3ವರ್ಷಗಳಲ್ಲಿ 30 ಪತ್ರ ಬರೆದರೂ ಮೋದಿ ಉತ್ತರವೇ ಕೊಟ್ಟಿಲ್ಲ; ಅಣ್ಣಾ
Team Udayavani, Jan 22, 2018, 2:22 PM IST
ನವದೆಹಲಿ: ತಮ್ಮ ಚಳವಳಿಯ ಮೂಲಕ ಸಿಎಂ ಅರವಿಂದ್ ಕೇಜ್ರಿವಾಲ್ ರಾಜಕೀಯಕ್ಕೆ ಪ್ರವೇಶಿಸಿದ್ದಾರೆ ಎಂದು ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಅಣ್ಣಾ ಹಜಾರೆ ಅವರು ವಾಗ್ದಾಳಿ ನಡೆಸಿದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಹಂ ಎಂದು ಹೇಳಿದ್ದಾರೆ.
ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡಿದ ಅಣ್ಣಾ ಹಜಾರೆ, ನಾನು ಪ್ರಧಾನಿ ಮೋದಿಯವರಿಗೆ 30ಕ್ಕೂ ಅಧಿಕ ಪತ್ರಗಳನ್ನು ಬರೆದಿದ್ದೇನೆ, ಆದರೆ ಒಂದಕ್ಕೂ ಪ್ರತಿಕ್ರಿಯೆ ಕೊಟ್ಟಿಲ್ಲ ಎಂದು ಆರೋಪಿಸಿದರು.
ಕಳೆದ ಮೂರು ವರ್ಷಗಳಲ್ಲಿ ನಾನು 30ಕ್ಕೂ ಹೆಚ್ಚು ಪತ್ರಗಳನ್ನು ಪ್ರಧಾನಿಗೆ ಬರೆದಿದ್ದೆ. ಆದರೆ ಯಾವುದಕ್ಕೂ ಉತ್ತರ ಕೊಟ್ಟಿಲ್ಲ. ಮೋದಿಯವರಿಗೆ ಪ್ರಧಾನಿಪಟ್ಟದಿಂದ ಅಹಂ ಬಂದಿದೆ ಎಂದು ದೂರಿದರು.
ರೈತರ ವಿಚಾರದಲ್ಲಿ ಮಾರ್ಚ್ 23ರಿಂದ ಅಣ್ಣಾ ಹಜಾರೆ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿಭಟನೆಗೆ ಬೆಂಬಲ ನೀಡುವಂತೆ ಮನವಿ ಮಾಡುವ ನಿಟ್ಟಿನಲ್ಲಿ ಹಜಾರೆ ಅವರು ಮೂರು ಸಮಾವೇಶಗಳಲ್ಲಿ ಮಾತನ್ನಾಡಿದ್ದರು. ಹಿಂದೆಂದೂ ಕಂಡರಿಯದ ರೀತಿಯಲ್ಲಿ ದೊಡ್ಡ ಪ್ರಮಾಣದ ಪ್ರತಿಭಟನೆ ನಡೆಯಲಿದೆ ಎಂದು ಅಣ್ಣಾ ಸರ್ಕಾರಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?
Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ
Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್ ಅಘಾಡಿಗೆ ಮುಖಭಂಗ
Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್
MUST WATCH
ಹೊಸ ಸೇರ್ಪಡೆ
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Karnataka By Poll Results: ಜೆಡಿಎಸ್ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?
Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.