ಹಜ್ ಯಾತ್ರಿಕರ ಸಬ್ಸಿಡಿ ತಡೆ: ಸಿದ್ದರಾಮಯ್ಯ ವಿರೋಧ
Team Udayavani, Jan 21, 2018, 6:00 AM IST
ಬೆಂಗಳೂರು: ಕೇಂದ್ರ ಸರ್ಕಾರ ಹಜ್ ಯಾತ್ರಿಕರ ಸಬ್ಸಿಡಿ ನಿಲ್ಲಿಸಿರುವುದು ಅಲ್ಪ ಸಂಖ್ಯಾತರ ಬಗ್ಗೆ ಕೇಂದ್ರ ಸರ್ಕಾರಕ್ಕಿರುವ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಹಜ್ಯಾತ್ರೆಗೆ ರಾಜ್ಯದಿಂದ ತೆರಳುವ ಯಾತ್ರಿಕರನ್ನು ಆನ್ಲೈನ್ ಮೂಲಕ ಆಯ್ಕೆ ಮಾಡಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಕೋರ್ಟ್ ಆದೇಶ ಇದೆ ಎಂದು ಸಬೂಬು ಹೇಳಿ ಸಬ್ಸಿಡಿ ನಿಲ್ಲಿಸಿದೆ. ಯಾರೂ ಸಬ್ಸಿಡಿ ನಂಬಿ ಯಾತ್ರೆ ಕೈಗೊಳ್ಳುವುದಿಲ್ಲ. ಹೋಗಬೇಕು ಅಂತ ಇರುವವರು ಯಾತ್ರೆ ಮಾಡಿಯೇ ಮಾಡುತ್ತಾರೆ ಎಂದು ತಿಳಿಸಿದರು. ರಾಜ್ಯದಲ್ಲಿ 18 ಸಾವಿರ ಮಂದಿ ಹಜ್ಯಾತ್ರೆಗೆ ತೆರಳಲು ಅರ್ಜಿ ಸಲ್ಲಿಸಿದ್ದಾರೆ. ಅವರಲ್ಲಿ 6624 ಜನರನ್ನು ಪ್ರವಾಸಕ್ಕೆ ಕಳುಹಿಸಲು ಅವಕಾಶವಿದೆ ಎಂದು ತಿಳಿಸಿದರು.
ಧರ್ಮದಲ್ಲಿ ರಾಜಕಾರಣ ಇರಬಾರದು. ನಮ್ಮ ಸ್ವಾರ್ಥಕ್ಕಾಗಿ ಜನಗಳಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡಬಾರದು ಎಂದು ಹೇಳಿದರು. ನಗರಾಭಿವೃದಿಟಛಿ ಮತ್ತು ಹಜ್ ಸಚಿವ ರೋಷನ್ ಬೇಗ್ ಮಾತನಾಡಿ, ಕೇಂದ್ರ ಸರ್ಕಾರ ಹಜ್ ಯಾತ್ರಿಕರಿಗೆ ನೀಡುತ್ತಿದ್ದ ಸಬ್ಸಿಡಿ ನಿಲ್ಲಿಸಿದ್ದು ಸ್ವಾಗತಾರ್ಹ. ಹಜ್ ಯಾತ್ರಿಕರಿಗೆ ಯಾವುದೇ ಸಹಾಯಧನ ಅಗತ್ಯವಿಲ್ಲ ಎಂದರು.
ಹಜ್ ಯಾತ್ರೆಗೆ ಟಿಕೆಟ್ ನೀಡಲು ಕೆಲವು ಏಜೆನ್ಸಿಗಳಿಗೆ ಮೀಸಲಿರುವುದರಿಂದ ಅವರು ಯಾತ್ರಿಕರಿಂದ ಹಣ ಲೂಟಿ ಮಾಡುತ್ತಾರೆ. ಅದನ್ನು ತಪ್ಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ಮೋದಿ ಜೊತೆಗೆ ಮಾತುಕತೆ ನಡೆಸಬೇಕು. ಅಲ್ಲದೇ ರಾಜ್ಯದ ಹಜ್ ಯಾತ್ರಿಕರ ಕೋಟಾ ಹೆಚ್ಚಳ ಮಾಡುವಂತೆ ಕೇಂದ್ರ ಸಚಿವರೊಂದಿಗೆ ಮಾತುಕತೆ ನಡೆಸಬೇಕೆಂದು ಮನವಿ ಮಾಡಿದರು. ರಾಜ್ಯಸಭಾ ಸದಸ್ಯ ರೆಹಮಾನ್ ಖಾನ್ ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
B. S. Yediyurappa ವಿರುದ್ಧ ಎಫ್ಐಆರ್ಗೆ ಸಚಿವರ ಒತ್ತಡ
BJP ಸರಕಾರ ಕಾಲದ ಕೋವಿಡ್, ಗಣಿ ತನಿಖೆಗೆ ಎಸ್ಐಟಿ: ಸಚಿವ ಸಂಪುಟ ನಿರ್ಧಾರ
Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್ ಕೇರ್ ವಿಭಾಗ ಆರಂಭ
Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್
MUST WATCH
ಹೊಸ ಸೇರ್ಪಡೆ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್ ಕುಮಾರ್
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.