ಪರವಾನಿಗೆ ಇಲ್ಲದ, ನವೀಕರಿಸದ ಅಂಗಡಿ ಮಾಲಕರಿಗೆ ದಂಡ ವಿಧಿಸಲು ತೀರ್ಮಾನ
Team Udayavani, Jan 21, 2018, 3:17 PM IST
ಉಪ್ಪಿನಂಗಡಿ: ಪರವಾನಿಗೆ ಹೊಂದಿರದ ಹಾಗೂ ನವೀಕರಿಸದ ಅಂಗಡಿ ಮಾಲಕರಿಗೆ ಯಾವುದೇ ಕಾರಣ ನೀಡದೇ ದಂಡ ವಿಧಿಸಲು ಉಪ್ಪಿನಂಗಡಿ ಗ್ರಾ.ಪಂ. ನಿರ್ಣಯ ಕೈಗೊಂಡಿದೆ.
ಉಪ್ಪಿನಂಗಡಿ ಗ್ರಾ.ಪಂ. ಅಧ್ಯಕ್ಷ ಅಬ್ದುರ್ರಹ್ಮಾನ್ ಕೆ. ಅವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಕಚೇರಿಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಸದಸ್ಯರು, ಕೆಲವರು ಪರವಾನಿಗೆ ಇಲ್ಲದೆ ಅನಧಿಕೃತವಾಗಿ ವ್ಯಾಪಾರ ನಡೆಸುತ್ತಿದ್ದಾರೆ. ಇನ್ನು ಕೆಲವರು ಪರವಾನಿಗೆ ನವೀಕರಿಸುವ ಗೋಜಿಗೆ ಹೋಗುತ್ತಿಲ್ಲ. ಇದರಿಂದ ಗ್ರಾ.ಪಂ.ಗೆ ನಷ್ಟವಾಗಲಿದ್ದು, ಆದ್ದರಿಂದ ಅಂಥಹವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು. ಈ ಬಗ್ಗೆ ಚರ್ಚೆ ನಡೆದು ಮುಂದಕ್ಕೆ ಅಂಥಹವರಿಗೆ ಕಾರಣ ನೀಡದೇ ದಂಡ ವಿಧಿಸುವ ನಿರ್ಣಯ ಕೈಗೊಳ್ಳಲಾಯಿತು.
ಗ್ರಾ.ಪಂ. ಸದಸ್ಯ ಚಂದ್ರಶೇಖರ ಮಡಿವಾಳ ಮಾತನಾಡಿ, ಪಂಚಾಯತ್ ವ್ಯಾಪ್ತಿಯಲ್ಲಿ ಅಧಿಕೃತವಾಗಿ ಹಾಗೂ ಅನಧಿಕೃತವಾಗಿ ಪಂಚಾಯತ್‌ನ ಕುಡಿಯುವ ನೀರಿನ ಸಂಪರ್ಕ ಪಡೆದು ಕೊಂಡವರ ಮಾಹಿತಿಯನ್ನು ನೀರು ನಿರ್ವಾಹಕರು ಕಲೆ ಹಾಕಬೇಕೆಂದು ಒತ್ತಾಯಿಸಿದರು. ಈ ಬಗ್ಗೆ ನಿರ್ಣಯ ಅಂಗೀಕರಿಸಲಾಯಿತು.
ಪತ್ರ ಬರೆಯಲು ನಿರ್ಧಾರ
ಉಪ್ಪಿನಂಗಡಿ ಪೇಟೆಯಲ್ಲಿ ಶೀತಲೀಕರಣ ವ್ಯವಸ್ಥೆಯುಳ್ಳ ಮೀನು ಮಾರುಕಟ್ಟೆ ತೆರೆಯಲು ಸಭೆಯಲ್ಲಿ ಆಗ್ರಹ ಕೇಳಿಬಂತು. ಹಿರೇಬಂಡಾಡಿಗೆ ತೆರಳುವ ಜೀಪುಗಳಿಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಲುಗಡೆಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಆದರೆ ಈಗ ಎಲ್ಲ ಜೀಪುಗಳು ಹಳೆ ಬಸ್ ನಿಲ್ದಾಣದಲ್ಲಿಯೇ ಠಿಕಾಣಿ ಹೂಡುತ್ತಿವೆ. ಆದ್ದರಿಂದ ಈ ಬಗ್ಗೆ ಕ್ರಮಕ್ಕೆ ಸಂಚಾರಿ ಪೊಲೀಸರಿಗೆ ಪತ್ರ ಬರೆಯಲು ನಿರ್ಧರಿಸಲಾಯಿತು.
