದಿಂದ ಅಧಿಕೃತವಾಗಿಯೇ ಸಿರಿಧಾನ್ಯಗಳ ವರ್ಷ ಎಂದು ಘೋಷಿಸಲು ಮುಂದಾಗಿರುವುದರಿಂದ ಸಿರಿ ಧಾನ್ಯಗಳ ಉತ್ಪಾದಕರಿಗೆ ಹೆಚ್ಚು ಬೇಡಿಕೆ ಬರಲಿದೆ.

ವಿಪುಲ ಅವಕಾಶ- ಸಿಎಂ: ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಿರಿಧಾನ್ಯಗಳ ಉತ್ಪಾದನೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ದೇಶದಲ್ಲಿ ಸಿರಿಧಾನ್ಯ ಮತ್ತು ಸಾವಯವಕ್ಕೆ ಬೆಂಗಳೂರು ಅತಿ ದೊಡ್ಡ ಮಾರುಕಟ್ಟೆಯಾಗಿ ಪರಿವರ್ತನೆಯಾಗಿದೆ. ಜನರಲ್ಲಿ ಕೂಡ ಆರೋಗ್ಯದ ಬಗ್ಗೆ ಜಾಗೃತಿ ಮೂಡಿದೆ. ರಾಜಸ್ಥಾನ ಹೊರತು  ಪಡಿಸಿದರೆ, ದೇಶದಲ್ಲಿ ಕರ್ನಾಟಕ ಅತಿ ಹೆಚ್ಚು ಒಣಭೂಮಿ ಹೊಂದಿರುವ ರಾಜ್ಯ. ಈ ನಿಟ್ಟಿನಲ್ಲಿ ರೈತರಿಗೆ ವಿಪುಲ ಅವಕಾಶಗಳಿದ್ದು, ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಸರ್ಕಾರ ಸಾವಯವ ಮತ್ತು ಸಿರಿಧಾನ್ಯಗಳಿಗೆ ಹೆಚ್ಚು ಉತ್ತೇಜನ ನೀಡುತ್ತಿದೆ. ಇದರಿಂದ 2004ರಲ್ಲಿ ಕೇವಲ 2,500 ಹೆಕ್ಟೇರ್‌ಗೆ ಸೀಮಿತವಾಗಿದ್ದ ಸಾವಯವ ಮತ್ತು ಸಿರಿಧಾನ್ಯ ಬೆಳೆಯುವ ಪ್ರದೇಶ ಈಗ ಒಂದು ಲಕ್ಷ ಹೆಕ್ಟೇರ್‌ಗೆ ವಿಸ್ತರಿಸಿದೆ. ಸುಸ್ಥಿರ ಬೇಸಾಯಕ್ಕೆ ಈ ಪದಟಛಿತಿ ಅತ್ಯಗತ್ಯ ಎಂದರು.

ಸಿರಿಧಾನ್ಯ ವರ್ಷಕ್ಕೆ ಪ್ರಸ್ತಾವನೆ: ಕೃಷಿ ಸಚಿವ ಕೃಷ್ಣ ಬೈರೇಗೌಡ ಮಾತನಾಡಿ, ಯುಎನ್‌ಒ ಮೂಲಕ “ಅಂತಾರಾಷ್ಟ್ರೀಯ ಸಿರಿಧಾನ್ಯಗಳ ವರ್ಷ’ ಎಂದು ಘೋಷಿಸುವಂತೆ ಈಗಾಗಲೇ ಕೇಂದ್ರಕ್ಕೆ ಮನವಿ ಮಾಡಲಾಗಿದೆ.
ಕೇಂದ್ರವೂ ಇದಕ್ಕೆ ಸ್ಪಂದಿಸಿ ಯುಎನ್‌ಒಗೆ ಪ್ರಸ್ತಾವನೆ ಸಲ್ಲಿಸಿದೆ. ಅಲ್ಲದೆ, ಪಡಿತರ ವ್ಯವಸ್ಥೆಯಲ್ಲಿ  ಮತ್ತು
ಬಿಸಿಯೂಟದಲ್ಲಿ ಸಿರಿಧಾನ್ಯ ವಿತರಿಸುವಂತೆಯೂ ಮನವಿ ಮಾಡಲಾಗಿದೆ ಎಂದು ತಿಳಿಸಿದರು.

