![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jan 22, 2018, 9:38 AM IST
ಬೆಂಗಳೂರು: ಸರ್ಕಾರದ ಗುತ್ತಿಗೆ ಕಾಮಗಾರಿ ಗಳಲ್ಲಿ ಎಸ್ಸಿ-ಎಸ್ಟಿ ಗುತ್ತಿಗೆದಾರರಿಗೆ ನೀಡುತ್ತಿರುವ ಮೀಸಲಾತಿ ಪ್ರಮಾಣವನ್ನು 50 ಲಕ್ಷ ರೂ.ನಿಂದ 1 ಕೋಟಿ ರೂ. ಏರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಚಾಮರಾಜಪೇಟೆಯ ಜಿಂಕೆ ಪಾರ್ಕ್ ಬಳಿ ನಿರ್ಮಿಸಲಾಗಿರುವ “ಮಹರ್ಷಿ ವಾಲ್ಮೀಕಿ ಭವನ’ ಉದ್ಘಾಟಿಸಿ ಮಾತನಾಡಿದ ಅವರು, ಬೇರೆ ವರ್ಗದ ಗುತ್ತಿಗೆದಾರರಂತೆ ಎಸ್ಸಿ-ಎಸ್ಟಿ ವರ್ಗದ ಗುತ್ತಿಗೆದಾ ರರೂ ಸಹ ಆರ್ಥಿಕವಾಗಿ ಸಬಲರಾಗಬೇಕು ಎಂಬ ಉದ್ದೇಶದಿಂದ ಸರ್ಕಾರದ 50 ಲಕ್ಷ ರೂ.ವರೆಗಿನ
ಕಾಮಗಾರಿಗಳಲ್ಲಿ ಮೀಸಲಾತಿ ನೀಡಲು ಕಾಯ್ದೆ ತರಲಾಗಿದೆ. ಈಗ ಆ ಪ್ರಮಾಣವನ್ನು 1 ಕೋಟಿ ರೂ.ಗೆ ಹೆಚ್ಚಿಸಲಾಗುವುದು ಎಂದರು.
ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಇರಬೇಕು ಎಂದು ನಾನು ಮೊದಲಿನಿಂದಲೂ ಪ್ರತಿಪಾದಿಸುತ್ತಲೇ ಬಂದಿದ್ದೇನೆ. ಅದಕ್ಕಾಗಿ
ಸರ್ಕಾರದ ಕಾಮಗಾರಿಗಳಲ್ಲಿ ಎಸ್ಸಿ-ಎಸ್ಟಿ ಗುತ್ತಿಗೆದಾರ ರಿಗೆ ಮೀಸಲಾತಿ ಅವಕಾಶ ಕಲ್ಪಿಸಲಾಯಿತು ಎಂದರು. ಹಿಂದಿನ ಬಿಜೆಪಿ
ಸರ್ಕಾರ 5 ವರ್ಷಗಳಲ್ಲಿ 21 ಸಾವಿರ ಕೋಟಿ ರೂ. ಖರ್ಚು ಮಾಡಿದ್ದರೆ, ನನ್ನ ಅವಧಿಯಲ್ಲಿ 86 ಸಾವಿರ ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ನಾನು ಅಳಿಯ ಇದ್ದಂತೆ
ನಾನು ಒಂದು ರೀತಿಯಲ್ಲಿ ಚಾಮರಾಜಪೇಟೆಯ ಅಳಿಯ ಇದ್ದಂತೆ. ನನ್ನ ಮಾವನ ಊರಿನವರು ಮತ್ತು ನನ್ನ ಜಿಲ್ಲೆಯವರು ಇಲ್ಲಿ ತುಂಬಾ ಜನರಿದ್ದಾರೆ. ಅವರೆಲ್ಲರೂ ನನ್ನ ಸಂಬಂಧಿಕರಿದ್ದಂತೆ. ಚಾಮರಾಜಪೇಟೆಗೆ ಬಂದರೆ ಮೈಸೂರು- ಚಾಮರಾಜನಗರ ಜಿಲ್ಲೆ ನೋಡಿದಂತಾಗುತ್ತದೆ. ವಿಧಾನಸಭೆ ಚುನಾವಣೆಗೆ ಟಿಕೆಟ್ ಹಂಚಿಕೆ ಆದ ಮೇಲೆ ಪಕ್ಷದ ಕಾರ್ಯಕ್ರಮದಲ್ಲಿ ಇಲ್ಲಿ ಬಂದು ಇನ್ನೂ ಅನೇಕ ವಿಚಾರಗಳನ್ನು ಮಾತನಾಡುತ್ತೇನೆ ಎಂದು ಸಿಎಂ ಹೇಳಿದರು.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.