ಸೊಗಡು-ಬಸವರಾಜು ರಾಜಿಗೆ ಪ್ರಯತ್ನ
Team Udayavani, Jan 22, 2018, 9:53 AM IST
ತುಮಕೂರು: ಜಿಲ್ಲಾ ಬಿಜೆಪಿಯ ಸೊಗಡು ಶಿವಣ್ಣ ಮತ್ತು ಜಿ.ಎಸ್.ಬಸವರಾಜು ಬಣಗಳ ನಡುವೆ ಇರುವ ಭಿನ್ನಾಭಿಪ್ರಾಯವನ್ನು ಬಗೆಹರಿಸಲು ರಾಜ್ಯ ಉಸ್ತುವಾರಿ ಯಾಗಿರುವ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಭಾನುವಾರ ಪ್ರಯತ್ನ ನಡೆಸಿದರು.
ಕೋರ್ ಕಮಿಟಿ ಸಭೆಗೆ ಬರದ ಶಿವಣ್ಣ , ಬಳಿಕ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳುವ ಮೂಲಕ ಒಗ್ಗಟ್ಟಿನ ಜಪ ಪಟಿಸಿದರು. ಜಿಲ್ಲಾ
ಕಾರ್ಯಕಾರಿಣಿ ಸಭೆ ಹಾಗೂ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಲು ಜಿಲ್ಲೆಗೆ ಆಗಮಿಸಿದ್ದ ಉಸ್ತುವಾರಿ ಪ್ರಕಾಶ್ ಜಾವಡೇಕರ್, ನಗರದ ಪ್ರವಾಸಿ ಮಂದಿರಕ್ಕೆ ಮಾಜಿ ಸಚಿವ ಎಸ್.ಶಿವಣ್ಣ, ಶಾಸಕ ಬಿ.ಸುರೇಶಗೌಡ ಹಾಗೂ ಮಾಜಿ ಸಂಸದ ಜಿ.ಎಸ್.ಬಸವರಾಜು, ಜಿಲ್ಲಾಧ್ಯಕ್ಷ ಜೋತಿಗಣೇಶ್ ಅವರನ್ನು ಕರೆಸಿಕೊಂಡು ಭಿನ್ನಾಭಿಪ್ರಾಯ ಬಗೆಹರಿಸಲು ಯತ್ನಿಸಿದರು. ಪಕ್ಷದಲ್ಲಿರುವ ಭಿನ್ನಾಭಿಪ್ರಾಯ ಕುರಿತು ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದಂತೆ ತಾಕೀತು ಮಾಡಿದರು. ಯಾರಿಗೆ ಟಿಕೇಟ್ ನೀಡಬೇಕು ಎನ್ನುವ ಬಗ್ಗೆ ಸಮೀಕ್ಷೆ ನಡೆಸಿ ಟಿಕೇಟ್ ನೀಡಲಾಗುವುದು. ಯಾರಿಗೆ ಟಿಕೇಟ್ ನೀಡಿದರೂ ಪಕ್ಷದ ಗೆಲುವಿಗೆ ಶ್ರಮಿಸಿ ಎಂದು ಖಡಕ್ ಸೂಚನೆ ನೀಡಿದರು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ
Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.