ಸಚಿವ ರೋಷನ್‌ ಬೇಗ್‌, ಶಾಸಕರಾದ ಬಿ.ಆರ್‌. ಪಾಟೀಲ್‌, ಅಜಯ್‌ ಸಿಂಗ್‌, ಲೆಹರ್‌ಸಿಂಗ್‌, ರಾಜ್ಯಮಟ್ಟದ ಸಾವಯವ ಕೃಷಿ ಉನ್ನತಮಟ್ಟದ ಸಮಿತಿ ಅಧ್ಯಕ್ಷ ಬಿ.ಸೋಮಶೇಖರ್‌, ಉಪಾಧ್ಯಕ್ಷ ಎಚ್‌.ಟಿ. ಕೃಷ್ಣೇಗೌಡ, ಕೃಷಿ ಇಲಾಖೆ ಕಾರ್ಯದರ್ಶಿ ಮಹೇಶ್ವರ ರಾವ್‌, ಆಯುಕ್ತ ಜಿ. ಸತೀಶ್‌,ನಿರ್ದೇಶಕ ಬಿ.ವೈ. ಶ್ರೀನಿವಾಸ್‌, ಇಕ್ರಿಸ್ಯಾಟ್‌
ಮಹಾನಿರ್ದೇಶಕ ಡಾ.ಡೇವಿಡ್‌ ಬರ್ಗಿನ್‌ಸನ್‌ ಮತ್ತಿತರರು ಉಪಸ್ಥಿತರಿದ್ದರು.

ನಮ್ಮನೇಲೂ ಸಿರಿಧಾನ್ಯಗಳ ಅಡುಗೆ
ನಮ್ಮ ಮನೆಯಲ್ಲೂ ಇತ್ತೀಚೆಗೆ ಸಿರಿಧಾನ್ಯಗಳ ಅಡುಗೆಯನ್ನೇ ಮಾಡುತ್ತಾರೆ. ಬೆಳಿಗ್ಗೆ ಸಿರಿಧಾನ್ಯ ಮೇಳಕ್ಕೆ ಬರುವ ಮುನ್ನ ನವಣೆ ರೊಟ್ಟಿ ತಿಂದು ಬಂದೆ… ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿರಿಧಾನ್ಯಗಳ ಮೇಲಿನ ಪ್ರೀತಿಯನ್ನು ವ್ಯಕ್ತಪಡಿಸಿದ ರೀತಿ ಇದು. ಇತ್ತೀಚಿನ ದಿನಗಳಲ್ಲಿ ಜನರಲ್ಲಿ ಆರೋಗ್ಯದ ಬಗ್ಗೆ ಹೆಚ್ಚು ಜಾಗೃತಿ ಮೂಡುತ್ತಿದೆ.ಆದ್ದರಿಂದ ಸಿರಿಧಾನ್ಯಗಳಿಗೆ ಜನ ಮೊರೆಹೋಗುತ್ತಿದ್ದಾರೆ. ನಮ್ಮ ಮನೆಯಲ್ಲೂ ಇದನ್ನೇ ತಂದು ಅಡಿಗೆ ಮಾಡುತ್ತಾರೆ. ಬೆಳಿಗ್ಗೆ ಕೂಡ ನವಣೆ ರೊಟ್ಟಿ ತಿಂದು ಬಂದೆ. ಮಧುಮೇಹ ಇರುವುದರಿಂದ ಇದು ಒಳ್ಳೆಯದು ಕೂಡ. ಮೇಳದಲ್ಲಿರುವ 
“ಖಾನಾವಳಿ’ಯಲ್ಲಿ ಕೂಡ ಸಿರಿಧಾನ್ಯ ಮತ್ತು ಸಾವಯವ ಉತ್ಪನ್ನಗಳಿಂದ ತಯಾರಿಸಿದ್ದ ಮಸಾಲೆ ದೋಸೆ ಮತ್ತು
ಈರುಳ್ಳಿ ದೋಸೆ ರುಚಿ ಸವಿದು ಬಂದೆ ಎಂದರು.

