ಮಹಿಳೆಯರು, ಯುವಜನಾಂಗದ ಸಶಕ್ತಿಗೆ ಯೋಜನೆ: ಸುರೇಶ್ ಪ್ರಭು
Team Udayavani, Jan 22, 2018, 11:43 AM IST
ಮಂಗಳೂರು: ಮಹಿಳೆಯರು ಮತ್ತು ಯುವ ಜನಾಂಗವನ್ನು ಸಶಕ್ತರನ್ನಾಗಿಸಲು ಮೋದಿ ನೇತೃತ್ವದ ಕೇಂದ್ರ ಸರಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, ಅವುಗಳನ್ನು ಎಲ್ಲರೂ ಸದುಪಯೋಗಪಡಿಸಿಕೊಳ್ಳ ಬೇಕು ಎಂದು ಕೇಂದ್ರ ಸಚಿವ ಸುರೇಶ್ ಪ್ರಭು ಹೇಳಿದರು.
ಗುರುಪುರ ಕೈಕಂಬದಲ್ಲಿ ರವಿವಾರ ಮಾತೃಭೂಮಿ ಸೌಹಾರ್ದ ಸಹಕಾರಿ ಸಂಘದ ಆಡಳಿತ ಕಚೇರಿ “ಮಾತೃಧಾಮ’ ಉದ್ಘಾಟಿಸಿ ಅವರು ಮಾತನಾಡಿದರು. ಮಹಿಳೆಯರಿಗೆ ಸೌಲಭ್ಯಗಳು ದೊರೆ ತಾಗ ಬದಲಾವಣೆ ವೇಗ ಪಡೆಯು ತ್ತದೆ. ಜನಧನ ಖಾತೆ ತೆರೆಯುವ ಅಭಿಯಾನ ದಲ್ಲಿ ಮಹಿಳೆಯರೇ ಮುಂಚೂಣಿ ಯಲ್ಲಿರುವುದು ವಿಶೇಷ. ಯುವ ಜನರ ಅಭಿವೃದ್ಧಿಗಾಗಿ ಮುದ್ರಾ ಸಾಲ ಯೋಜನೆ, ಸ್ಟಾರ್ಟ್ ಅಪ್ ಎಂಬ ವಿಶೇಷ ಪರಿಕಲ್ಪನೆಯನ್ನು ಕೇಂದ್ರ ಆರಂಭಿಸಿದೆ. ಕೇಂದ್ರ ಸರಕಾರ ಜನ ಸೇವೆಗೆ ಸದಾ ಬದ್ಧ ಎಂದರು. ದ.ಕ. ಜಿಲ್ಲೆಯ ಕ್ರಿಯಾ ಶೀಲ ಸಮುದಾಯದ ಆಶಯಕ್ಕೆ ತಕ್ಕಂತೆ ಕೇಂದ್ರ ಸರಕಾರ ಸ್ಪಂದಿಸುತ್ತಿದೆ ಎಂದು ಅವರು ಅಭಿಪ್ರಾಯಪಟ್ಟರು.
15 ಶಾಖೆ ಗುರಿ: ಅಧ್ಯಕ್ಷತೆ ವಹಿಸಿದ್ದ ಸಂಸದ ನಳಿನ್ ಕುಮಾರ್ ಮಾತನಾಡಿ, ಕೇವಲ 12 ವರ್ಷಗಳಲ್ಲಿ 8 ಶಾಖೆಗಳನ್ನು ವಿಸ್ತರಿಸಿದ ಮಾತೃಭೂಮಿ ಸೌಹಾರ್ದ ಸಹಕಾರಿ ಮುಂದಿನ ದಿನಗಳಲ್ಲಿ ಒಟ್ಟು 15 ಶಾಖೆಗಳನ್ನು ತೆರೆಯುವ ಗುರಿ ಹೊಂದಿದೆ. 1,500 ಸ್ವಸಹಾಯ ಗುಂಪುಗಳನ್ನು ಆರಂಭಿಸಲಾಗುವುದು. ರಾಜ್ಯದ ವಿವಿಧೆಡೆ ಶಾಖೆಗಳನ್ನು ತೆರೆ ಯುವ ಆಶಯವೂ ಇದೆ ಎಂದರು. ಸ್ವಂತ ಕಟ್ಟಡ ನಿರ್ಮಿಸಲು ಜಾಗವನ್ನು ಈಗಾಗಲೇ ಖರೀದಿಸಲಾಗಿದೆ. ಅದರಲ್ಲಿ ಕೌಶಲ ತರಬೇತಿ ಕೇಂದ್ರ ಆರಂಭಿಸಿ ಕರಾವಳಿಗರಿಗೆ ಉದ್ಯೋಗ ಕಲ್ಪಿಸಲಾಗುವುದು ಎಂದರು.
ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿ ಗೋಡು, ಕ.ರಾ.ಸೌ.ಸಂ.ಸ. ನಿರ್ದೇಶಕ ಮಂಜುನಾಥ ಎಸ್.ಕೆ. ಉಡುಪಿ, ಮಾಜಿ ಸಚಿವ ಬಿ. ನಾಗರಾಜ ಶೆಟ್ಟಿ, ನಿರ್ದೇಶಕರಾದ ವೆಂಕಟೇಶ್ ನಾವಡ, ಪೂವಪ್ಪ ಕುಂದರ್, ಭಾಸ್ಕರ ವಿ. ಶೆಟ್ಟಿ, ಪದ್ಮನಾಭ ರಾವ್, ಶ್ರೀಧರ ರಾವ್, ಪಾವನಾ ಜೆ. ಶೆಟ್ಟಿ, ವಿದ್ಯಾ ವಿ. ಕಾಮತ್, ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಉಪಸ್ಥಿತರಿದ್ದರು. ಭಾಸ್ಕರ ದೇವಸ್ಯ ಅವರು ಸ್ವಾಗತಿಸಿ ಕೃಷ್ಣ ಕೊಂಪದವು ವಂದಿಸಿದರು. ಪುರುಷೋತ್ತಮ ಭಂಡಾರಿ ಅವರು ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ತ್ಯಾಜ್ಯ ಸಾಗಾಟ ವಾಹನಕ್ಕೆ ಏಳೇ ವರ್ಷ ಬಾಳಿಕೆ!
Mangaluru: ದ್ವಿಮುಖ ಸಂಚಾರ ನಿರ್ಧಾರಕ್ಕೆ ಅಡೆತಡೆ
Ullal: ಬಾವಿ, ಬೋರ್‌ವೆಲ್‌ನಲ್ಲಿ ತೈಲಮಿಶ್ರಿತ ನೀರು; ಸಮಸ್ಯೆ ಇರುವ ಮನೆಗಳಿಗೆ ಪೈಪ್‌ಲೈನ್
Train: ಗೋಮಟೇಶ್ವರ ಎಕ್ಸ್‌ಪ್ರೆಸ್ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು
Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Tragedy: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು
Udupi: ಇಲ್ಲಿ ಹೊಂಡಗಳೇ ಸ್ಪೀಡ್ ಬ್ರೇಕರ್‌ಗಳು!
Rainy Season: ಮೊಬೈಲ್ ಬಿಟ್ಟು ಬೇರೆ ಆಡೋಣವೇ? ಮಕ್ಕಳಿಗೆ ಹೀಗೊಂದು ಪ್ರಶ್ನೆ
Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು
Jammu; ವೈಷ್ಣೋದೇವಿ ರೋಪ್‌ವೇ ವಿವಾದ: ಪ್ರತಿಭಟನೆಗಿಳಿದವರು ವಶಕ್ಕೆ, ಎಫ್ಐಆರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.