35 ಬಸ್‌ಗಳ ವಿರುದ್ಧ ಪ್ರಕರಣ
Team Udayavani, Jan 21, 2018, 11:43 AM IST
ಬೆಂಗಳೂರು: ಅನಧಿಕೃತವಾಗಿ ವಾಣಿಜ್ಯ ಸರಕಗಳನ್ನು ಸಾಗಿಸುತ್ತಿದ್ದ ಟೂರಿಸ್ಟ್ ಬಸ್ಸುಗಳ ವಿರುದ್ಧ ಕಾರ್ಯಾಚರಣೆ ನಡೆಸಿದ ಸಾರಿಗೆ ಇಲಾಖೆ ಅಧಿಕಾರಿಗಳು, ಬೆಂಗಳೂರು ನಗರ ಜಿಲ್ಲೆಯ ಜಂಟಿ ಸಾರಿಗೆ ಆಯುಕ್ತ ಜೆ.ಜ್ಞಾನೇಂದ್ರ ಕುಮಾರ್ ನೇತೃತ್ವದ ತಂಡ 150ಕ್ಕೂ ಹೆಚ್ಚು ಬಸ್ಸುಗಳ ತಪಾಸಣೆ ನಡೆಸಿ, 35ಕ್ಕೂ ಹೆಚ್ಚು ಬಸ್ಸುಗಳ ವಿರುದ್ಧ ಪ್ರಕರಣ ದಾಖಲಿಸಿದೆ.
ಜನವರಿ 19ರಂದು ರಾತ್ರಿ ವೇಳೆ ಕಲಾಸಿಪಾಳ್ಯ, ಕೆಂಪೇಗೌಡ ಬಸ್ ನಿಲ್ದಾಣ, ಬಳ್ಳಾರಿ ರಸ್ತೆ, ರಾಷ್ಟ್ರೀಯ ಹೆದ್ದಾರಿ-4ರಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ತಂಡ ಬಸ್ಸುಗಳ ತಪಾಸಣೆ ನಡೆಸಿ, ಪ್ರಕರಣಗಳನ್ನು ದಾಖಲಿಸಿಕೊಂಡು ಸಾಗಿಸಲಾಗುತ್ತಿದ್ದ ಸರಕುಗಳನ್ನು ಸ್ಥಳದಲ್ಲೇ ತೆರವುಗೊಳಿಸಿದೆ.
ಅದೇ ರೀತಿ ನಗರ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಮತ್ತು ಕಾನೂನು ಉಲ್ಲಂ ಸಿ ಸಂಚರಿಸುತ್ತಿದ್ದ ಆಟೋಗಳ ವಿರುದ್ಧ ಕಾರ್ಯಾಚರಣೆ ನಡೆಸಲಾಗಿದೆ.ಸುಮಾರು 1,750 ಆಟೋಗಳ ತಪಾಸಣೆ ನಡೆಸಿ 450ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಲಾಗಿದೆ.
ಪರವಾನಿಗೆ ಇಲ್ಲದೇ ಆ್ಯಪ್ ಆಧಾರಿತ ಟ್ಯಾಕ್ಸಿ ಸೇವೆ ಒದಗಿಸುತ್ತಿದ್ದ “ನಮ್ಮ ಟೈಗರ್’ ಸಂಸ್ಥೆ ವಿರುದ್ಧ ಕಾರ್ಯಾಚರಣೆ ನಡೆಸಿ ಅನೇಕ ವಾಹನಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಿಕೊಂಡು ಸಂಸ್ಥೆಯ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Kollywood: ಬಹಿರಂಗ ಪತ್ರ ಬರೆದು ಧನುಷ್ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.