35 ತಾಸು ದಾಖಲೆಯ ಕಂಬಳ
Team Udayavani, Jan 22, 2018, 12:53 PM IST
ಪುತ್ತೂರು: ಎನ್. ಮುತ್ತಪ್ಪ ರೈ ಅವರ ಸಾರಥ್ಯದಲ್ಲಿ ಪುತ್ತೂರು ಕೋಟಿ – ಚೆನ್ನಯ ಕಂಬಳವು 35 ಗಂಟೆ ನಿರಂತರವಾಗಿ ನಡೆದು ದಾಖಲೆ ನಿರ್ಮಿಸಿತು. ಇಷ್ಟು ಸುದೀರ್ಘವಾದರೂ ಕಂಬಳಾಭಿಮಾನಿಗಳ ಮುಖದಲ್ಲಿ ಹುಮ್ಮಸ್ಸು ಎದ್ದು ಕಂಡಿತು ಎಂದು ಉದ್ಯಮಿ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯ ಕರುಣಾಕರ ರೈ ಸಾಜ ಅವರು ಹೇಳಿದರು.
ಶ್ರೀ ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ನಡೆದ 25ನೇ ವರ್ಷದ ಕೋಟಿ -ಚೆನ್ನಯ ಜೋಡುಕರೆ ಕಂಬಳದ ಸಮಾರೋಪದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಸ್ವರ್ಣೋದ್ಯಮಿ ಕೇಶವ ಪ್ರಸಾದ್ ಮುಳಿಯ ಮಾತನಾಡಿ, ಕಂಬಳ ಅವಿಭಜಿತ ಜಿಲ್ಲೆಯ ರೋಚಕ ಕ್ರೀಡೆ. ಶ್ರೀ ಮಹಾಲಿಂಗೇಶ್ವರ ದೇವರ ಆಶೀರ್ವಾದದಿಂದ ಮುಂದೆಯೂ ಕಂಬಳ ನಿರ್ವಿಘ್ನವಾಗಿ ನಡೆಯಲಿದೆ ಎಂದು ಆಶಯ ವ್ಯಕ್ತಪಡಿಸಿದರು.
ಪುತ್ತೂರಿನ ಕಂಬಳ ವಿಶೇಷ
ಮುಖ್ಯ ತೀರ್ಪುಗಾರ ಎಡ್ತೂರು ರಾಜೀವ್ ಶೆಟ್ಟಿ ಮಾತನಾಡಿ, ನನ್ನ ಗುರು ದಿವಾಕರ ರೈ ಅವರೂ ಸೇರಿಕೊಂಡು ಆರಂಭಿಸಿದ ಕಂಬಳವಾಗಿರುವುದರಿಂದ ಇಲ್ಲಿನ ಕಂಬಳದಲ್ಲಿ ಸ್ವಯಂ ಸೇವಕನಾಗಿ ಪಾಲ್ಗೊಳ್ಳುತ್ತಿದ್ದೆ ಎಂದರು. ಉಭಯ ಜಿಲ್ಲೆಗಳಲ್ಲಿ ನಡೆಯುವ ಎಲ್ಲ ಕಂಬಳಗಳಿಗಿಂತಲೂ ಪುತ್ತೂರಿನ ಕಂಬಳವೇ ವಿಶೇಷ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಬಹುಮಾನ ವಿತರಣೆ
ಕಂಬಳದ ತೀರ್ಪುಗಾರರು, ಮುಖ್ಯ ಸ್ವಯಂ ಸೇವಕರನ್ನು ಗೌರವಿಸಲಾಯಿತು. ಕಂಬಳ ಕೋಣಗಳ ವಿಜೇತ ಮಾಲಕರು ಹಾಗೂ ಓಡಿಸಿದವರನ್ನು ಬಹುಮಾನ ನೀಡಿ ಗೌರವಿಸಲಾಯಿತು.
ಸಂಸದೀಯ ಕಾರ್ಯದರ್ಶಿ ಹಾಗೂ ಪುತ್ತೂರು ಶಾಸಕಿ ಶಕುಂತಳಾ ಟಿ. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಜಿ.ಪಂ. ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ, ಕೋಟಿ -ಚೆನ್ನಯ ಕಂಬಳ ಸಮಿತಿಯ ಸಂಚಾಲಕ ಎನ್. ಸುಧಾಕರ ಶೆಟ್ಟಿ, ಉದ್ಯಮಿಗಳಾದ ಆನಂದ ಗೌಡ ಬೆಂಗಳೂರು, ಕೃಷ್ಣ ಶೆಟ್ಟಿ, ಗುಣಪಾಲ ಕಡಂದೇಲು, ಸುಧೀರ್ ಶೆಟ್ಟಿ, ರೋಶನ್ ರೈ ಬನ್ನೂರು, ಸುಶಾಮ್ ಶೆಟ್ಟಿ, ಅರಣ್ಯ ಇಲಾಖೆಯ ಅಧಿಕಾರಿ ಪ್ರವೀಣ್ ಶೆಟ್ಟಿ, ಪಂಜಿಗುಡ್ಡೆ ಈಶ್ವರ ಭಟ್, ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆ ವೇದಿಕೆಯಲ್ಲಿದ್ದರು.
ಕೋಟಿ -ಚೆನ್ನಯ ಕಂಬಳ ಸಮಿತಿಯ ಅಧ್ಯಕ್ಷ ಎನ್. ಚಂದ್ರಹಾಸ ಶೆಟ್ಟಿ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ದಿನೇಶ್ ಕುಲಾಲ್ ವಂದಿಸಿದರು. ತೀರ್ಪುಗಾರ ನಿರಂಜನ ರೈ ಮಠಂತಬೆಟ್ಟು ಕಾರ್ಯಕ್ರಮ ನಿರ್ವಹಿಸಿದರು.
ಅಧ್ಯಕ್ಷತೆ ಮುಂದುವರೆಯಲಿ
ಸಮಾರೋಪ ಕಾರ್ಯಕ್ರಮದ ಅತಿಥಿಗಳನ್ನು ಸ್ವಾಗತಿಸಿದ ಸಮಿತಿ ಅಧ್ಯಕ್ಷ ಎನ್. ಚಂದ್ರಹಾಸ ಶೆಟ್ಟಿ, 10 ವರ್ಷಗಳಿಂದ ಕಂಬಳ ಸಮಿತಿಯ ಅಧ್ಯಕ್ಷನಾಗಿ ಕಾರ್ಯ ನಿರ್ವಹಿಸಿದ್ದೇನೆ. ಇನ್ನು ಮುಂದೆ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಬೇರೆಯವರನ್ನು ಆಯ್ಕೆ ಮಾಡಲು ಮುತ್ತಪ್ಪ ರೈ ಅವರಲ್ಲಿ ತಿಳಿಸಿರುವುದಾಗಿ ಹೇಳಿದರು. ಹಾಜರಿದ್ದ ಗಣ್ಯರೆಲ್ಲ, ಸಮಿತಿಯ ಅಧ್ಯಕ್ಷರಾಗಿ ಚಂದ್ರಹಾಸ ಶೆಟ್ಟಿಯವರೇ ಮುಂದುವರೆಯುವಂತೆ ಆಶಯ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ
Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Viral: ಇದು ಇರುವೆಗಳ ಎಂಜಿನಿಯರಿಂಗ್ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ
Indian Cricket: ಕ್ರಿಕೆಟ್ ಜೀವನಕ್ಕೆ ಗುಡ್ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.