ನ್ಯೂಜಿಲೆಂಡ್ ಪ್ರಧಾನಿ ಜೆಸಿಂಡಾ ಗರ್ಭಿಣಿ
Team Udayavani, Jan 20, 2018, 10:51 AM IST
ವೆಲ್ಲಿಂಗ್ಟನ್: ನ್ಯೂಜಿಲೆಂಡ್ ಪ್ರಧಾನಿ ಜೆಸಿಂಡಾ ಆರ್ಡೆರ್ನ್ (37) ಗರ್ಭಿಣಿಯಾಗಿದ್ದಾರೆ. ಇದೇನು ವಿಶೇಷ ಎಂದು ಪ್ರಶ್ನೆ ಮಾಡಬೇಡಿ. ಪ್ರಧಾನಿ ಹುದ್ದೆಯಲ್ಲಿದ್ದಾಗಲೇ ಮಗುವನ್ನು ಹೆರಲಿರುವ ನ್ಯೂಜಿಲೆಂಡ್ನ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಲಿದ್ದಾರೆ. ಅಂದ ಹಾಗೆ ಇಂಥ ಖ್ಯಾತಿಗೆ ಪಾತ್ರರಾಗುವ ಜಗತ್ತಿನ ಮೊದಲ ಪ್ರಧಾನಿ ಇವರಲ್ಲ.
ಪಾಕಿಸ್ತಾನದ ಮಾಜಿ ಪ್ರಧಾನಿ ದಿ. ಬೆನಜೀರ್ ಭುಟ್ಟೋ 1990ರ ಜನವರಿಯಲ್ಲಿ ಪ್ರಧಾನಿ ಹುದ್ದೆಯಲ್ಲಿದ್ದಾಗ ಎರಡನೇ ಮಗಳಿಗೆ ಜನ್ಮ ನೀಡಿದ್ದರು. ಹೀಗಾಗಿ, ವಿಶ್ವದಲ್ಲಿ ಮೊದಲ ಬಾರಿಗೆ ಹುದ್ದೆಯಲ್ಲಿದ್ದಾಗ ಮಗು ಹೆತ್ತ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆ ಭುಟ್ಟೋಗೆ ಸಲ್ಲುತ್ತದೆ.
ಕಳೆದ ಅಕ್ಟೋಬರ್ನಲ್ಲಿ ಪ್ರಧಾನಮಂತ್ರಿಯಾಗಿ ಆರ್ಡೆರ್ನ್ ಅಧಿಕಾರ ಸ್ವೀಕರಿಸಿದ್ದರು. ಶುಕ್ರವಾರ ಟ್ವಿಟರ್ ಮೂಲಕ ಗರ್ಭಿಣಿ ಎಂದು ವಿಶ್ವಕ್ಕೆ ಸಾರಿದ್ದಾರೆ. “2017 ನಮಗೆ ಮಹತ್ವದ ವರ್ಷವಾಗಿದೆ ಎಂದು ತಿಳಿದುಕೊಂಡಿದ್ದೆವು. ಈ ವರ್ಷ ಈಗಾಗಲೇ ಹೆತ್ತವರಾಗಿರುವವರ ಸಾಲಿಗೆ ಸೇರಲಿದ್ದೇವೆ. ಪ್ರಧಾನಿ ಜತೆಗೆ ಅಮ್ಮನೂ ಆಗಲಿದ್ದೇನೆ. ಕ್ಲಾರ್ಕ್ (ಪತಿ ಕ್ಲಾರ್ಕ್ ಗೇಫೋರ್ಡ್) ತಂದೆಯಾಗಲಿದ್ದಾರೆ’ ಎಂದು ಬರೆದುಕೊಂಡಿದ್ದಾರೆ. ಮಗು ಹೆತ್ತ ಬಳಿಕ ಆರು ವಾರಗಳ ಕಾಲ ಜೆಸಿಂಡಾ ರಜೆಯಲ್ಲಿ ತೆರಳಲಿದ್ದಾರಂತೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್ ನೀಡಿದ ರಿಷಭ್ ಪಂತ್
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.