ಲಕ್ಷ ವಸತಿ ಯೋಜನೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
Team Udayavani, Jan 21, 2018, 11:43 AM IST
ಬೆಂಗಳೂರು: ಮುಖ್ಯಮಂತ್ರಿಗಳ ಒಂದು ಲಕ್ಷ ಬಹುಮಹಡಿ ವಸತಿ ಯೋಜನೆಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಜ.31ರವರೆಗೆ ವಿಸ್ತರಿಸಲಾಗಿದೆ. ಹಾಗೇ ಅರ್ಜಿದಾರರು ಅರ್ಜಿ ಕಡ್ಡಾಯವಾಗಿ ಪಡಿತರ ಚೀಟಿ ಸಂಖ್ಯೆ ಸಲ್ಲಿಸಬೇಕೆಂಬ ನಿಯಮವನ್ನು ಸಡಿಸಿ, ವಿನಾಯ್ತಿ ನೀಡಲಾಗಿದೆ.
ನಗರದಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ವಸತಿರಹಿತರಿಗೆ ರಿಯಯ್ತಿ ದರದಲ್ಲಿ ಸೂರು ಕಲ್ಪಿಸುವ ಸಲುವಾಗಿ ರೂಪಿಸಲಾದ ಮುಖ್ಯಮಂತ್ರಿಗಳ ಬೆಂಗಳೂರು ಒಂದು ಲಕ್ಷ ಬಹುಮಹಡಿ ವಸತಿ ಯೋಜನೆ ಜಾರಿಗೊಳಿಸುವ ಜವಾಬ್ದಾರಿಯನ್ನು ಸರ್ಕಾರ ರಾಜೀವ್‌ಗಾಂಧಿ ಗ್ರಾಮೀಣ ವಸತಿ ನಿಗಮಕ್ಕೆ ವಹಿಸಿದೆ. ಅದರಂತೆ ಇದೇ ಮೊದಲ ಬಾರಿಗೆ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಿದೆ.
ಈ ಮೊದಲು ಅರ್ಜಿ ಸಲ್ಲಿಕೆಗೆ ಜ.5 ಕಡೆಯ ದಿನವಾಗಿತ್ತು. ನಂತರ ಹೆಚ್ಚು ಮಂದಿ ಯೋಜನೆಯ ಸದುಪಯೋಗ ಪಡೆಯಲು ಅನುಕೂಲವಾಗುವಂತೆ ರ್ಜಿ ಸಲ್ಲಿಕೆ ಅವಧಿಯನ್ನು ಜ.20ರವರೆಗೆ ವಿಸ್ತರಿಸಲಾಗಿತ್ತು. ಪ್ರಸ್ತುತ ಅರ್ಜಿ ಸಲ್ಲಿಸುವ ವೇಳೆ ಅಗತ್ಯವಿರುವ ದಾಖಲೆಗಳನ್ನು ಸಂಬಂಧಿಸಿದ ಇಲಾಖೆ, ಕಚೇರಿಯಿಂದ ಪಡೆಯಲು ಸಮಯಾವಕಾಶ ಬೇಕಿರುವುದರಿಂದ ಅರ್ಜಿ ಸಲ್ಲಿಕೆ ದಿನಾಂಕವನ್ನು ಮತ್ತೂಮ್ಮೆ ವಿಸ್ತರಿಸಲಾಗಿದೆ ಎಂದು ನಿಗಮ ತಿಳಿಸಿದೆ.
ಯೋಜನೆಯ ಪ್ರಯೋಜನ ಪಡೆಯಲು ಆನ್‌ಲೈನ್ ಮೂಲಕ ಸಲ್ಲಿಸುವ ಅರ್ಜಿಯೊಂದಿಗೆ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ವಾಸ ದೃಢೀಕರಣ ಪತ್ರ, ಪಡಿತರ ಚೀಟಿ, ಆಧಾರ್ ದಾಖಲೆಗಳ ಸಂಖ್ಯೆ ಹಾಗೂ ಕಟ್ಟಡ ಕಾರ್ಮಿಕರಾಗಿದ್ದರೆ ಕಾರ್ಮಿಕ ನೋಂದಣಿ ಸಂಖ್ಯೆ ಸಲ್ಲಿಸಬೇಕು. ಇದೀಗ ಪಡಿತರ ಚೀಟಿ ಸಂಖ್ಯೆ ಕಡ್ಡಾಯ ಸಲ್ಲಿಕೆಗೆ ವಿನಾಯ್ತಿ ನೀಡಲಾಗಿದೆ ಎಂದು ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.