ಖಾಸಗಿ ವಾಹನ ನಿಲುಗಡೆಗೆ ನಿರ್ಬಂಧ ವಿಧಿಸಲು ತೀರ್ಮಾನ
ಹೊಸ ಬಸ್ ನಿಲ್ದಾಣದಲ್ಲಿ ಬೇಕಾ ಬಿಟ್ಟಿಯಾಗಿ ಖಾಸಗಿ ವಾಹನಗಳನ್ನು ನಿಲುಗಡೆಗೊಳಿಸಲಾಗುತ್ತಿದೆ. ಇದಕ್ಕೊಮ್ಮೆ ಪಂಚಾಯತ್ ದಂಡ ಕೂಡ ವಿಧಿಸಿತ್ತು. ಆದರೂ ಮರುದಿನದಿಂದ ಮತ್ತೆ ಅದೇ ಸ್ಥಿತಿಯಿರುವುದರಿಂದ ದಿನಕ್ಕೊಬ್ಬರಂತೆ ಪಂಚಾಯತ್ ಸಿಬಂದಿಯನ್ನು ಅಲ್ಲಿ ನಿಲ್ಲಿಸಿ, ಬಸ್‌ಗಳು ಹಾಗೂ ಇತರ ಅಗತ್ಯದ ವಾಹನಗಳನ್ನು ಹೊರತುಪಡಿಸಿ ಉಳಿದ ವಾಹನಗಳು ಬಸ್ ನಿಲ್ದಾಣ ಪ್ರವೇಶಿಸದಂತೆ ನಿರ್ಬಂಧ ವಿಧಿಸಲು ತೀರ್ಮಾನಿಸಲಾಯಿತು.
ಪಿಡಿಒ ಅಬ್ದುಲ್ಲಾ ಅಸಾಫ್ ಮಾತನಾಡಿ, ವಸತಿ ಯೋಜನೆಯಡಿ ಮನೆಗಳನ್ನು ಪಡೆದ ಫಲಾನುಭವಿಗಳು ನಿಗದಿತ ಅವಧಿಗೆ ಮನೆಗಳನ್ನು ಪೂರ್ಣಗೊಳಿಸದಿದ್ದರೆ ಅಂಥವರನ್ನು ಪಟ್ಟಿಯಿಂದ ಕೈಬಿಡುವ ಅನಿವಾರ್ಯತೆ ಇದ್ದು, ಸದಸ್ಯರು ಫಲಾನುಭವಿಗಳಿಗೆ ಮನವರಿಕೆ ಮಾಡುವಂತೆ ಸೂಚಿಸಿದರು. ಸದಸ್ಯರಾದ ಗೋಪಾಲ ಹೆಗ್ಡೆ, ಸುನೀಲ್ ದಡ್ಡು, ಸುರೇಶ್ ಅತ್ರಮಜಲು, ಯು.ಟಿ. ತೌಸೀಫ್, ಚಂದ್ರಾವತಿ, ಭಾರತಿ, ಯೋಗಿನಿ, ಜಮೀಳಾ, ಸುಶೀಲಾ, ಝರೀನಾ ಉಪಸ್ಥಿತರಿದ್ದರು. ಕಾರ್ಯದರ್ಶಿ ಶಾರದಾ ಸ್ವಾಗತಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Editorial: ಪುಂಡ ವಿದ್ಯಾರ್ಥಿಗಳಿಗೆ ಶಿಕ್ಷೆ: ಸ್ಪಷ್ಟ ಮಾರ್ಗಸೂಚಿ ಅಗತ್ಯ
Mangaluru: ನ್ಯಾಯಾಂಗ ನಿಂದನೆ ಪ್ರಕರಣ: ಹನುಮಂತ ಕಾಮತ್‌ಗೆ ಕಾರಾಗೃಹ ಶಿಕ್ಷೆ
Parliament: ಎರಡೂ ಸದನಗಳಲ್ಲಿ ಸಂವಿಧಾನದ ಬಗ್ಗೆ ಚರ್ಚೆಗೆ ವಿಪಕ್ಷ ನಾಯಕರ ಪತ್ರ
Congress Politics: ಡಿಸಿಎಂ ಡಿ.ಕೆ.ಶಿವಕುಮಾರ್ ದಿಲ್ಲಿಗೆ ಭೇಟಿ: ಹೈಕಮಾಂಡ್ ಜತೆ ಚರ್ಚೆ
Andhra Pradesh: ಅದಾನಿ ಗ್ರೂಪ್ ಜತೆಗಿನ ಒಪ್ಪಂದ ರದ್ದತಿಗೆ ಆಂಧ್ರಪ್ರದೇಶ ಚಿಂತನೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.