ಟಾಪ್ ನ್ಯೂಸ್

Darshan (2)

High Court; ನಟ ದರ್ಶನ್ ಗೆ ಕೊಂಚ ರಿಲೀಫ್:ವೈದ್ಯಕೀಯ ಜಾಮೀನು ಮಂಜೂರು

CT RAVI 2

By-election; ಬಿಜೆಪಿ 3 ವಿಷಯಗಳನ್ನು ಮುಂದಿಟ್ಟು ಚುನಾವಣೆ ಎದುರಿಸುತ್ತಿದೆ: ಸಿ.ಟಿ.ರವಿ

salman-khan

Salman Khan; ಬಾಲಿವುಡ್ ದಿಗ್ಗಜನಿಗೆ ಮತ್ತೆ ಬೆದರಿಕೆ: 2 ಕೋಟಿ ರೂ. ಬೇಡಿಕೆ

1-HDK

Channapatna; ವೈನಾಡ್‌ನಿಂದ ಪ್ರಿಯಾಂಕಾ ಉಮೇದುವಾರಿಕೆ ಪ್ರಶ್ನಿಸಿದ ಕುಮಾರಸ್ವಾಮಿ

Khnadre-Toxic

Toxic: ಚಿತ್ರೀಕರಣಕ್ಕೆ ಅನುಮತಿ ಕೊಟ್ಟ ಅಧಿಕಾರಿ ವಿರುದ್ಧವೂ ಕ್ರಮ: ಅರಣ್ಯ ಸಚಿವ ಖಂಡ್ರೆ

Sports

Sports; ‘ಟಾಪ್‌’ ಕ್ರೀಡಾಪಟುಗಳ ಸಂಖ್ಯೆಗೆ ಕೇಂದ್ರದಿಂದ ಕತ್ತರಿ?

Nikhil-CPY

Chennapattana By Election: ಬೊಂಬೆನಗರಿಗೆ ಇದು ಮೂರನೇ ಬಾರಿ ಉಪ ಚುನಾವಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Darshan (2)

High Court; ನಟ ದರ್ಶನ್ ಗೆ ಕೊಂಚ ರಿಲೀಫ್:ವೈದ್ಯಕೀಯ ಜಾಮೀನು ಮಂಜೂರು

CT RAVI 2

By-election; ಬಿಜೆಪಿ 3 ವಿಷಯಗಳನ್ನು ಮುಂದಿಟ್ಟು ಚುನಾವಣೆ ಎದುರಿಸುತ್ತಿದೆ: ಸಿ.ಟಿ.ರವಿ

1-HDK

Channapatna; ವೈನಾಡ್‌ನಿಂದ ಪ್ರಿಯಾಂಕಾ ಉಮೇದುವಾರಿಕೆ ಪ್ರಶ್ನಿಸಿದ ಕುಮಾರಸ್ವಾಮಿ

Khnadre-Toxic

Toxic: ಚಿತ್ರೀಕರಣಕ್ಕೆ ಅನುಮತಿ ಕೊಟ್ಟ ಅಧಿಕಾರಿ ವಿರುದ್ಧವೂ ಕ್ರಮ: ಅರಣ್ಯ ಸಚಿವ ಖಂಡ್ರೆ

Nikhil-CPY

Chennapattana By Election: ಬೊಂಬೆನಗರಿಗೆ ಇದು ಮೂರನೇ ಬಾರಿ ಉಪ ಚುನಾವಣೆ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Darshan (2)

High Court; ನಟ ದರ್ಶನ್ ಗೆ ಕೊಂಚ ರಿಲೀಫ್:ವೈದ್ಯಕೀಯ ಜಾಮೀನು ಮಂಜೂರು

Bengaluru: ನಿಧಿಗಾಗಿ ಮಗನ ಬಲಿಗೆ ಯತ್ನಿಸಿದ ತಂದೆ!

Bengaluru: ನಿಧಿಗಾಗಿ ಮಗನ ಬಲಿಗೆ ಯತ್ನಿಸಿದ ತಂದೆ!

CT RAVI 2

By-election; ಬಿಜೆಪಿ 3 ವಿಷಯಗಳನ್ನು ಮುಂದಿಟ್ಟು ಚುನಾವಣೆ ಎದುರಿಸುತ್ತಿದೆ: ಸಿ.ಟಿ.ರವಿ

salman-khan

Salman Khan; ಬಾಲಿವುಡ್ ದಿಗ್ಗಜನಿಗೆ ಮತ್ತೆ ಬೆದರಿಕೆ: 2 ಕೋಟಿ ರೂ. ಬೇಡಿಕೆ

1-HDK

Channapatna; ವೈನಾಡ್‌ನಿಂದ ಪ್ರಿಯಾಂಕಾ ಉಮೇದುವಾರಿಕೆ ಪ್ರಶ್ನಿಸಿದ ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.