ನೌಕರರೇ, ಸಾರ್ವಜನಿಕರಿಗೆ ಗೌರವ ಕೊಡಿ
Team Udayavani, Jan 23, 2018, 10:24 AM IST
ಕಲಬುರಗಿ: ಸರಕಾರಿ ನೌಕರರು ತಮ್ಮ ಕಚೇರಿಗಳಿಗೆ ಆಗಮಿಸುವ ಸಾರ್ವಜನಿಕರಿಗೆ ಗೌರವ ಕೊಡುವ ಮೂಲಕ ನೌಕರಿ ಪ್ರೀತಿಸಬೇಕು. ಪ್ರಾಮಾಣಿಕತೆ ಮತ್ತು ನಿಸ್ವಾರ್ಥದಿಂದ ಭ್ರಷ್ಟಾಚಾರ ರಹಿತ ಸೇವೆ ಸಲ್ಲಿಸಲು ಮುಂದಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಸಲಹೆ ನೀಡಿದರು.
ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಇವುಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು. ಸಾರ್ವಜನಿಕರು ಮುಗ್ಧರು. ಅವರಿಗೆ ಸರಕಾರಿ ವ್ಯವಸ್ಥೆ ಗೊತ್ತಿರುವುದಿಲ್ಲ. ಅವರು ಕಚೇರಿಗಳಿಗೆ ಬಂದಾಗ ಅವರನ್ನು ಗೌರವದಿಂದ ಕಂಡು ಅವರ ಸಮಸ್ಯೆಗಳಿಗೆ ಉತ್ತರ ನೀಡಿದರೆ, ಅದಕ್ಕಿಂತ ಮತ್ತೂಂದು ಕಾಯಕವಿಲ್ಲ. ಜಿಲ್ಲೆಯಲ್ಲಿ ಭ್ರಷ್ಟಾಚಾರ ರಹಿತವಾದ ಆಡಳಿತ ನೀಡುವ ನಿಟ್ಟಿನಲ್ಲಿ ನಾನು ಆದ್ಯತೆ ನೀಡಿದ್ದೇನೆ. ಅದನ್ನು ಮುಂದುವರಿಸಿಕೊಂಡು ಹೋಗುವಲ್ಲಿ ನೌಕರರ ಪಾತ್ರ ಮುಖ್ಯವಾಗಿರುತ್ತದೆ ಎಂದು ಹೇಳಿದರು.
ದೇಹ ಸದೃಢವಾಗಿದ್ದರೆ ಕೆಲಸವೂ ಚಕಾಚಕ್ಕಾಗಿರುತ್ತದೆ. ಆದ್ದರಿಂದ ಸರಕಾರ ನೌಕರರ 40ರ ಆಸುಪಾಸಿನಲ್ಲಿರುವವರು ಬೆಳಗ್ಗೆ ನಿತ್ಯ ದೈಹಿಕ ಕಸರತ್ತು ಮಾಡಿ ಎಂದು ಸಲಹೆ ನೀಡಿದರು. ಇನ್ನೂ ಕ್ರೀಡಾಪಟುಗಳಂತೂ ದಿನವೂ ಶ್ರಮ ವಹಿಸಬೇಕು. ಇದರಿಂದ ಸ್ಪರ್ಧಾ ಮನೋಭಾವ ಹೆಚ್ಚುತ್ತದೆ. ಇದರಿಂದ ನಿರೀಕ್ಷಿತ ಫಲಿತಾಂಶ ಪಡೆಯಲು ಸಾಧ್ಯ ಎಂದು ಹೇಳಿದರು.
ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಮಾತನಾಡಿ, ಕ್ರೀಡೆಯಿಂದ ನಾವು ಚಟುವಟಿಕೆಯಿಂದ ಇರಲು ಸಹಾಯವಾಗುತ್ತದೆ. ಆದ್ದರಿಂದ ಎಲ್ಲ ನೌಕರರು ಕ್ರೀಡಾಸಕ್ತಿ ಬೆಳೆಸಿಕೊಳ್ಳಬೇಕು. ಇದರಿಂದ ಕಚೇರಿ ಕೆಲಸವು ತುಂಬಾ ಚೆನ್ನಾಗಿ ನಡೆಯುತ್ತದೆ. ಕ್ರೀಡೆಯಲ್ಲಿ ಸೋಲು-ಗೆಲುವು ಮುಖ್ಯವಲ್ಲ. ಸ್ಪರ್ಧೆ ಮುಖ್ಯವಾಗುತ್ತದೆ. ಕಠಿಣ ಪ್ರಯತ್ನದಿಂದ ಗುರಿ ಮುಟ್ಟಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿ ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಜೊತೆಗೂಡಿ ಖುದ್ದಾಗಿ 100 ಮೀಟರ್ ಓಟ ಓಡುವ ಮೂಲಕ ಕ್ರೀಡಾಪಟುಗಳಿಗೆ ಸ್ಪೂರ್ತಿ ನೀಡಿದರು. ಇದೇ ಸಂದರ್ಭದಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ಸ್ವೀಪ್ ಕಾರ್ಯಕ್ರಮದ ಅಂಗವಾಗಿ ಮತದಾರರ ಪ್ರಮಾಣ ವಚನ ಬೋಧಿಸಿದರು.
ಜಿಪಂ ಅಧ್ಯಕ್ಷೆ ಸುವರ್ಣಾ ಹಣಮಂತರಾವ ಮಲಾಜಿ, ಕಲಬುರಗಿ ಮಹಾನಗರ ಪಾಲಿಕೆ ಮಹಾಪೌರ ಶರಣಕುಮಾರ ಮೋದಿ, ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿ ಎನ್. ಶಶಿಕುಮಾರ, ಐಪಿಎಸ್ ಪ್ರೊಬೇಷನರಿ ಅಧಿಕಾರಿ ಮಿಥುನ್‌ಕುಮಾರ, ಹೋಂಗಾರ್ಡ್ ಕಮಾಂಡಂಟ್ ಸಂತೋಷ ಪಾಟೀಲ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ರಾಜು ಲೇಂಗಟಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ
ಆರ್.ಜಿ. ನಾಡಗೀರ, ರಾಜ್ಯ ಕ್ರೀಡಾ ಕಾರ್ಯದರ್ಶಿ ನಾಗೇಂದ್ರಪ್ಪ ಅವರಾದ, ವಾಸವದತ್ತಾ ಸಿಮೆಂಟ್ ಉಪಾಧ್ಯಕ್ಷ ರಾಜೇಶ ಕಮಿತಕರ, ಅಲ್ಟ್ರಾಟೆಕ್ ಸಿಮೆಂಟ್ ನ ಪಿ.ಸಿ.ಅಂಬಲಗಿ ಇದ್ದರು.
ಶೀಘ್ರ ವೇತನ ಪರಿಷ್ಕರಣೆ : ಈಗಾಗಲೇ ರಾಜ್ಯದಲ್ಲಿ 6ನೇ ವೇತನ ಆಯೋಗ ರಚನೆ ಆಗಿದೆ. ಫೆಬ್ರುವರಿ ಅಂತ್ಯದೊಳಗೆ ಆಯೋಗದ ವರದಿ ಸಲ್ಲಿಕೆಯಾಗಿ, ನೂತನ ವೇತನ ಜಾರಿಗೆ ಬರುವ ಸಂಭವವಿದ್ದು, ಇದೊಂದು ನೌಕರರ ಬಳಗಕ್ಕೆ ಸಿಹಿ ಸುದ್ದಿಯಾಗಿದೆ. ನಮ್ಮ ಸರಕಾರದ ಅವಧಿಯಲ್ಲಿ ನೌಕರರಿಗೆ ನೀಡಬೇಕಾಗಿರುವ ಎಲ್ಲಾ ಸೌಕರ್ಯಗಳನ್ನು ಸರಕಾರ ನೀಡುತ್ತಿದೆ. ನೌಕರರು ಖುಷಿಯಾಗಿದ್ದರೆ ಯೋಜನೆಗಳು ಸಮರ್ಪಕವಾಗಿ ಜಾರಿಗೆ ಬರಲಿವೆ.
ಡಾ| ಶರಣಪ್ರಕಾಶ ಪಾಟೀಲ ಜಿಲ್ಲಾ ಉಸ್ತುವಾರಿ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್ ಪ್ರತಿಭಟನೆ, ವಾಡಿ ಬಂದ್
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Sullia: ಬಸ್ ನಿಲ್ದಾಣದಲ್ಲಿ ಮಲಗಿದ್ದ ಪ್ರಯಾಣಿಕನ ಬ್ಯಾಗ್, ಶೂ ಕಳವು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.